Homeಕರ್ನಾಟಕಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಹೊಡೆದ ಆರೋಪಕ್ಕೆ ಒಳಗಾದ 16 ವರ್ಷದ ಬಾಲಕ ಆತ್ಮಹತ್ಯೆ

ಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಹೊಡೆದ ಆರೋಪಕ್ಕೆ ಒಳಗಾದ 16 ವರ್ಷದ ಬಾಲಕ ಆತ್ಮಹತ್ಯೆ

- Advertisement -
- Advertisement -

ಪರೀಕ್ಷೆಯ ವೇಳೆ ಕಾಪಿ ಹೊಡೆದಿದ್ದಾರೆ ಎಂದು ಆರೋಪಿಸಿದ್ದಕ್ಕೆ ಮನನೊಂದು 10 ನೇ ತರಗತಿ ವಿದ್ಯಾರ್ಥಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತ 16 ವರ್ಷದ ಬಾಲಕನನ್ನು ಮೊಯಿನ್ ಖಾನ್ ಎಂದು ಗುರುತಿಸಲಾಗಿದೆ.

ಬಾಲಕ ವಾಸವಿದ್ದ ಉತ್ತರ ಬೆಂಗಳೂರಿನ ಬಾಲಾಜಿ ಲೇಔಟ್‌ನಲ್ಲಿ ನವೆಂಬರ್ 8 ಮಂಗಳವಾರ ಈ ಘಟನೆ ನಡೆದಿದೆ. ಮೊಯಿನ್ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಯಲ್ಲಿ ಬೆಳಿಗ್ಗೆ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಇನ್ವಿಜಿಲೇಟರ್ ಮೋಯಿನ್ ನಕಲು ಮಾಡುತ್ತಿದ್ದಾರೆ ಎಂದು ಗುರುತಿಸಿದ್ದರು ಎಂದು ವರದಿಯಾಗಿದೆ. ಅದಕ್ಕೆ ಶಿಕ್ಷೆಯಾಗಿ, ಶಿಕ್ಷಕರು ಮೊಯಿನ್ ಅವರನ್ನು ತರಗತಿಯ ಹೊರಗೆ ಕಳುಹಿಸಿ, ಅಲ್ಲಿಯೇ ಇರುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಮಳಲಿ ಪೇಟೆ ಮಸೀದಿ ವಿವಾದ | ಆಡಳಿತ ಮಂಡಳಿ ಅರ್ಜಿ ವಜಾ; ಬಿಜೆಪಿ ಬೆಂಬಲಿತ ವಿಎಚ್‌ಪಿ ಅರ್ಜಿ ಪುರಸ್ಕರಿಸಿದ ಕೋರ್ಟ್‌

ಇದರಿಂದಾಗಿ ಅವಮಾನ ಅನುಭವಿಸಿದ ಮೋಯಿನ್ ಶಾಲೆಯಿಂದ ಹೊರಟು ತನ್ನ ಮನೆಯ ಸಮೀಪವಿರುವ ಅಪಾರ್ಟ್‌ಮೆಂಟ್ ಸಮುಚ್ಚಯಕ್ಕೆ ತರೆಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ನನ್ನ ಮಗ ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಶಾಲೆಯಿಂದ ಬೆಳಿಗ್ಗೆ 11.30 ರ ಸುಮಾರಿಗೆ ನಮಗೆ ಕರೆ ಬಂದಿತ್ತು. ಅವರು ನನ್ನನ್ನು ಶಾಲೆಗೆ ಬರಲು ಹೇಳಿದರು. ನಾನು ಅಲ್ಲಿಗೆ ಧಾವಿಸಿ ನೋಡಿದಾಗ, ನನ್ನ ಮಗ ಈಗಾಗಲೇ ಹೊರಟು ಹೋಗಿದ್ದರು” ಎಂದು ಮೊಯಿನ್ ಅವರ ತಂದೆ ಮೊಹಮ್ಮದ್ ನೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮೋಯಿನ್ ಅವರನ್ನು ಮೇಲ್ವಿಚಾರಣೆಯಿಲ್ಲದೆ ಶಾಲೆಯಿಂದ ಹೊರ ಹೋಗಲು ಬಿಟ್ಟು ಶಾಲಾ ಆಡಳಿತ ಮಂಡಳಿ ಮತ್ತು ಭದ್ರತಾ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದೆ. ವಿದ್ಯಾರ್ಥಿಯ ಸಾವಿಗೆ ಶಾಲೆಯ ಆಡಳಿತ ಮಂಡಳಿ ಮತ್ತು ಭದ್ರತಾ ಸಿಬ್ಬಂದಿಯೆ ಕಾರಣವಾಗಿದೆ ಎಂದು ಆರೋಪಿಸಿ ನೂರ್ ಅವರು ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

ಮೊಯಿನ್ ಅವರನ್ನು ಶಿಕ್ಷಿಸಿದ ಶಿಕ್ಷಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಲ್ಲ, ಆದರೆ ನೂರ್ ಆರೋಪದ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...