Homeಕರ್ನಾಟಕಬೆಂಗಳೂರು: ನಟ, ಹೋರಾಟಗಾರ ಚೇತನ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ನಟ, ಹೋರಾಟಗಾರ ಚೇತನ್‌ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

“ಭೂತಕೋಲವು ಹಿಂದೂ ಸಂಪ್ರದಾಯದ ಭಾಗವಲ್ಲ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಹೇಳಿದ ಕೆಲವು ದಿನಗಳ ನಂತರ ಬೆಂಗಳೂರು ಪೊಲೀಸರು ಶನಿವಾರ ಪ್ರಕರಣವನ್ನು ದಾಖಲಿಸಿದ್ದಾರೆ.

ಭೂತ ಕೋಲವು ಆದಿವಾಸಿಗಳ ಸಂಸ್ಕೃತಿಯ ಭಾಗವಾಗಿದೆ. ಅದರಲ್ಲಿ ವೈದೀಕರಣ ಇಲ್ಲ ಎಂದು ಚೇತನ್‌ ಬುಧವಾರ ಹೇಳಿದ್ದರು. “ಭಾರತದಲ್ಲಿ ಹಿಂದೂ ಧರ್ಮ ಅಸ್ತಿತ್ವಕ್ಕೆ ಬರುವ ಮೊದಲೇ ಆದಿವಾಸಿಗಳು ಕಾಡಿನ ಆರಾಧನೆಯನ್ನು ಮಾಡುತ್ತಿದ್ದರು” ಎಂದು ಚೇತನ್ ಹೇಳಿದ್ದರು.

ಹಿಂದಿ ಮತ್ತು ಹಿಂದುತ್ವದ ಹೇರಿಕೆಯನ್ನು ಒಪ್ಪಲಾಗದು ಎಂದೂ ಅವರು ತಿಳಿಸಿದ್ದರು. ಚೇತನ್ ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ಶೇಷಾದ್ರಿಪುರಂ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಬೆಂಗಳೂರು (ಉತ್ತರ) ಸಂಚಾಲಕ ಶಿವಕುಮಾರ್ ಅವರ ದೂರಿನ ಆಧಾರದ ಮೇಲೆ ಚೇತನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದು ಹಿಂದುತ್ವ ಸಂಘಟನೆಯಾದ ಹಿಂದೂ ಜಾಗರಣ ವೇದಿಕೆ ಕೂಡ ಚೇತನ್‌ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ದೂರು ದಾಖಲಿಸಿದೆ.

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಭಿನ್ನ ವರ್ಗಗಳ ನಡುವೆ ದ್ವೇಷವನ್ನುಉತ್ತೇಜಿಸಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

ಭೂತಕೋಲ ಸಂಪ್ರದಾಯವು ಹಿಂದೂ ಸಂಸ್ಕೃತಿಯ ಭಾಗವಾಗಿದೆ ಎಂಬ ‘ಕಾಂತಾರ’ ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಚೇತನ್‌ ಹೇಳಿಕೆ ನೀಡಿದ್ದರು. ಚಿತ್ರದಲ್ಲಿ ತೋರಿಸಲಾಗಿರುವ ಪಂಜುರ್ಲಿಯು ಹಿಂದೂ ಸಂಪ್ರದಾಯದ ಭಾಗ ಎಂದು ರಿಷಬ್‌ ಹೇಳಿದ್ದರು.

ರಿಷಬ್‌ ಹೇಳಿಕೆಗೆ ಹಲವಾರು ಜನ ಆಕ್ಷೇಪ ವ್ಯಕ್ತಪಡಿಸಿದ್ದರು. ಭೂತಕೋಲವು ಹೇಗೆ ಅವೈದಿಕವಾಗಿದೆ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಚೇತನ್‌ ವಿರುದ್ಧ ಈ ವರ್ಷ ದಾಖಲಾಗಿರುವ ಎರಡನೇ ಪ್ರಕರಣ ಇದಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ಧರಿಸುವುದನ್ನು ರಾಜ್ಯ ಸರ್ಕಾರ ನಿಷೇಧ ಹೇರಿದ ಬಳಿಕ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಹಿಜಾಬ್‌ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಆಲಿಸಿದ ಕರ್ನಾಟಕ ಹೈಕೋರ್ಟ್ ಪೀಠದ ಭಾಗವಾಗಿದ್ದ ನ್ಯಾಯಾಧೀಶರನ್ನು ಟೀಕಿಸಿದ ಆರೋಪದಲ್ಲಿ ಚೇತನ್‌ ಅವರನ್ನು ಫೆಬ್ರವರಿಯಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದರು.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ #ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...