Homeಮುಖಪುಟಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

- Advertisement -
- Advertisement -

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ ಬಿದ್ದಿರುವ ಅನಾಥ ಮತ್ತು ಹಳೆಯ ವಾಹನಗಳನ್ನು ಮಾಲೀಕರು ತಾವಾಗಿಯೇ ತೆರವುಗೊಳಿಸದಿದ್ದರೆ, ಸರ್ಕಾರವೇ ಅವುಗಳನ್ನು ವಶಪಡಿಸಿಕೊಂಡು ಬಹಿರಂಗ ಹರಾಜು ಹಾಕಲಿದೆ ಎಂದು ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗಾಗಲೇ ಸಂಚಾರಿ ಪೊಲೀಸರು ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ. ನಗರದಾದ್ಯಂತ ರಸ್ತೆ ಬದಿ ಅನಾಥವಾಗಿ ಬಿದ್ದಿರುವ ವಾಹನಗಳನ್ನು ಪೊಲೀಸರು ಮೊದಲು ಗುರುತಿಸುತ್ತಾರೆ. ನಂತರ ಆ ವಾಹನಗಳಿಗೆ ಅಧಿಕೃತ ನೋಟಿಸ್‌ನ ‘ಸ್ಟಿಕ್ಕರ್’ ಅಂಟಿಸಲಾಗುತ್ತದೆ ಮತ್ತು ಅವುಗಳನ್ನು ಅಲ್ಲಿಂದ ಕದಲಿಸದಂತೆ ಚಕ್ರಗಳಿಗೆ ‘ವೀಲ್ ಕ್ಲಾಂಪ್’ (ಲಾಕ್) ಹಾಕಲಾಗುತ್ತದೆ.

 ವಾಹನಕ್ಕೆ ನೋಟಿಸ್ ಅಂಟಿಸಿದ ದಿನದಿಂದ ಮಾಲೀಕರಿಗೆ ತಮ್ಮ ವಾಹನವನ್ನು ಸ್ವಂತ ಜಾಗಕ್ಕೆ ಸ್ಥಳಾಂತರಿಸಲು ಕೇವಲ 7 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ರೂ. 500 ದಂಡ ಕಟ್ಟಿ ವಾಹನ ಬಿಡಿಸಿಕೊಳ್ಳಬಹುದು.

 7 ದಿನ ಕಳೆದರೂ ಯಾರೂ ವಾಹನವನ್ನು ತೆರವುಗೊಳಿಸದಿದ್ದರೆ, ಅಧಿಕಾರಿಗಳು ಅದನ್ನು ಟೋಯಿಂಗ್ ಮಾಡಿ ಸರ್ಕಾರ ನಿಗದಿಪಡಿಸಿರುವ ಮಲ್ಲಸಂದ್ರ ಅಥವಾ ನಿಗದಿತ ಯಾರ್ಡ್‌ಗಳಿಗೆ ಸಾಗಿಸಿ ಜಪ್ತಿ ಮಾಡಲಿದ್ದಾರೆ. (ಇದಕ್ಕೆ ಸುಮಾರು 1000 ರೂ. ಟೋಯಿಂಗ್ ಚಾರ್ಜ್ ಬೀಳಲಿದೆ).

ಜಪ್ತಿ ಮಾಡಿದ ನಂತರವೂ ಮಾಲೀಕರು ಬರದಿದ್ದರೆ, ಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ ಕೇವಲ 15 ದಿನಗಳ ಒಳಗಾಗಿ ಆ ವಾಹನಗಳನ್ನು ಕಾನೂನುಬದ್ಧವಾಗಿ ಬಹಿರಂಗ ಹರಾಜು ಹಾಕಲಾಗುತ್ತದೆ. ಒಮ್ಮೆ ಹರಾಜಾದ ಮೇಲೆ ವಾಹನದ ಮೇಲೆ ಮೂಲ ಮಾಲೀಕರಿಗೆ ಯಾವುದೇ ಹಕ್ಕು ಇರುವುದಿಲ್ಲ.

ಪಾದಚಾರಿಗಳ ಹಿತರಕ್ಷಣೆಗೆ ಕಠಿಣ ನಿಲುವು:

ಬೆಂಗಳೂರು ನಗರದಲ್ಲಿ ಸಂಭವಿಸುವ ರಸ್ತೆ ಅಪಘಾತಗಳ ಸಾವಿನಲ್ಲಿ ಶೇಕಡಾ 30 ರಷ್ಟು ಪಾದಚಾರಿಗಳೇ ಆಗಿರುತ್ತಾರೆ ಎಂದು ಇಲಾಖೆಯ ದತ್ತಾಂಶಗಳು ಹೇಳುತ್ತವೆ. ಸುಪ್ರೀಂ ಕೋರ್ಟ್ ಕೂಡ ಫುಟ್‌ಪಾತ್ ಮೇಲೆ ನಡೆಯುವುದು ನಾಗರಿಕರ ಮೂಲಭೂತ ಹಕ್ಕು ಎಂದು ಸ್ಪಷ್ಟಪಡಿಸಿದೆ. ಸದ್ಯ ನಗರದಾದ್ಯಂತ ಪೊಲೀಸರು ಪ್ರಾಥಮಿಕವಾಗಿ ಸುಮಾರು 1,571ಕ್ಕೂ ಹೆಚ್ಚು ಅನಾಥ ವಾಹನಗಳನ್ನು ಗುರುತಿಸಿದ್ದು, ಸಾರ್ವಜನಿಕರು ಕೂಡ ಇಂತಹ ವಾಹನಗಳ ಬಗ್ಗೆ ಸಂಚಾರಿ ಪೊಲೀಸರ ‘ಅಸ್ತ್ರಂ’ (Astram) ಆ್ಯಪ್ ಮೂಲಕ ದೂರು ನೀಡಬಹುದಾಗಿದೆ.

“ಬೆಂಗಳೂರಿನ ರಸ್ತೆಗಳನ್ನು ಸಾರ್ವಜನಿಕರು ತಮ್ಮ ಸ್ವಂತ ಪಾರ್ಕಿಂಗ್ ಜಾಗದಂತೆ ಬಳಸುವುದನ್ನು ನಿಲ್ಲಿಸಬೇಕು. ನಗರದ ಅಂದಗೆಡಿಸುವ ಮತ್ತು ಸುಗಮ ಸಂಚಾರಕ್ಕೆ ಅಡ್ಡಿಪಡಿಸುವ ಇಂತಹ ಧೂಳು ಹಿಡಿದ ವಾಹನಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಮುಂದುವರಿಯಲಿದೆ” ಎಂದು ಸಚಿವರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...

ದೆಹಲಿ: 2020ರ ಮುಸ್ಲಿಂ ವಿರೋಧಿ ಹಿಂಸಾಚಾರದಲ್ಲಿ 22 ವರ್ಷದ ಯುವಕನ ಹತ್ಯೆ: ಐವರು ಹಿಂದುತ್ವವಾದಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರದ ಸಂದರ್ಭದಲ್ಲಿ 22 ವರ್ಷದ ಮುಸ್ಲಿಂ ಯುವಕ ಮೋನಿಷ್  ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಐವರು ಹಿಂದುತ್ವವಾದಿ ಪುರುಷರಿಗೆ ವಿಧಿಸಲಾಗಿದ್ದ ಏಳು ವರ್ಷಗಳ...

ಅರ್ನಬ್ ಚಂಡಮಾರುತ: ಆಂಧ್ರಪ್ರದೇಶದಲ್ಲಿ ಮೂವರ ಸಾವು; ಹಲವು ಮನೆಗಳಿಗೆ ಹಾನಿ

ಅರ್ನಬ್ ಚಂಡಮಾರುತವು ಆಂಧ್ರಪ್ರದೇಶದಲ್ಲಿ ಭಾರೀ ಹಾನಿಯನ್ನುಂಟುಮಾಡಿದೆ. ಚಂಡಮಾರುತದಿಂದಾಗಿ ಮೂವರು ಮೃತಪಟ್ಟಿದ್ದು, 31 ಮನೆಗಳು ಹಾನಿಗೀಡಾಗಿವೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್‌)ಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಚಂಡಮಾರುತವು ಪುದುಚೇರಿಯ ಯಾನಂ ಸಮೀಪದ...

ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಫಲಿತಾಂಶ: ವಾರಣಾಸಿಯ ಎರಡೂ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಭರ್ಜರಿ ಗೆಲುವು

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ (ಎಸ್‌ಪಿ) ಗಮನಾರ್ಹ ಸಾಧನೆ ಮಾಡಿದೆ. ವಾರಣಾಸಿ ಶಿಕ್ಷಕರ...

ಎಂಎಲ್‌ಸಿ ಚುನಾವಣೆ ಫಲಿತಾಂಶ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಜಯ; ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ಅದರ...