Homeಮುಖಪುಟಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

'ನಾನು ಬಂಗಾಳದ ಮಗಳು. 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೆ ಪ್ರತಿ ಜಿಲ್ಲೆ, ಪ್ರತಿ ವಿಧಾನಸಭೆ ಸ್ಥಾನ ತಿಳಿದಿದೆ. ನೀವು ಏನೇ ಮಾಡಿದರೂ ನಾನು ನಿಮ್ಮ ಪಿತೂರಿಯನ್ನು ಒಡೆಯುತ್ತೇನೆ'

- Advertisement -
- Advertisement -

ಚುನಾವಣಾ ಆಯೋಗ ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ದಿನಾಂಕಗಳನ್ನು  ಘೋಷಿಸಿದ ಬೆನ್ನಲ್ಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಬಂಗಾಳದಲ್ಲಿ ಎಂಟು ಹಂತದ ಮತದಾನವು ಕೇಂದ್ರ ಸರ್ಕಾರದ ಆಡಳಿತರೂಢ ಬಿಜೆಪಿಯ “ಪಿತೂರಿಯ” ಭಾಗವಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ಮೇರೆಗೆ ಈ ತೀರ್ಮಾನ ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ’ಬಿಜೆಪಿ ಪಕ್ಷದ ಮೂಲಗಳಿಂದ, ಅವರು ಬಯಸಿದ ಮತದಾನ ದಿನಾಂಕಗಳ ಪಟ್ಟಿಯನ್ನು ನಾನು ನೋಡಿದ್ದೇನೆ. ಈಗ ಚುನಾವಣಾ ಆಯೋಗದ ಪಟ್ಟಿಯನ್ನು ನೋಡಿದ್ದೇನೆ. ಎರಡು ಒಂದೇ ಆಗಿವೆ. ನನಗೆ ಆಘಾತವಾಗಿದೆ’ ಎಂದಿದ್ದಾರೆ.

ಮಾರ್ಚ್ 27 ರಿಂದ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಪ್ರಾರಂಭವಾಗಲಿದೆ. ಆದರೆ ಸುದೀರ್ಘ 8 ಹಂತಗಳಲ್ಲಿ ಮತದಾನ ನಡೆಯಲಿದೆ. ಇಲ್ಲಿಗೆ ಸುಮಾರು 33 ದಿನಗಳ ನಂತರ ಮೇ 2ಕ್ಕೆ ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಇದರಿಂದ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾನು ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿ. ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ತದನಂತರ ಮೋದಿ ಮತ್ತು ಶಾ ನೀವು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಬಲ ಹೋರಾಟವನ್ನು ವೀಕ್ಷಿಸುತ್ತೀರಿ. ನಾವು ಅದರಲ್ಲೂ ಹೋರಾಡುತ್ತೇವೆ’ ಎಂದಿದ್ದಾರೆ.

ಬಂಗಾಳದಲ್ಲಿ 2016 ರ ರಾಜ್ಯ ಚುನಾವಣೆಯಲ್ಲಿ ಮತ್ತು 2019 ರ ರಾಷ್ಟ್ರೀಯ ಚುನಾವಣೆಯಲ್ಲಿ ಏಳು ಹಂತಗಳಲ್ಲಿ ಮತದಾನ ನಡೆದಿದೆ. ಸಂಭವನೀಯ ಹಿಂಸಾಚಾರದ ಆತಂಕ ಹೆಚ್ಚಿನ ಮತದಾನದ ಹಂತಗಳಿಗೆ ಕಾರಣ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮಮತಾ ಬ್ಯಾನರ್ಜಿ ಮತದಾನದ ವೇಳಾಪಟ್ಟಿಯನ್ನು ಬಿಜೆಪಿ ನಿರ್ದೇಶಿಸುತ್ತಿದೆ ಎಂದು ಆರೋಪಿಸಿದ್ದಾರೆ. “ಒಂದೇ ದಿನದಲ್ಲಿ ಸರಿಸಮ ಒಂದೇ ಸಂಖ್ಯೆಯ ಕ್ಷೇತ್ರಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದೇ ದಿನದಲ್ಲಿ ಮತದಾನ ನಡೆಯುತ್ತಿದೆ. ಆದರೆ ಬಂಗಾಳಕ್ಕೆ ಮಾತ್ರ 8 ಹಂತಗಳ ಮತದಾನ ನೀಡಿ ಏಕೆ ಅವಮಾನಿಸಲಾಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್ ತಿವಾರಿ

ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ಚುನಾವಣೆ ಮುಗಿದ ಬಳಿಕ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸಲು ಮೋದಿ ಮತ್ತು ಶಾ ಅವರಿಗೆ ಸಮಯವಿದೆಯೇ ಎಂದು ನೋಡಿಕೊಂಡು ರಾಜ್ಯದ ಜಿಲ್ಲೆಗಳಲ್ಲಿ ಚುನಾವಣೆ ನಿಗದಿಪಡಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ನಾನು ಬಂಗಾಳದ ಮಗಳು. ನಾನು 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೆ ಪ್ರತಿ ಜಿಲ್ಲೆ, ಪ್ರತಿ ವಿಧಾನಸಭೆ ಸ್ಥಾನ ತಿಳಿದಿದೆ. ನೀವು ಏನೇ ಮಾಡಿದರೂ ನಾನು ನಿಮ್ಮ ಪಿತೂರಿಯನ್ನು ಒಡೆಯುತ್ತೇನೆ. ಬಂಗಾಳದ ಜನರು ಬಂಗಾಳವನ್ನು ಆಳುತ್ತಾರೆ. ಬಂಗಾಳದ ಜನರು ಎಂಟು ಹಂತದ ಮತದಾನದ ಅವಮಾನಕ್ಕೆ ಪ್ರತೀಕಾರ ತೀರಿಸುತ್ತಾರೆ “ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ (ಫೆ.26) ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ, ಅಸ್ಸಾಂನಲ್ಲಿ 3 ಹಂತದಲ್ಲಿ ಮತ್ತು ಕೇರಳ, ತಮಿಳುನಾಡು ಹಾಗೂ ಪುದುಚೇರಿಗಳಲ್ಲಿ ಒಂದೇ ದಿನ ಮತದಾನ ನಡೆಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ’ಪ್ರಧಾನಿ ಒಬ್ಬ ದಂಗಾಬಾಜ್ ಮತ್ತು ರಾಕ್ಷಸ’: ಬಿಜೆಪಿ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...