Homeಮುಖಪುಟ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಸದ ತೇಜಸ್ವಿ ಸೂರ್ಯಗೆ ಬೆಂಬಲ ಸೂಚಿಸಿದ್ದಾರೆ. ನಾನು ಹಲವು ವರ್ಷಗಳಿಂದ ಪ್ರಧಾನಿಗಳಲ್ಲಿ ಎನ್‌ಐಎ ಕೇಂದ್ರಕ್ಕೆ ಮನವಿ ಮಾಡಿದ್ದೆ. ಈಗ ಒಪ್ಪಿಗೆ ಸಿಕ್ಕಿರುವುದಕ್ಕೆ ಪ್ರಧಾನಿಗಳು ಮತ್ತು ಗೃಹ ಸಚಿವ ಅಮಿತ್‌ ಶಾರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

- Advertisement -
- Advertisement -

ಬೆಂಗಳೂರು ‘ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ’ ಎಂಬ ಹೇಳಿಕೆ ನೀಡಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕೆಲವರು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವುದು ಬಿಜೆಪಿಯೇ, ಹಾಗಾಗಿ ಭಯೋತ್ಪಾದನೆ ಹೆಚ್ಚಾಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.

“ಕಳೆದ ಕೆಲವು ವರ್ಷಗಳಲ್ಲಿ, ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ನಗರದ ತನಿಖಾ ಸಂಸ್ಥೆಯಿಂದ ನಡೆದ ಅನೇಕ ಬಂಧನಗಳು ಮತ್ತು ಸ್ಲೀಪರ್ ಸೇಲ್‌ಗಳಿಂದ ಇದು ಸಾಬೀತಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಎನ್‌ಐಎಯ ಶಾಶ್ವತ ವಿಭಾಗ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದೇನೆ. ಅವರು ಭರವಸೆ ನೀಡಿದ್ದು, ಅದಷ್ಟು ಬೇಗ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರ ಆರಂಭವಾಗಲಿದೆ” ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

 

ಇದಕ್ಕೆ ಆಕ್ಷೇಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ’ತಂತ್ರಜ್ಞಾನದಲ್ಲಿ ಜಾಗತೀಕವಾಗಿ  ಹೆಸರುವಾಸಿಯಾಗಿರುವ ಬೆಂಗಳೂರನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಯೋತ್ಪಾದಕರ ಕೇಂದ್ರ ಎಂದಿರುವುದು ಖಂಡನೀಯ’. ಜಿಡಿಪಿ ಕುಸಿತವಾಗಿರುವ ಈ ಸಮಯದಲ್ಲಿ ಇಂತಹ ಹೇಳಿಕೆಗಳನ್ನು ಕೇಳಿ ಬೆಂಗಳೂರು ಮತ್ತು ಕರ್ನಾಟಕದಲ್ಲಿ ಯಾರಾದರೂ ಹೂಡಿಕೆದಾರರು ಬರುತ್ತಾರೆಯೇ..? ಇದಕ್ಕೆ ಪ್ರಧಾನಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರಿಸುತ್ತಾರೆಯೇ’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದು,‌  ‘ಬೆಂಗಳೂರಿನಲ್ಲಿ ಎಷ್ಟು ಭಯೋತ್ಪಾದನಾ ಚಟುವಟಿಕೆಗಳು ನಡೆದಿವೆ? ಭಯೋತ್ಪಾದನಾ ಕೇಂದ್ರವೆಂಬ ಅರ್ಹತೆ ಪಡೆಯಲು ಇರುವ ಮಾನದಂಡಗಳು ಏನು ಎಂಬುದನ್ನು ಬಿಜೆಪಿಯವರಿಂದ ಕೇಳಲು ನಾನು ಇಷ್ಟಪಡುತ್ತೇನೆ’ ಎಂದಿದ್ದಾರೆ.

 

ಅಲ್ಲದೆ, “ಇನ್ನು ಮುಂದೆ ಹೂಡಿಕೆದಾರರನ್ನು ‘ಭಯೋತ್ಪಾದನಾ ನಗರ’ಕ್ಕೆ ಕರೆತರಲು ಕೈಗಾರಿಕಾ ಸಚಿವ ‌ಜಗದೀಶ್ ಶೆಟ್ಟರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಾಕಷ್ಟು ಶ್ರಮಪಡಬೇಕಿದೆ” ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.‌

ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಟ್ವೀಟ್ ಮಾಡಿ ತೇಜಸ್ವಿ ಸೂರ್ಯ ವಿರುದ್ಧ, ಬಿಜೆಪಿ ಸರ್ಕರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ”ನಮ್ಮ ನಗರ ಅವರಿಗೆ ಎಲ್ಲವನ್ನೂ ನೀಡಿದೆ, ಆದರೆ ಅವರು ತಮ್ಮ ಅಜೆಂಡಾಕ್ಕಾಗಿ ನಮ್ಮ ನಗರದ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. 1.2 ಕೋಟಿ ಜನರನ್ನು ತಪ್ಪಿತಸ್ಥರನ್ನಾಗಿ ಚಿತ್ರಿಸಿದ್ದಾರೆ. ಇಂತಹ ಅವಿವೇಕ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ”. ನನ್ನ ನಗರ ಸುಂದರ, ಕಾಸ್ಮೋಪಾಲಿಟನ್, ವೈವಿಧ್ಯಮಯ, ಐಟಿ/ಬಿಟಿ ಕೇಂದ್ರ, ಸುರಕ್ಷತೆ, ಶಾಂತಿಯುತ ಸಿಲಿಕಾನ್ ಸಿಟಿಯಾಗಿದೆ. ನನ್ನ ಈ ನಗರಕ್ಕೆ ಕಳಂಕ ತರಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಶಾಸಕಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

ರಾಜಕೀಯ ನಾಯಕರುಗಳಲ್ಲದೇ ನೆಟ್ಟಿಗರು ಕೂಡ ಸಂಸದ ತೇಜಸ್ವಿ ಹೇಳಿಕೆಗೆ ಕಿಡಿಕಾರಿದ್ದಾರೆ. ಟ್ವಿಟ್ಟರ್‌ನಲ್ಲಿ #ApologiseTejasvi ಹ್ಯಾಶ್‌ಟ್ಯಾಗ್ ಬಳಸಿ ತೇಜಸ್ವಿ ಸೂರ್ಯ ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿದ್ದಾರೆ.

ಇನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಸದ ತೇಜಸ್ವಿ ಸೂರ್ಯಗೆ ಬೆಂಬಲ ಸೂಚಿಸಿದ್ದಾರೆ. ನಾನು ಹಲವು ವರ್ಷಗಳಿಂದ ಪ್ರಧಾನಿಗಳಲ್ಲಿ ಎನ್‌ಐಎ ಕೇಂದ್ರಕ್ಕೆ ಮನವಿ ಮಾಡಿದ್ದೆ. ಈಗ ಒಪ್ಪಿಗೆ ಸಿಕ್ಕಿರುವುದಕ್ಕೆ ಪ್ರಧಾನಿಗಳು ಮತ್ತು ಗೃಹ ಸಚಿವ ಅಮಿತ್‌ ಶಾರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.


ಇದನ್ನೂ ಓದಿ: ತೇಜಸ್ವಿನಿಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದು ‘ಡಿಎನ್ಎ ಪೊಲಿಟಿಕ್ಸ್’ಕಾರಣಕ್ಕಲ್ಲ!  ಅಸಲೀ ಕಾರಣ ಕೇಳಿದ್ರೆ ಶಾಕ್ ಆಗ್ತೀರ….!! 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...