Homeಮುಖಪುಟಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದರು.

- Advertisement -
- Advertisement -

ಬೆಂಗಳೂರು: ರಾಜ್ಯ ಆಮ್‌ ಆದ್ಮಿ ಪಾರ್ಟಿ (ಎಎಪಿ) ಕಚೇರಿ ಎದುರಿಗೆ ಪ್ರತಿಭಟನೆ ನೆಪದಲ್ಲಿ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿರುವ ಎಎಪಿ, ಘಟನೆ ಬಳಿಕ ಗೋಮೂತ್ರ ಸಿಂಪಡಿಸಿ ಕಚೇರಿಯನ್ನು ಶುದ್ಧೀಕರಣಗೊಳಿಸಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಕಳೆದ ತಿಂಗಳು ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸದ ಮೇಲೆ ದಾಳಿ ಮಾಡಿದ ಮಾದರಿಯಲ್ಲೇ ಕರ್ನಾಟಕದ ಎಎಪಿ ಕಚೇರಿ ಮೇಲೂ ದಾಳಿ ಮಾಡಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಕಚೇರಿ ಮುಂದಿದ್ದ ಬೈಕ್‌ಗಳನ್ನೆಲ್ಲ ಬೀಳಿಸಿದ್ದಲ್ಲದೇ, ಕಚೇರಿಯ ಒಳಗೆ ನುಗ್ಗಲು ಮುಂದಾಗಿದ್ದಾರೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಚೋದನಾಕಾರಿ ಭಾಷಣ ಮಾಡಿ, ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಿಜೆಪಿ ಮುಖಂಡ ತಜಿಂದರ್‌ ಪಾಲ್‌ ಬಗ್ಗಾರವರನ್ನು ಪಂಜಾಬ್‌ ಪೊಲೀಸರು ಬಂಧಿಸಿರುವುದು ಒಳ್ಳೆಯ ಬೆಳವಣಿಗೆ. ದೇಶದಲ್ಲಿ ಶಾಂತಿ ಕದಡುವವರಿಗೆ ಕಾನೂನಿನನ್ವಯ ಶಿಕ್ಷೆಯಾಗಬೇಕು. ಬೆಂಗಳೂರಿನ ಬಿಜೆಪಿ ಕಾರ್ಯಕರ್ತರಿಗೆ ಎಎಪಿ ಕಚೇರಿ ಮೇಲೆ ದಾಳಿ ಮಾಡಲು ಬಗ್ಗಾರವರ ಬಂಧನ ಒಂದು ನೆಪ ಅಷ್ಟೇ. ರಾಜ್ಯದಲ್ಲಿ ಎಎಪಿಗೆ ಜನಬೆಂಬಲ ಹೆಚ್ಚಾಗುತ್ತಿರುವುದರಿಂದ ಬಿಜೆಪಿ ಹತಾಶವಾಗಿರುವುದೇ ಈ ದಾಳಿಗೆ ಪ್ರಮುಖ ಕಾರಣ” ಎಂದು ಜಗದೀಶ್‌ ವಿ ಸದಂ ಹೇಳಿದ್ದಾರೆ.

“ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎಎಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾದರೂ ಪೊಲೀಸರು ತಡೆಯುತ್ತಾರೆ. ನಮ್ಮ ಮೆರವಣಿಗೆಯನ್ನು ಆರಂಭದಲ್ಲೇ ತಡೆದು ಬಂಧಿಸುತ್ತಾರೆ. ಆದರೆ ಬಿಜೆಪಿ ಕಾರ್ಯಕರ್ತರು ಎಎಪಿ ಕಚೇರಿಗೆ ಬಂದು ಗೂಂಡಾ ವರ್ತನೆ ತೋರಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ರಾಜ್ಯ ಗೃಹ ಸಚಿವಾಲಯವು ಈ ರೀತಿ ಪಕ್ಷಪಾತ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾಯಕಾರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಜ್ಯದ ಅತ್ಯಂತ ಭ್ರಷ್ಟ ಪಕ್ಷ ಹಾಗೂ ಗಲಭೆಪ್ರಿಯ ಪಕ್ಷವಾದ ಬಿಜೆಪಿಯ ಕಾರ್ಯಕರ್ತರ ಪ್ರತಿಭಟನೆಯಿಂದ ಆಮ್‌ ಆದ್ಮಿ ಪಾರ್ಟಿ ಕಚೇರಿ ಅಪವಿತ್ರಗೊಂಡಿತ್ತು. ಗೋಮೂತ್ರ ಸಿಂಪಡಿಸುವ ಮೂಲಕ ಕಚೇರಿಯನ್ನು ಶುದ್ಧೀಕರಣ ಮಾಡಲಾಗಿದೆ. ರಾಜ್ಯದ ಆಡಳಿತ ಕೂಡ ಬಿಜೆಪಿಯಿಂದ ಅಪವಿತ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಅಧಿಕಾರ ಸಿಕ್ಕೊಡನೆ ಆಡಳಿತವನ್ನೂ ಆಮ್‌ ಆದ್ಮಿ ಪಾರ್ಟಿಯು ಶುದ್ಧೀಕರಣ ಮಾಡಲಿದೆ” ಎಂದು ತಿಳಿಸಿದ್ದಾರೆ.

‘ಎಎಪಿ ಕೂಡ ಮೃದು ಹಿಂದುತ್ವ ರಾಜಕಾರಣ ಮಾಡುತ್ತದೆ’ ಎಂಬ ಆರೋಪ ಮೊದಲಿನಿಂದಲೂ ಇದೆ. ಗೋವಿನ ಮೂತ್ರವನ್ನು ತಂದು ಶುದ್ಧೀಕರಣ ಮಾಡುವುದು ಇದನ್ನೇ ಸೂಚ್ಯವಾಗಿ ಹೇಳುತ್ತದೆ. ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡಿದ ಘಟನೆಗಳನ್ನು ಮೆಲುಕು ಹಾಕಿದರೆ ಒಂದು ರೀತಿಯ ಅಸ್ಪೃಶ್ಯತೆ ಆಚರಣೆಯ ಧೋರಣೆಯೂ ಇಲ್ಲಿ ಇಣುಕುತ್ತದೆ. ಬಲ ಪಂಥೀಯ ರಾಜಕಾರಣ ಹಾದಿಯಲ್ಲೇ ಎಎಪಿ ಸಾಗುತ್ತಿದೆ ಎಂದು ದೂರಲಾಗುತ್ತಿದೆ. ಈ ಪ್ರಶ್ನೆಯನ್ನಿಟ್ಟುಕೊಂಡು ಜಗದೀಶ್‌ ವಿ.ಸದಂ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ, “ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡುವುದು ಮೊದಲಿನಿಂದಲೂ ನಮ್ಮಲ್ಲಿರುವ ಸಂಪ್ರದಾಯ. ಇದರಲ್ಲಿ ಎಡ ಪಂಥ- ಬಲ ಪಂಥ ಎಂಬುದಿಲ್ಲ. ನಮ್ಮ ಮನೆಗಳನ್ನು ತೊಳೆಯುವ ಗೋಮೂತ್ರವನ್ನೇ ಬಳಸಲಾಗುತ್ತದೆ. ಎಎಪಿಗೆ ಯಾವ ಪಂಥದ ಹಂಗೂ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಬಿಜೆಪಿಯ ಬುಲ್ಡೋಜರ್‌ ರಾಜಕೀಯದಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ: ಎಎಪಿ

“ಗೃಹಪ್ರವೇಶ ಮಾಡುವಾಗ ನಮ್ಮ ಮನೆಗಳಿಗೆ ಮೊದಲು ಗೋ ಮಾತೆಯನ್ನು ಕರೆದುಕೊಂಡು ಬರುತ್ತೇವೆ. ಯಾವುದನ್ನಾದರೂ ಶುದ್ಧೀಕರಣ ಮಾಡಬೇಕೆಂದರೂ ಗೋ ಮೂತ್ರವನ್ನು ಸಿಂಪಡಣೆ ಮಾಡುವುದು ಸಂಪ್ರದಾಯವಾಗಿದೆ. ಪೀಡೆಗಳು ತೊಲಗಲೆಂಬುದು ಇದರ ಉದ್ದೇಶ. ಪಂಥೀಯ ವಾದಗಳೆಲ್ಲ ಕೆಲಸಕ್ಕೆ ಬರುವುದಿಲ್ಲ. ಅವುಗಳಲ್ಲಿ ನಮಗೆ ನಂಬಿಕೆ ಇಲ್ಲ” ಎಂದರು.

“ಭ್ರಷ್ಟರೆಲ್ಲ, ನೈತಿಕತೆ ಇಲ್ಲದವರೆಲ್ಲ ನಮ್ಮ ಕಚೇರಿಗೆ ನುಗ್ಗಿದಾಗ ಶುದ್ಧೀಕರಣ ಮಾಡಲೇಬೇಕು. ನಾವು ಶುದ್ಧ ರಾಜಕಾರಣ ಮಾಡಲು ಬಂದಿದ್ದೇವೆ. ಹೀಗಾಗಿ ಗೋವಿನ ಮೂತ್ರ ತಂದು ಶುದ್ಧೀಕರಣ ಮಾಡಿದ್ದೇವೆ” ಎಂದು ಹೇಳಿದರು.

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಇಂಥವುಗಳ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...