Homeಮುಖಪುಟರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

- Advertisement -
- Advertisement -

ರಾಜ್ಯಕ್ಕೆ ಮರಳುವ ಬಂಗಾಳದ ವಲಸೆ ಕಾರ್ಮಿಕರು ಮಾಸಿಕ 5 ಸಾವಿರ ರೂಪಾಯಿ ಧನ ಸಹಾಯ ಪಡೆಯಲಿದ್ದಾರೆ ಎಂದು ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆ.18) ಘೋಷಿಸಿದ್ದಾರೆ.

ರಾಜ್ಯ ಆಡಳಿತ ಕೇಂದ್ರವಾದ ನಬನ್ನಾದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಮಮತಾ ಬ್ಯಾನರ್ಜಿ, “ಇತರ ರಾಜ್ಯಗಳಿಂದ ಪಶ್ಚಿಮ ಬಂಗಾಳಕ್ಕೆ ಹಿಂದಿರುಗುವ ವಲಸೆ ಕಾರ್ಮಿಕರಿಗೆ ಮುಂದಿನ 12 ತಿಂಗಳವರೆಗೆ ಮಾಸಿಕ 5,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುವುದು ಮತ್ತು ‘ಖಾದ್ಯ ಸತಿ’ ಮತ್ತು ‘ಸ್ವಸ್ಥ ಸತಿ’ ನಂತಹ ಸಾಮಾಜಿಕ ಪ್ರಯೋಜನಗಳನ್ನು ಅವರು ಪಡೆಯಬಹುದು ಎಂದು ಹೇಳಿದ್ದಾರೆ.

ಈ ಸೌಲಭ್ಯಗಳನ್ನು ಜಾರಿಗೆ ತರಲು ‘ಶ್ರಮಶ್ರೀ’ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

“ಈ ಯೋಜನೆಯು ಬಂಗಾಳದ ವಲಸೆ ಕಾರ್ಮಿಕರಿಗೆ ಮಾತ್ರ ಅನ್ವಯವಾಗುತ್ತದೆ. ರಾಜ್ಯಕ್ಕೆ ಮರಳುವವರು ಪ್ರಯಾಣ ಸಹಾಯದೊಂದಿಗೆ 5,000 ರೂ.ಗಳ ಒಂದು ಮೊದಲ ಪಾವತಿಯನ್ನು ಪಡೆಯಲಿದ್ದಾರೆ. ಇದು ಪುನರ್ವಸತಿ ಭತ್ಯೆಯಾಗಿದೆ. ಅವರಿಗೆ ಹೊಸ ಕೆಲಸದ ವ್ಯವಸ್ಥೆ ಮಾಡುವವರೆಗೆ, ಕನಿಷ್ಠ ಒಂದು ವರ್ಷದವರೆಗೆ ತಿಂಗಳಿಗೆ 5,000 ರೂ.ಗಳ ಆರ್ಥಿಕ ಸಹಾಯವನ್ನು ಸಹ ನೀಡಲಾಗುವುದು” ಎಂದು ಮಮತಾ ಬ್ಯಾರ್ಜಿ ತಿಳಿಸಿದ್ದಾರೆ.

ಈ ಯೋಜನೆಗೆ ಪಶ್ಚಿಮ ಬಂಗಾಳ ಕಾರ್ಮಿಕ ಇಲಾಖೆ ನೋಡಲ್ ಇಲಾಖೆಯಾಗಿದೆ. ರಾಜ್ಯ ಸರ್ಕಾರದ ‘ಉತ್ಕರ್ಷ್ ಬಾಂಗ್ಲಾ’ ಯೋಜನೆಯ ಮೂಲಕ ವಲಸೆ ಕಾರ್ಮಿಕರಿಗೆ ಕೌಶಲ್ಯ ತರಬೇತಿಯನ್ನೂ ನೀಡಲಾಗುವುದು ಎಂದು ಹೇಳಿದ್ದಾರೆ.

“ರಾಜ್ಯಕ್ಕೆ ಮರಳುವ ಕಾರ್ಮಿಕರ ಕೌಶಲ್ಯಗಳನ್ನು ನಾವು ಪರಿಶೀಲಿಸುತ್ತೇವೆ. ಅವರಲ್ಲಿ ಕೌಶಲ್ಯವಿದ್ದರೆ ಅದಕ್ಕೆ ತಕ್ಕ ತರಬೇತಿ ನೀಡುತ್ತೇವೆ. ಅಲ್ಲದೆ, ಉದ್ಯೋಗವನ್ನೂ ಒದಗಿಸುತ್ತೇವೆ. ಜೊತೆಗೆ ‘ಉದ್ಯೋಗ ಕಾರ್ಡ್’ಗಳನ್ನು ವಿತರಿಸುತ್ತೇವೆ. ‘ಕರ್ಮಶ್ರೀ’ ಯೋಜನೆಯಡಿ ಇದುವರೆಗೆ 78 ಲಕ್ಷ ಉದ್ಯೋಗ ಕಾರ್ಡ್‌ಗಳನ್ನು ನೀಡಲಾಗಿದೆ” ಎಂದು ಸಿಎಂ ತಿಳಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ಮನೆ ಇಲ್ಲದಿದ್ದರೆ ಸಮುದಾಯ ತರಬೇತಿ ಕೇಂದ್ರಗಳಲ್ಲಿ ಅವರಿಗೆ ವಸತಿ ಒದಗಿಸಲಾಗುವುದು. ಅವರ ಮಕ್ಕಳಿಗೆ ಶಾಲಾ ಪ್ರವೇಶ ವ್ಯವಸ್ಥೆ ಮಾಡಲಾಗುವುದು. ಇದಲ್ಲದೆ ವಲಸೆ ಕಾರ್ಮಿಕರು ‘ಕನ್ಯಾಶ್ರೀ’ ಮತ್ತು ‘ಶಿಕ್ಷಶ್ರೀ’ಯ ಯೋಜನೆಗಳ ಪ್ರಯೋಜನಗಳನ್ನು ಕೂಡ ಪಡೆಯಲಿದ್ದಾರೆ ಎಂದಿದ್ದಾರೆ.

“ಬಂಗಾಳದಿಂದ ವಲಸೆ ಹೋಗಿರುವ 22.40 ಲಕ್ಷ ಕಾರ್ಮಿಕರಿಗೆ ‘ಶ್ರಮಶ್ರೀ’ ಯೋಜನೆಯ ಪ್ರಯೋಜನಗಳು ಸಿಗಲಿವೆ. ಅವರು ‘ಶ್ರಮಶ್ರೀ’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡರೆ, ಐ-ಕಾರ್ಡ್ ನೀಡಲಾಗುವುದು. ಇದರ ಮೂಲಕ ಅವರು ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಪಡೆಯುತ್ತಾರೆ” ಎಂದು ಮಾಹಿತಿ ನೀಡಿದ್ದಾರೆ.

ಕಳೆದ ಕೆಲ ದಿನಗಳಲ್ಲಿ, ಇತರ ರಾಜ್ಯಗಳಲ್ಲಿ ಚಿತ್ರಹಿಂಸೆಗೊಳಗಾದ 2,700 ಕುಟುಂಬಗಳು ಬಂಗಾಳಕ್ಕೆ ಮರಳಿವೆ . ರಾಜ್ಯ ಸರ್ಕಾರವು 10,000ಕ್ಕೂ ಹೆಚ್ಚು ಜನರನ್ನು ಕರೆತಂದಿದೆ ಎಂದು ಸಿಎಂ ವಿವರಿಸಿದ್ದಾರೆ.

ಬಿಜೆಪಿಯ ಹೆಸರನ್ನು ಉಲ್ಲೇಖಿಸದೆ, ‘ಡಬಲ್ ಎಂಜಿನ್ ಸರ್ಕಾರ’ ಆಳ್ವಿಕೆ ನಡೆಸುತ್ತಿರುವ ವಿವಿಧ ರಾಜ್ಯಗಳಲ್ಲಿ ಬಂಗಾಳಿ ಭಾಷೆ ಮತ್ತು ಬಂಗಾಳಿ ಗುರುತಿನ ಮೇಲೆ ದಾಳಿ ನಡೆಸಲಾಗುತ್ತಿದೆ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಯಾರಾದರೂ ಬಂಗಾಳಿ ಮಾತನಾಡಿದರೆ, ಅವರನ್ನು ಅಪರಾಧಿ ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ. ಸಿಕ್ಕ ಸಿಕ್ಕವರನ್ನು ಬಾಂಗ್ಲಾದೇಶಕ್ಕೆ ತಳ್ಳಲಾಗುತ್ತಿದೆ. ಎಲ್ಲೋ ಅವರನ್ನು ಜೈಲಿಗೆ ಹಾಕಲಾಗುತ್ತಿದೆ. ಎಲ್ಲೋ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಕಿರುಕುಳ ನೀಡಲಾಗುತ್ತಿದೆ” ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಸುಮಾರು 22 ಲಕ್ಷ ವಲಸೆ ಕಾರ್ಮಿಕರಿಗೆ ಇತರ ರಾಜ್ಯಗಳಲ್ಲಿ ಬಂಗಾಳಿ ಮಾತನಾಡಿದಕ್ಕಾಗಿ ಕಿರುಕುಳ ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇತರ ರಾಜ್ಯಗಳ ಸುಮಾರು 1.5 ಕೋಟಿ ಜನರು ಕೆಲಸ ಮಾಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಇದೇ ವೇಳೆ ಹೇಳಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ | ‘ಇಂಡಿಯಾ’ ಅಭ್ಯರ್ಥಿಯಾಗಿ ನಿವೃತ್ತ ನ್ಯಾ. ಬಿ ಸುದರ್ಶನ್ ರೆಡ್ಡಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...