Homeಕರ್ನಾಟಕಬೆಂಗಳೂರು: ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆ

ಬೆಂಗಳೂರು: ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆ

- Advertisement -
- Advertisement -

ಸೋಮವಾರ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಎರಡು ತಿಂಗಳ ಹಿಂದೆ ಯಶವಂತಪುರ ರೈಲು ನಿಲ್ದಾಣದ ಡ್ರಮ್‌ನಲ್ಲಿ ಇದೇ ರೀತಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು.

ಸೋಮವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮೂವರು ದುಷ್ಕರ್ಮಿಗಳು ಶವವಿರುವ ನೀಲಿ ಡ್ರಮ್ ಅ​ನ್ನು ಆಟೋದಲ್ಲಿ‌ ತಂದು ನಗರದ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ಇಟ್ಟು ಹೋಗಿದ್ದಾರೆ. ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶವವನ್ನು ಬಟ್ಟೆಯಲ್ಲಿ ಸುತ್ತಿ ಡ್ರಮ್ ನಲ್ಲಿ ಹಾಕಿ ಮುಚ್ಚಳದಿಂದ ಮುಚ್ಚಲಾಗಿತ್ತು.

ಶವ ಯಾರದು ಎಂಬ ಬಗ್ಗೆ ಗುರುತು ಸಿಕ್ಕಿಲ್ಲ, ಸುಮಾರು 31 ರಿಂದ 35 ವರ್ಷ ವಯಸ್ಸಿನವರೆಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ‌ ಮಾತನಾಡಿದ ರೈಲ್ವೇ ಎಸ್ಪಿ ಸೌಮ್ಯಲತಾ, “ನಮಗೆ ನೀಲಿ ಡ್ರಮ್​ನಿಂದ ಕೊಳೆತ ವಾಸನೆ ಬರುತ್ತಿದೆ ಎಂದು ದೂರವಾಣಿ ಕರೆ ಬಂದಿತ್ತು. ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಶವ ಇರುವುದು ಗೊತ್ತಾಗಿದೆ” ಎಂದರು.

ಇದನ್ನೂ ಓದಿ: ಯಶವಂತಪುರ ರೈಲ್ವೆ ನಿಲ್ದಾಣ: ಕೊಳೆತ ಸ್ಥಿತಿಯಲ್ಲಿ ಯುವತಿಯ ಶವಪತ್ತೆ

”ಸೋಮವಾರ ಮೂವರು ವ್ಯಕ್ತಿಗಳು ಆಟೋರಿಕ್ಷಾದ ಮೂಲಕ ಡ್ರಮ್‌ನಲ್ಲಿ ಶವ ಇಟ್ಟುಕೊಂಡು ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ಎಸೆದಿರುವುದು ತನಿಖೆಯ ವೇಳೆ ಪೊಲೀಸರಿಗೆ ಕಂಡುಬಂದಿದೆ. ಈ ಮೃತದೇಹವನ್ನು ಮಚ್ಲಿಪಟ್ಟಣದಿಂದ ರೈಲಿನಲ್ಲಿ ಸಾಗಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

”ಆ ಮೃತದೇಹ ಯಾರದು ಎಂದು ತಿಳಿದುಕೊಳ್ಳಲು ನಮ್ಮ ತಂಡವನ್ನು ಮಚ್ಲಿಪಟ್ಟಣಕ್ಕೆ ಕಳುಹಿಸಲಾಗಿದೆ ಆದರೆ ಮೃತದೇಹವನ್ನು ಗುರುತಿಸಲು ಸಾಧ್ಯವಾಗಲಿಲ್ಲ” ಎಂದು ರೈಲ್ವೇ ಎಸ್ಪಿ ಸೌಮಲತಾ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಜನವರಿ 4 ರಂದು ಯಶವಂತಪುರ ರೈಲ್ವೇ ನಿಲ್ದಾಣದ ಗೂಡ್ಸ್ ಪ್ಲಾಟ್ ಫಾರ್ಮ್ ನ ಬಾಕ್ಸ್ ಒಂದರಲ್ಲಿ ಶವ ಪತ್ತೆಯಾಗಿತ್ತು. ಅಂದಾಜು 23 ವರ್ಷದ ಯುವತಿ ಎಂದು ಗುರುತಿಸಲಾಗಿತ್ತು. ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಯುವತಿಯನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಕವರ್ ಒಂದರಲ್ಲಿ ಸೀಲ್ ಮಾಡಿಟ್ಟಿದ್ದರು. ವಾಸನೆ ಬಂದಾಗ ನೋಡಿಕೊಂಡಿರುವ ರೈಲ್ವೇ ಪೊಲೀಸರು ತೆಗೆದು ನೋಡಿದಾಗ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಯಶವಂತಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...