Homeಕರ್ನಾಟಕಕೊಲೆ ಯತ್ನ ಪ್ರಕರಣ: ವಕೀಲ ಜಗದೀಶ್‌ಗೆ ಜಾಮೀನು, ಇನ್ನೊಂದು ಪ್ರಕರಣದ ವಿಚಾರಣೆ ಮಾ.7ಕ್ಕೆ

ಕೊಲೆ ಯತ್ನ ಪ್ರಕರಣ: ವಕೀಲ ಜಗದೀಶ್‌ಗೆ ಜಾಮೀನು, ಇನ್ನೊಂದು ಪ್ರಕರಣದ ವಿಚಾರಣೆ ಮಾ.7ಕ್ಕೆ

- Advertisement -
- Advertisement -

ಕೊಲೆ ಯತ್ನ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನದಲ್ಲಿರುವ ವಕೀಲ ಕೆ.ಎಂ. ಜಗದೀಶ್‌ಗೆ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಈಚೆಗೆ ನಡೆದ ಗಲಭೆ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

ನ್ಯಾಯಾಧೀಶರಾದ ಕಾಶಿಂ ಚೂರಿಖಾನ್‌ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ, ಜಾತಿ ನಿಂದನೆ ಮತ್ತು ಪೊಲೀಸ್‌ ಸಿಬ್ಬಂದಿಗೆ ಬೆದರಿಕೆ ಹಾಕಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜಾಮೀನು ಸಿಕ್ಕಿಲ್ಲವಾದ್ದರಿಂದ ಅವರು ಸದ್ಯಕ್ಕೆ ಜೈಲಿನಿಂದ ಹೊರಬರುವ ಅವಕಾಶವಿಲ್ಲ ಎಂದು ಬಾರ್‌ ಅಂಡ್ ಬೆಂಚ್ ವರದಿ ಮಾಡಿದೆ.

ವಕೀಲರಾದ ಕೆ.ಎನ್.ಜಗದೀಶ್‌ ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ. ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಟಾಯ್ಲೆಟ್‌ ಕ್ಲೀನ್‌ ಮಾಡಿದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದ ರಾಯಭಾರಿ ಕಚೇರಿ: ಆರೋಪ

50 ಸಾವಿರ ರೂಪಾಯಿ ಮೊತ್ತದ ಬಾಂಡ್, ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಹಾಜರಾಗಬೇಕು. ಪ್ರಾಸಿಕ್ಯೂಷನ್‌ ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತಿಲ್ಲ. ಸಾಕ್ಷಿಗಳಿಗೆ ತಮ್ಮ ಫೇಸ್‌ಬುಕ್‌ ಖಾತೆ ಮೂಲಕ ಬೆದರಿಕೆ ಒಡ್ಡಬಾರದು, ಇಂಥದ್ದೇ ಅಪರಾಧಗಳನ್ನು ಮತ್ತೆ ಎಸಗಬಾರದು ಎಂಬ ಷರತ್ತುಗಳನ್ನು ವಿಧಿಸಿದೆ.

ಇನ್ನು, ಕೊಡಿಗೇಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗದೀಶ್‌ ಅವರ ಜಾಮೀನು ಮನವಿಯ ವಿಚಾರಣೆ ನಡೆಸಿದ ಪೀಠವು ಆದೇಶವನ್ನು ಮಾರ್ಚ್‌ 7ಕ್ಕೆ ಕಾಯ್ದಿರಿಸಿದೆ. ಹೀಗಾಗಿ ಅವರು ಇನ್ನು ಬಂಧನದಲ್ಲೇ ಇರಬೇಕಾಗಿದೆ.

ಕೊಲೆ ಯತ್ನ ಪ್ರಕರಣದಲ್ಲಿ ಸಹ ಆರೋಪಿಗಳಾಗಿರುವ ಶರತ್‌ ಖದ್ರಿ, ಪ್ರಶಾಂತಿ ಸುಭಾಷ್‌ ಮತ್ತು ಜಗದೀಶ್‌ ಪುತ್ರ ಆರ್ಯಗೌಡ ಅವರಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಇದನ್ನೂ ಓದಿ: ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...