Homeಮುಖಪುಟಬಂಗಾಳ ಗಲಭೆ: ಬಿಜೆಪಿ ನಾಯಕರ ವಿರುದ್ಧ ಯಾವುದೇ ಬಂಧನ ಬೇಡ ಎಂದ ಸುಪ್ರೀಂ

ಬಂಗಾಳ ಗಲಭೆ: ಬಿಜೆಪಿ ನಾಯಕರ ವಿರುದ್ಧ ಯಾವುದೇ ಬಂಧನ ಬೇಡ ಎಂದ ಸುಪ್ರೀಂ

ಸಾರ್ವಜನಿಕ ಸೇವಕರ ಮೇಲೆ ಹಲ್ಲೆ ಸೇರಿದಂತೆ ಜಾಮೀನು ರಹಿತ ಪ್ರಕರಣಗಳ ವಿಭಾಗಗಳ ಅಡಿಯಲ್ಲಿ ಬಿಜೆಪಿ ನಾಯಕರ ಮೇಲೆ ಎಫ್‌ಐಆರ್ ದಾಖಲಾಗಿದೆ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳಲ್ಲಿ ಮುಕುಲ್ ರಾಯ್ ಮತ್ತು ಸಂಸದ ಕೈಲಾಶ್ ವಿಜಯವರ್ಗಿಯಾ ಸೇರಿದಂತೆ ಐವರು ಬಿಜೆಪಿ ಮುಖಂಡರಿಗೆ ಸುಪ್ರೀಂಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಮುಂದಿನ ವಿಚಾರಣೆಯ ತನಕ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಪಶ್ಚಿಮ ಬಂಗಾಳ ಪೊಲೀಸರಿಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ನ್ಯಾಯಪೀಠವು ಬಿಜೆಪಿ ನಾಯಕರು ಸಲ್ಲಿಸಿದ ಐದು ಪ್ರತ್ಯೇಕ ಅರ್ಜಿಗಳ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೋರಿದೆ.

ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಆದೇಶದ ಮೇರೆಗೆ ಪಶ್ಚಿಮ ಬಂಗಾಳ ಪೊಲೀಸರು ನಮ್ಮನ್ನು ಗುರಿಯಾಗಿಸಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಆರು ನಾಯಕರು ಸುಪ್ರೀಂಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

ಬಂಗಾಳದ ಸಿಲಿಗುರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರಾದ ಕೈಲಾಶ್ ವಿಜಯವರ್ಗಿಯಾ, ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್, ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಸೇರಿದಂತೆ ಇತರ ಬಿಜೆಪಿ ನಾಯಕರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಅಡಿಯಲ್ಲಿ, ಸಾರ್ವಜನಿಕ ಸೇವಕರ ಮೇಲೆ ಹಲ್ಲೆ ಸೇರಿದಂತೆ ಜಾಮೀನು ರಹಿತ ಪ್ರಕರಣಗಳ ವಿಭಾಗಗಳ ಅಡಿಯಲ್ಲಿ ಬಿಜೆಪಿ ನಾಯಕರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಪಶ್ಚಿಮ ಬಂಗಾಳದ ಸರ್ಕಾರದ ವಿರುದ್ಧ ಬಿಜೆಪಿಯು ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿತ್ತು. ಇದರಲ್ಲಿ ರಾಷ್ಟ್ರೀಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು. ಇಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು.

ಪಶ್ಚಿಮ ಬಂಗಾಳ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಲ್ಲಾ ಪ್ರಕರಣಗಳನ್ನು ಬೇರೆ ಯಾವುದಾದರೂ ಸ್ವತಂತ್ರ ತನಿಖಾ ಸಂಸ್ಥೆಗೆ ವರ್ಗಾಯಿಸಲು ಬಿಜೆಪಿ ಸಂಸದರಾದ ಅರ್ಜುನ್ ಸಿಂಗ್ ಮತ್ತು ಕೈಲಾಶ್ ವಿಜಯವರ್ಗಿಯಾ ಕೋರಿದ್ದಾರೆ.

ಇತರ ಇಬ್ಬರು ಬಿಜೆಪಿ ನಾಯಕರಾದ ಸೌರವ್ ಸಿಂಗ್ ಮತ್ತು ಪವನ್ ಕುಮಾರ್ ಸಿಂಗ್ ಅವರು ರಾಜ್ಯದಲ್ಲಿ ತಮ್ಮ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ ತಮ್ಮನ್ನು ರಕ್ಷಿಸಬೇಕು ಎಂದು ಸುಪ್ರೀಂಕೋರ್ಟ್ ಮೊರೆಹೋಗಿದ್ದಾರೆ. ಸದ್ಯ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯ ತನಕ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಪಶ್ಚಿಮ ಬಂಗಾಳ ಪೊಲೀಸರಿಗೆ ನಿರ್ದೇಶನ ನೀಡಿದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ ಪ್ರವಾಸ: ಬಿಜೆಪಿ ಅಧಿಕಾರಕ್ಕೆ ತರಲು ಪಣತೊಟ್ಟ ಅಮಿತ್ ಶಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...