Homeಕರ್ನಾಟಕಬೆಂಗಳೂರು: 15 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ; ಶಿಕ್ಷಕ ಅರೆಸ್ಟ್‌

ಬೆಂಗಳೂರು: 15 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ; ಶಿಕ್ಷಕ ಅರೆಸ್ಟ್‌

- Advertisement -
- Advertisement -

ಸುಮಾರು ಮೂರು ತಿಂಗಳ ಕಾಲ ಕನಿಷ್ಠ 15 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ಶುಕ್ರವಾರ ವರದಿ ಮಾಡಿದೆ.

54 ವರ್ಷದ ಆಂಜನಪ್ಪ, ನಗರದ ಹೆಬ್ಬಾಳ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿದ್ದನು. ತರಗತಿ ವೇಳೆ ಮತ್ತು ಊಟದ ವಿರಾಮದ ಸಮಯದಲ್ಲಿ ವಿದ್ಯಾರ್ಥಿಗಳನ್ನು ಅನುಚಿತವಾಗಿ ಈತ ಸ್ಪರ್ಶಿಸುತ್ತಿದ್ದನು. ಕೆಲವು ವಿದ್ಯಾರ್ಥಿಗಳಿಗೆ ಚುಂಬಿಸುತ್ತಿದ್ದನು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳು ಆಂಜನಪ್ಪನ ವರ್ತನೆಯ ಬಗ್ಗೆ ಪೋಷಕರಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ದಿಲೀಪ್ ಕುಮಾರ್ ಕೆ.ಎಚ್. ಮಾಹಿತಿ ನೀಡಿದ್ದಾರೆ.

ಮಕ್ಕಳು ತಮ್ಮ ಪೋಷಕರಲ್ಲಿ ವಿಷಯ ತಿಳಿಸಿದ ಬಳಿಕ ಶಾಲೆಯ ಮುಖ್ಯೋಪಾಧ್ಯಾಯರ ಬಳಿ ವಿಷಯ ತಲುಪಿತು. ಅವರು ಆರೋಪದ ಬಗ್ಗೆ ತನಿಖೆ ಆರಂಭಿಸಿದ್ದರು.

ಆಂತರಿಕ ವಿಚಾರಣೆಯಲ್ಲಿ ಆರೋಪಗಳು ಪ್ರಾಥಮಿಕವಾಗಿ ನಿಜವೆಂದು ತೀರ್ಮಾನಿಸಿದ ನಂತರ ಮುಖ್ಯೋಪಾಧ್ಯಾಯರು ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

“ದೈಹಿಕ ಶಿಕ್ಷಕ ಆಂಜನಪ್ಪ ಎರಡರಿಂದ ಮೂರು ತಿಂಗಳ ಅವಧಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ” ಎಂದು ಇನ್‌ಸ್ಪೆಕ್ಟರ್‌‌ ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ವಿದ್ಯಾರ್ಥಿಗಳ ಹಲವಾರು ದೂರುಗಳ ನಡುವೆ, ಮುಖ್ಯೋಪಾಧ್ಯಾಯರು ತನಿಖೆ ನಡೆಸಿದ್ದರು. ಅಂತಿಮವಾಗಿ ಮಂಗಳವಾರ ರಾತ್ರಿ ಪೊಲೀಸರನ್ನು ಸಂಪರ್ಕಿಸಿದ್ದರು.

ಬುಧವಾರ ಶಿಕ್ಷಕನನ್ನು ಬಂಧಿಸಲಾಗಿದೆ. ಲೈಂಗಿಕ ದೌರ್ಜನ್ಯ ಮತ್ತು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾನೂನು ಹಾಗೂ ಐಪಿಸಿ ಸೆಕ್ಷನ್‌ 354 ಅಡಿಯಲ್ಲಿ ಪೊಲೀಸರು ಆತನ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಶಿಕ್ಷಕನೇ ಕೊಂದಿದ್ದ ಘಟನೆ ಇತ್ತೀಚೆಗೆ ವರದಿಯಾಗಿತ್ತು.

ಶಿಕ್ಷಕ ಕಾಂತರಾಜು ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಆರೋಪಿ ಕಾಂತರಾಜು ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದು, ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ. ಬಾಲಕಿಯನ್ನು ಆರೋಪಿಯು ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು, ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾಗಿ ತಿಳಿದು ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ಶಿಕ್ಷಕ ಇಂತಹದ್ದೇ ಅಪರಾಧದಲ್ಲಿ ಸಿಕ್ಕಿಬಿದ್ದಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...