Homeಕರ್ನಾಟಕಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

ಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

’ಕೇವಲ ಒಂದು ಸಿನೆಮಾಗೆ ತೆರಿಗೆ ವಿನಾಯಿತಿ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು’

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ನಟ, ನಿರ್ಮಾಪಕ ರಕ್ಷಿತ್‌ ಶೆಟ್ಟಿ ಅವರ ಚಾರ್ಲಿ 777 ಸಿನಿಮಾವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿ, ಭಾವುಕರಾಗಿದ್ದರು. ಇದಾದ ಬಳಿಕ ಈ ಸಿನಿಮಾಗೆ ಶೇಕಡಾ 100 ರಷ್ಟು ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ, “ಕನ್ನಡ ನೆಲದಲ್ಲಿ ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಎಲ್ಲಾ ಸಿನಿಮಾಗಳಿಗೂ ಹಿಂದೆ ಇದ್ದಂತೆ ತೆರಿಗೆ ವಿನಾಯಿತಿ ನೀಡಿ” ಎಂದು ಆಗ್ರಹಿಸಿದ್ದಾರೆ.

ನಿರ್ದೇಶಕ ಮಂಸೋರೆ ಅವರ ಪತ್ರದ ವಿವರ ಹೀಗಿದೆ.

“ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ನಮಸ್ಕಾರ. ತಾವು ಕನ್ನಡ ಸಿನೆಮಾ, ಚಾರ್ಲಿ 777 ಗೆ ನಿರ್ಮಾಪಕರ ಕೋರಿಕೆಯ ಮೇರೆಗೆ ಸದರಿ ಸಿನೆಮಾಗೆ 100% ಜಿಎಸ್‌ಟಿ ಇಂದ ವಿನಾಯಿತಿ ಕೊಟ್ಟಿರುವುದು ತುಂಬಾ ಸಂತೋಷದ ವಿಷಯ. ಕನ್ನಡ ಸಿನೆಮಾಗಳ ಏಳಿಗೆಗೆ ಇದು ಅತ್ಯವಶ್ಯಕ. ಜೊತೆಗೆ ಈ ಹಿಂದೆ ಯಾವುದೋ ಅನ್ಯ ಭಾಷೆಯ ಸಿನೆಮಾಗು ತಾವು 100% ಜಿಎಸ್‌ಟಿ ತೆರಿಗೆ ವಿನಾಯಿತಿ ಕೊಟ್ಟಿದ್ದೀರಿ ಎಂದು ಯಾವುದೋ ಸುದ್ದಿ ಪತ್ರಿಕೆಯಲ್ಲಿ ಓದಿದ ನೆನಪು. ಈಗ ಈ ಪತ್ರವನ್ನು ತಮಗೆ ಬರೆಯುತ್ತಿರುವುದರ ಕಾರಣವನ್ನು ಮೊದಲಿಗೆ ತಮಗೆ ವಿವರಿಸುತ್ತೇನೆ”.

“ತಾವು ಮುಖ್ಯಮಂತ್ರಿ ಆಗುವ ಮೊದಲು, ತಮ್ಮ ಬಿಜೆಪಿ ಸರ್ಕಾರ ಬರುವ ಮೊದಲು ಕನ್ನಡದ ಸಿನೆಮಾಗಳಿಗೆ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ (ಹೊರ ರಾಜ್ಯದಲ್ಲಿ ಚಿತ್ರೀಕರಣವಾಗುವುದಾದರೆ ಅದಕ್ಕೆ ಸೂಕ್ತ ಕಾರಣ ಕೊಡಬೇಕಿತ್ತು) ಎಲ್ಲಾ ಕನ್ನಡ ಸಿನೆಮಾಗಳಿಗೆ 100% ತೆರಿಗೆ ವಿನಾಯಿತಿ ಇತ್ತು ಎಂಬ ವಿಷಯ ತಮಗೆ ಗೊತ್ತಿತ್ತೇ..? ಕನ್ನಡದ ಸಿನೆಮಾಗಳಿಗೆ ಇದ್ದ ಈ ವಿನಾಯಿತಿಯನ್ನು ಕನ್ನಡಿಗರ ಕೈಯಿಂದ (ಕನ್ನಡದ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆದು ಕಿತ್ತುಕೊಂಡಿದ್ದು) ನಿಮ್ಮದೇ ಆದ ಬಿಜೆಪಿ ಸರ್ಕಾರ ಎಂಬುದು ನಿಮಗೆ ತಿಳಿದಿದೆಯೇ..? ಅದು ಜಿಎಸ್‌ಟಿ ಎಂಬ ಹೆಮ್ಮಾರಿಯ ಹೆಸರಲ್ಲಿ ಎಂಬುದು ತಮಗೆ ತಿಳಿದಿದೆಯೇ..?”

ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

“ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ಕನ್ನಡ ಸಿನೆಮಾಗಳ ಮೇಲೆ ಮನರಂಜನಾ ತೆರಿಗೆ ವಿಧಿಸಲು ಹೋದಾಗ, ನಮ್ಮೆಲ್ಲರ ಪಾಲಿನ ಅಣ್ಣಾವ್ರು, ಡಾ. ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗವನ್ನೇ ತ್ಯಜಿಸಿ ತಮ್ಮ ಹಳ್ಳಿಗೆ ಹೋಗುವ ನಿರ್ಧಾರ ಮಾಡುತ್ತಾರೆ, ಆಗ ಮುಖ್ಯಮಂತ್ರಿಗಳೇ ಅಣ್ಣಾವ್ರ ಮನೆಗೆ ಹೋಗಿ ಅವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮನವೊಲಿಸಿ ಅವರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒಪ್ಪಿಸುತ್ತಾರೆ ಹಾಗು ತೆರಿಗೆ ವಿಧಿಸುವ ತಮ್ಮ ನಿಲುವನ್ನು ಹಿಂತೆಗೆದುಕೊಳ್ಳುತ್ತಾರೆ. (ಹಿರಿಯ ಪತ್ರಕರ್ತರಾದ ಬಿ.ವಿ.ವೈಕುಂಠರಾಜು ರವರ ಸಿನೆಮಾತು ಪುಸ್ತಕದಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ) ಅದೇ ಮುಂದೆ ಕನ್ನಡ ಹಾಗೂ ಕನ್ನಡ ನೆಲದಲ್ಲಿ ತಯಾರಾಗುವ ಎಲ್ಲಾ ಸಿನೆಮಾಗಳಿಗೂ ೧೦೦% ತೆರಿಗೆ ವಿನಾಯಿತಿ ನೀಡಲಾಗುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂತಹ ಮಹಾನುಭಾವರ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದ ಸೌಲಭ್ಯವನ್ನು ಕಿತ್ತುಕೊಂಡಿದ್ದು ಜಿಎಸ್‌ಟಿ ನೆಪದಲ್ಲಿ ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿದೆಯೇ..?”

“ಈಗ ವಾಪಸ್ಸು ನಿಮ್ಮ ಆಡಳಿತದ ಸರ್ಕಾರದ ವಿಷಯಕ್ಕೆ ಬರುವುದಾದರೆ, ಶ್ವಾನದ ಕಾಳಜಿಯಿಂದ ತಾವು ಆ ‘ಒಂದು’ ಕನ್ನಡ ಸಿನೆಮಾಗೆ ಮಾತ್ರ 100% ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಲು ಆ ಹಣವನ್ನು ತಾವು ತಮ್ಮ ಜೇಬಿನಿಂದ ನೀಡುತ್ತಿದ್ದೀರ ಎಂದು ತಿಳಿಯಲು ಡಾ.ಬಿ.ಆರ್.ಅಂಬೇಡ್ಕರ್ ಸರ್ ಬರೆದಿರುವ, ಸಾಂವಿಧಾನಿಕ ಹಕ್ಕನ್ನು ಪಡೆದಿರುವ ಕರ್ನಾಟಕದ ಪ್ರಜೆಗಳಾಗಿ ಕೇಳಿತ್ತಿದ್ದೇನೆ, ದಯವಿಟ್ಟು ತಿಳಿಸಿ”.

“ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವಾಗುತ್ತಿರುವ ಅನೇಕ ಕನ್ನಡ ಚಿತ್ರಗಳು ಕನ್ನಡ ನೆಲದಲ್ಲಿ ತಯಾರಾಗುತ್ತಿವೆ. ಉದಾಹರಣೆಗೆ ಪೆಡ್ರೋ, ಕೋಳಿತಾಲ್, ಡೊಳ್ಳು, ದಾರಿ ಯಾವುದಯ್ಯ ವೈಕುಂಟಕ್ಕೆ, ಅಮೃತಮತಿ, ನೀಲಿ ಹಕ್ಕಿ ಇನ್ನೂ ಬಹಳಷ್ಟು ಸಿನೆಮಾ ಇದೆ. ಜೊತೆಗೆ ಅಂತರ್ರಾಷ್ಟ್ರೀಯ ಚಿತ್ರೋತ್ಸವಕ್ಕೆ ಹೋಗದಿದ್ದರೂ ಸಹ, ಅನೇಕ ಕನ್ನಡ ಸಿನೆಮಾಗಳು ಅತ್ತ್ಯುತ್ತಮವಾದ ಮಾನವೀಯ ಗುಣವುಳ್ಳ ಸಿನೆಮಾಗಳು ಕಳೆದ ನಾಲ್ಲೈದು ವರ್ಷಗಳಲ್ಲೇ ಸಾಕಷ್ಟಿವೆ, ಅದು ಯಾವುದಕ್ಕೂ ನೀಡದ 100% ತೆರಿಗೆ ವಿನಾಯಿತಿ ಕೇವಲ ಒಂದು ಸಿನೆಮಾಗೆ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು ಎಂದು ತಮಗೆ ಮನವರಿಕೆ ಮಾಡಲು ಇಚ್ಚಿಸುತ್ತೇನೆ”.

“ಚಾರ್ಲಿ ಸಿನೆಮಾದ ನಿರ್ಮಾಪಕರೂ ಸೇರಿದಂತೆ ಕನ್ನಡದ ಯಾರೊಬ್ಬ ನಿರ್ಮಾಪಕರು ಅಣ್ಣಾವ್ರ ಆಶಯ ಮೀರಿ, ಕನ್ನಡ ಚಿತ್ರರಂಗವನ್ನು ಹೊರಗಿಟ್ಟು, ಸ್ವಾರ್ಥಿಗಳಂತೆ ತಮ್ಮ ಸಿನೆಮಾಗೆ ಮಾತ್ರ 100% ತೆರಿಗೆ ವಿನಾಯಿತಿ ಕೊಡಬೇಕೆಂದು ಹಂಬಲಿಸಲಾರರು, ತಮ್ಮಲ್ಲಿ ಬೇಡಿಕೊಳ್ಳಲಾರರು ಎಂದು ನನ್ನ ಬಲವಾದ ನಂಬಿಕೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರುವುದರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು ಡಾ. ರಾಜ್‌ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ, ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನೆಮಾಗೂ ಈ ಹಿಂದೆ ಇದ್ದಂತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ” ಎಂದಿದ್ದಾರೆ.

ಪತ್ರದ ಜೊತೆಗೆ ಚಾರ್ಲಿ 777 ಸಿನಿಮಾಗೆ ನೀಡಿರುವ ತೆರಿಗೆ ವಿನಾಯಿತಿಯ ಆದೇಶ ಪತ್ರವನ್ನು ಮಂಸೋರೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ‘ಚಾರ್ಲಿ 777’ ಭಾವುಕತೆಯಾಚೆಗೆ ತೆರೆದುಕೊಳ್ಳದ ಸರಳರೇಖೆಯ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...