Homeಕರ್ನಾಟಕಅನ್ಯಧರ್ಮೀಯ ಯುವತಿಯನ್ನು ಡ್ರಾಪ್ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಅನ್ಯಧರ್ಮೀಯ ಯುವತಿಯನ್ನು ಡ್ರಾಪ್ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಕೆಲವು ಮುಸ್ಲಿಂ ಸಮುದಾಯದ ವ್ಯಕ್ತಿಗಳು ಗಾಡಿಗೆ ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿ, ಗಲಾಟೆ ನಡೆಸಿರುವ ವಿಡಿಯೋ ವೈರಲ್ ಆಗಿತ್ತು.

- Advertisement -
- Advertisement -

ಬೆಂಗಳೂರಿನಲ್ಲಿ ತನ್ನ ಸಹೋದ್ಯೋಗಿ ಮುಸ್ಲಿಂ ಯುವತಿಯನ್ನು ಬೈಕ್‌ನಲ್ಲಿ ಮನೆಗೆ ಡ್ರಾಪ್ ಮಾಡುತ್ತಿದ್ದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ತಕ್ಷಣ ಬಂಧಿಸಿದ್ದಾರೆ.

ಆರೋಪಿಗಳನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಹೊಸೂರು ರಸ್ತೆಯ ಡೇರಿ ವೃತ್ತದ ಬಳಿ ಶನಿವಾರ ರಾತ್ರಿ ನಡೆದಿದ್ದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಟೈಮ್ಸ್ ನೌ ವರದಿಗಾರ ಇಮ್ರಾನ್ ಖಾನ್ ತಮ್ಮ ವಾಲ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ತನ್ನ ಸಹೋದ್ಯೋಗಿ ಯುವತಿಯನ್ನು ಮನೆಗೆ ಡ್ರಾಪ್ ಮಾಡಲು ತೆರಳುತ್ತಿದ್ದ ವೇಳೆ, ಕೆಲವು ಮುಸ್ಲಿಂ ಸಮುದಾಯದ ವ್ಯಕ್ತಿಗಳು ಗಾಡಿಗೆ ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿ, ಗಲಾಟೆ ನಡೆಸಿದ್ದರು. ಅನ್ಯಧರ್ಮದ ಯುವಕನ ಜೊತೆಗೆ ತೆರಳುತ್ತಿದ್ದಕ್ಕಾಗಿ ಯುವತಿಯನ್ನು ನಿಂದಿಸಿದ್ದರು. ಆ ಸಂದರ್ಭದಲ್ಲಿ ಯುವತಿ ತನ್ನ ಗಂಡನ ದೂರವಾಣಿ ಸಂಖ್ಯೆ ನೀಡಿದ್ದರು. ಬೇರೆ ಯುವಕನ ಜೊತೆಗೆ ಹೆಂಡತಿಯನ್ನು ಕಳುಹಿಸಿದಕ್ಕಾಗಿ ಯುವತಿಯ ಪತಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದರು.

ಇದನ್ನೂ ಓದಿ: ಗುಬ್ಬಿ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿದ ಸವರ್ಣಿಯರು

ಯುವತಿಯನ್ನು ನಿಂದಿಸಿ, ಬೈಕ್‌ನಿಂದ ಇಳಿಸಿ ಆಟೋಗೆ ಹತ್ತಿಸಿ ಕಳುಹಿಸಿದ್ದರು. ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಮತ್ತೊಮ್ಮೆ ಮುಸ್ಲಿಂ ಯುವತಿಯರನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗದಂತೆ ಎಚ್ಚರಿಕೆ ನೀಡಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಅನ್ಯ ಧರ್ಮದ ಯುವತಿ ಜೊತೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ತಕ್ಷಣ ಬಂಧಿಸಿದ್ದಾರೆ. ಇಂತಹ ಘಟನೆಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ” ಎಂದಿದ್ದಾರೆ.

 

ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿ, ಅನುಚಿತವಾಗಿ ವರ್ತಿಸಿದ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಟಿ ಪೊಲೀಸ್ ತಕ್ಷಣವೇ ಕಾರ್ಯಪ್ರವೃತ್ತರಾಗಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಮೈಸೂರು – ಮುಸ್ಲಿಂ ಪತ್ರಕರ್ತನಿಗೆ ಥಳಿಸಿದ ಹಿಂದೂ ಜಾಗರಣೆ ವೇದಿಕೆಯ ಕಾರ್ಯಕರ್ತರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...