HomeUncategorizedಬೆಂಗಳೂರು: ಭೀಕರ ಅಪಘಾತಕ್ಕೆ ಕಾರಣವಾದ ಆಂಬುಲೆನ್ಸ್‌, ದಂಪತಿ ಸಾವು.

ಬೆಂಗಳೂರು: ಭೀಕರ ಅಪಘಾತಕ್ಕೆ ಕಾರಣವಾದ ಆಂಬುಲೆನ್ಸ್‌, ದಂಪತಿ ಸಾವು.

- Advertisement -
- Advertisement -

ಬೆಂಗಳೂರಿನಲ್ಲಿ ವೇಗವಾಗಿ ಬಂದ ಆಂಬ್ಯುಲೆನ್ಸ್ ರೆಡ್ ಸಿಗ್ನಲ್ ಹಾರಿಸಿ ಸ್ಕೂಟರ್‌ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಡಿಯೋ ಸ್ಕೂಟರ್ ಸವಾರಿ ಮಾಡುತ್ತಿದ್ದ 40 ವರ್ಷದ ಇಸ್ಮಾಯಿಲ್ ಮತ್ತು ಅವರ ಪತ್ನಿ ಸಮೀನಾ ಬಾನು ಎಂದು ಗುರುತಿಸಲಾದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ರೆಡ್ ಸಿಗ್ನಲ್‌ನಲ್ಲಿ ನಿಂತಿದ್ದ ಹಲವಾರು ಮೋಟಾರ್‌ಸೈಕಲ್‌ಗಳಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ.

ನಗರದ ರಿಚ್ಮಂಡ್ ವೃತ್ತದ ಬಳಿ ಶನಿವಾರ ರಾತ್ರಿ 11:00 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಆಂಬ್ಯುಲೆನ್ಸ್ ಹಿಂದಿನಿಂದ ಡಿಕ್ಕಿ ಹೊಡೆದಾಗ ಹಲವಾರು ಸವಾರರು ತಮ್ಮ ವಾಹನಗಳನ್ನು ನಿಲ್ಲಿಸಿದ್ದರು.

ಆಂಬ್ಯುಲೆನ್ಸ್ ಮೂರು ಮೋಟಾರ್‌ಸೈಕಲ್‌ಗಳಿಗೆ ಡಿಕ್ಕಿ ಹೊಡೆದು ಅವುಗಳಲ್ಲಿ ಒಂದನ್ನು ಕೆಲವು ಮೀಟರ್‌ಗಳಷ್ಟು ಎಳೆದುಕೊಂಡು ಹೋಗಿ ಪೊಲೀಸ್ ಚೌಕಿಗೆ ಡಿಕ್ಕಿ ಹೊಡೆದ ನಂತರ ನಿಂತಿತು. ನಂತರ ಆಂಬುಲೆನ್ಸ್‌ ನ್ನು ಸೇರಿದ್ದ ಜನರು ತೆರವುಗೊಳಿಸಿವ ಮೂಲಕ ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತು.

ಡಿಯೋ ಸ್ಕೂಟರ್ ಸವಾರಿ ಮಾಡುತ್ತಿದ್ದ 40 ವರ್ಷದ ಇಸ್ಮಾಯಿಲ್ ಮತ್ತು ಅವರ ಪತ್ನಿ ಸಮೀನ್ ಬಾನು ಎಂದು ಗುರುತಿಸಲಾದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು. ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೀಟರ್ ಫಿನೈಲ್‌ಗೆ 33,500 ರೂ, ಎಲ್‌ಇಡಿ ಬಲ್ಬ್‌ಗೆ 11,800 ರೂ!: ಬಿಜೆಪಿ ಆಡಳಿತದ ಮಧ್ಯಪ್ರದೇಶ ನಗರಾಡಳಿತದಲ್ಲಿ ಬೃಹತ್ ಭ್ರಷ್ಟಾಚಾರ ಬಯಲಿಗೆಳೆದ ಹಿರಿಯ ಐಎಎಸ್ ಅಧಿಕಾರಿ!

ಮಧ್ಯಪ್ರದೇಶದ ನಗರಾಡಳಿತ ಇಲಾಖೆಯಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮ ಖರೀದಿ ಪ್ರಕರಣವು ಈಗ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ವಿವಿಧ ನಗರ ಸ್ಥಳೀಯ ಸಂಸ್ಥೆಗಳು (ULBs) ಮತ್ತು ಪುರಸಭೆಗಳಲ್ಲಿ ಅತ್ಯಗತ್ಯ ವಸ್ತುಗಳನ್ನು ಮಾರುಕಟ್ಟೆ...

ತಮಿಳುನಾಡು| 42 ವರ್ಷಗಳ ನಂತರ ದಲಿತ ಕೇರಿಗೆ ಪ್ರವೇಶಿಸಿದ ದೇವಾಲಯದ ರಥ

42 ವರ್ಷಗಳ ಸುದೀರ್ಘ ಅಂತರದ ನಂತರ, ದೇವಾಲಯದ ರಥವೊಂದು ದಲಿತರು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸಿರುವ ಘಟನೆ ತಮಿಳುನಾಡಿನ ಕಾಂಚೀಪುರ ಜಿಲ್ಲೆಯ ವಾಲಾಜಾಬಾದ್ ಸಮೀಪವಿರುವ ಪುತಾಗರಂ ಗ್ರಾಮದಲ್ಲಿ ನಡೆದಿದೆ. ಜಿಲ್ಲಾಡಳಿತದ ಸೂಚನೆಯ ಮೇರೆಗೆ ಭಾನುವಾರ...

ವಿದ್ಯಾರ್ಥಿ ಸಂಘದ ಚುನಾವಣೆ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜಾಮಿಯಾ ಮಿಲ್ಲಿಯಾ ವಿವಿ : ಹೋರಾಟ ಕೈಬಿಡಲು ವಿದ್ಯಾರ್ಥಿಗಳ ನಕಾರ

ಕ್ಯಾಂಪಸ್‌ನಲ್ಲಿ ಚುನಾಯಿತ ಪ್ರತಿನಿಧಿಗಳ ಮಂಡಳಿಯನ್ನು ಮರುಸ್ಥಾಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಸುದೀರ್ಘ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು (ಜೆಎಂಐ) ಸುಮಾರು 20 ವರ್ಷಗಳ ನಂತರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಪುನರಾರಂಭಿಸುವುದಾಗಿ...

ಸಾಹಿಲ್ ವಕೋಡ್ ಸಾವಿನ ಪ್ರಕರಣ: ಐಐಟಿ ಬಾಂಬೆ ನಿರ್ದೇಶಕರ ರಾಜೀನಾಮೆಗೆ 84 ಸಂಘಟನೆಗಳ ಆಗ್ರಹ

ಜಾತಿ ತಾರತಮ್ಯದ ಆರೋಪ ಎದುರಿಸುತ್ತಿರುವ ಡೀನ್‌ಗೆ ಸಂಸ್ಥೆಯ ಬೆಂಬಲ, ವಿದ್ಯಾರ್ಥಿಯ ವಿರುದ್ಧ ಮಾಧ್ಯಮಗಳಿಗೆ ಹೇಳಿಕೆ, ಸಿಸಿಟಿವಿ ದೃಶ್ಯಾವಳಿ ಸೋರಿಕೆ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ಆರೋಪ ಮುಂಬೈ: ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿ ಸಾಹಿಲ್...

ಕರ್ನಾಟಕದಲ್ಲಿ ಐದು ವರ್ಷಗಳಲ್ಲಿ 629 ವರದಕ್ಷಿಣೆ ಕಿರುಕುಳದ ಸಾವು; ಶಿಕ್ಷೆಯಾಗಿದ್ದು ಕೇವಲ ಏಳು ಪ್ರಕರಣಗಳಲ್ಲಿ: ವರದಿ 

ವರದಕ್ಷಿಣೆ ಕಿರುಕುಳ ಮತ್ತು ಸಾವುಗಳ ಪ್ರಕರಣಗಳಲ್ಲಿ ಅತ್ಯಂತ ಕಡಿಮೆ ಶಿಕ್ಷೆಯ ಪ್ರಮಾಣ; ತನಿಖೆ, ಸಾಕ್ಷ್ಯ ಸಂಗ್ರಹ ಮತ್ತು ನ್ಯಾಯಾಂಗ ವಿಳಂಬದ ವಿರುದ್ಧ ತಜ್ಞರ ಕಳವಳ ಕರ್ನಾಟಕದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಸಾವುಗಳಂತಹ ಗಂಭೀರ ಅಪರಾಧಗಳ...

ಅರುಣಾಚಲ ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆ ವಿರುದ್ಧ ಭುಗಿಲೆದ್ದ ಜನಾಕ್ರೋಶ; ಕೇಂದ್ರದಿಂದ ಆರ್‌ಎಎಫ್‌ನ ಎರಡು ತುಕಡಿ ರವಾನೆ

ಪ್ರಸ್ತಾವಿತ 11,200 ಮೆಗಾವ್ಯಾಟ್ ಸಾಮರ್ಥ್ಯದ ಸಿಯಾಂಗ್ ಅಪ್ಪರ್ ಮಲ್ಟಿಪರ್ಪಸ್ ಪ್ರಾಜೆಕ್ಟ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪಾಸಿಘಾಟ್‌ನಲ್ಲಿ ಹಿಂಸಾಚಾರ ಸಂಭವಿಸಿದ ಹಿನ್ನೆಲೆ, ಕೇಂದ್ರ ಸರ್ಕಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ರಾಪಿಡ್ ಆಕ್ಷನ್...

ನ್ಯಾಯಾಧೀಶರ ನೇಮಕಾತಿಗೆ ಕೊಲಿಜಿಯಂ ಚರ್ಚಿಸುವ ಮುನ್ನವೇ ಸಿಜೆಐ ಚಂದ್ರಚೂಡ್ ಸರ್ಕಾರದ ಪೂರ್ವಾನುಮತಿ ಪಡೆಯುತ್ತಿದ್ದರು: ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್

ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ (ಸಿಜೆಯ) ಡಿ.ವೈ. ಚಂದ್ರಚೂಡ್ ಅವರು ನ್ಯಾಯಾಧೀಶರ ನೇಮಕಾತಿಗಾಗಿ ಪ್ರಸ್ತಾಪಿಸಲಾದ ಹೆಸರುಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಅಧಿಕೃತವಾಗಿ ಚರ್ಚಿಸುವ ಮುನ್ನವೇ ಸರ್ಕಾರದೊಂದಿಗೆ ಚರ್ಚಿಸುವ ಅಭ್ಯಾಸವನ್ನು ಹೊಂದಿದ್ದರು ಎಂದು...

ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಕರ್ನಾಟಕ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರಿನ ಐಟಿ ವಲಯ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ಉದ್ಯೋಗಾವಕಾಶ ನಿರಾಕರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ...

“ಕೇವಲ ದುಷ್ಟರಿಗಷ್ಟೇ ಧರ್ಮ ಬೇಕು”: ಪ್ರಧಾನಿ ಮೋದಿ-ಚಿನ್ಮಯಾನಂದ ಎಐ ಸಂವಾದದ ನಡುವೆ ಸ್ವಾಮಿ ಚಿನ್ಮಯಾನಂದರ ಹಳೆಯ ಕ್ರಾಂತಿಕಾರಿ ಹೇಳಿಕೆ ಈಗ ಮುನ್ನೆಲೆಗೆ!

ದೆಹಲಿಯ ಭಾರತ್ ಮಂಟಪಂನಲ್ಲಿ ಆಯೋಜಿಸಿದ್ದ ‘ಚಿನ್ಮಯ ಅಮೃತ ಮಹೋತ್ಸವ’ ಜಾಗತಿಕ ಸಮ್ಮೇಳನದ ವೇದಿಕೆ ಇತ್ತೀಚೆಗೆ ವಿಶಿಷ್ಟ ತಾಂತ್ರಿಕ ಪ್ರದರ್ಶನವೊಂದಕ್ಕೆ ಸಾಕ್ಷಿಯಾಯಿತು. 1993ರಲ್ಲೇ ಇಹಲೋಕ ತ್ಯಜಿಸಿದ್ದ ಚಿನ್ಮಯ ಮಿಷನ್ ಸಂಸ್ಥಾಪಕ ಸ್ವಾಮಿ ಚಿನ್ಮಯಾನಂದ ಅವರ...

ಜೀವನ ವೆಚ್ಚ, ಶಾಲಾ ನಿಧಿ ಕಡಿತದ ವಿರುದ್ಧ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು, ಜಲಫಿರಂಗಿ ಪ್ರಯೋಗ

ಫ್ರಾನ್ಸ್‌ನಲ್ಲಿ ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. ರಾಜಧಾನಿ ಪ್ಯಾರಿಸ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು...