Homeಕರ್ನಾಟಕಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ...

ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ವಾರ ಉಂಟಾದ ನೆರೆಗೆ ಕಾರಣವಾದ ಸುಮಾರು 700 ಮಳೆ ನೀರಿನ ಚರಂಡಿಗಳನ್ನು ಮುಚ್ಚಿದ ಅತಿಕ್ರಮಣದಾರರ ಪಟ್ಟಿಯಲ್ಲಿ ಹೈ-ಪ್ರೊಫೈಲ್ ಬಿಲ್ಡರ್‌ಗಳು, ಡೆವಲಪರ್‌ಗಳು ಮತ್ತು ಟೆಕ್ ಪಾರ್ಕ್‌ಗಳು ಸೇರಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ. ಈ ಪಟ್ಟಿಯಲ್ಲಿ ವಿಪ್ರೋ, ಪ್ರೆಸ್ಟೀಜ್, ಇಕೋ ಸ್ಪೇಸ್, ​​ಬಾಗ್‌ಮನೆ ಟೆಕ್ ಪಾರ್ಕ್, ಕೊಲಂಬಿಯಾ ಏಷ್ಯಾ ಆಸ್ಪತ್ರೆ ಮತ್ತು ದಿವ್ಯಶ್ರೀ ವಿಲ್ಲಾಸ್ ಸೇರಿದಂತೆ ಹಲವು ದೊಡ್ಡ ಕಂಪೆನಿಗಳ ಹೆಸರು ಇವೆ ಅದು ಉಲ್ಲೇಖಿಸಿದೆ.

ಬಿಬಿಎಂಪಿ ಕಳೆದ ಎರಡು ದಿನಗಳಿಂದ ಅತಿಕ್ರಮಣಕಾರರು ಎಂದು ಆರೋಪಿಸಿ ಜನ ಸಾಮಾನ್ಯರ ಆಸ್ತಿಗಳನ್ನು ಬುಲ್ಡೋಝರ್‌ ಮೂಲಕ ಕೆಡವಲಾಗುತ್ತಿದೆ. ಅದಾಗ್ಯೂ ಈ ವೇಳೆ ಈ ಯಾವುದೆ ದೊಡ್ಡ ಕಂಪೆನಿಗಳ ಆಸ್ತಿಗಳನ್ನು ಕೆಡವಿದ್ದು ಈ ವರೆಗೆ ವರದಿಯಾಗಿಲ್ಲ ಎಂದು ಎನ್‌ಡಿಟವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾನ್ಯ ಮನುಷ್ಯರ ಆಸ್ತಿಗಳನ್ನು ನೆಲಸಮಗೊಳಿಸುವ ಕಾರ್ಯಗಳು ಭರದಿಂದ ಸಾಗುತ್ತಿರುವಾಗ, ಬೃಹತ್‌ ಕಂಪನಿಗಳು ಇನ್ನೂ ಮುಟ್ಟಿಲ್ಲ” ಎಂದು ತನ್ನ ವರದಿಯಲ್ಲಿ ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

“ಅತಿಕ್ರಮ ಮಾಡಿರುವ ಯಾವುದೆ ಕಂಪೆನಿಗಳನ್ನು ಬಿಡುವುದಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಬಿಬಿಎಂಪಿ ಇಂಜಿನಿಯರ್‌ ಹೇಳಿದ್ದಾರಾದರೂ, ಯಾವುದೆ ದೊಡ್ಡ ಕಂಪೆನಿಗಳ ಮೇಲೆ ಇನ್ನೂ ಕ್ರಮ ಪ್ರಾರಂಭವಾಗಿಲ್ಲ” ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಈ ನಡುವೆ ಬೆಂಗಳೂರಿನಲ್ಲಿ ನೆರೆ ಬಂದಿದ್ದರ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ತೀವ್ರ ಟೀಕೆ ಮಾಡಿದ್ದ ಯುವ ಕಾಂಗ್ರೆಸ್‌‌ ಅಧ್ಯಕ್ಷ ಮಹಮ್ಮದ್ ನಲಪಾಡ್ ಸೇರಿದ ಪೂರ್ವ ಬೆಂಗಳೂರಿನ ನಲಪಾಡ್ ಅಕಾಡೆಮಿ ಆಫ್ ಇಂಟರ್‌ನ್ಯಾಶನಲ್ ಸ್ಕೂಲ್ ಆವರಣದಲ್ಲಿ ಧ್ವಂಸ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಶಾಲೆಯು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿದ್ದು ಗಮನಕ್ಕೆ ಬಾರದೆ ಹೋದದ್ದು ಹೇಗೆ ಎಂಬ ಪ್ರಶ್ನೆಗೆ, ಕಟ್ಟಡ ನಿರ್ವಣದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮುಖ್ಯ ಎಂಜಿನಿಯರ್ ಮಾಲತಿ ಅವರು ಕಂದಾಯ ಇಲಾಖೆಯನ್ನು ದೂಷಿಸಿದ್ದಾರೆ. “ಈ ಬಗ್ಗೆ ನಮಗೆ ತಿಳಿದಿರಲಿಲ್ಲ, ಇದು ಕಂದಾಯ ಇಲಾಖೆಯ ಅಡಿಯಲ್ಲಿ ಬರುತ್ತದೆ. ಅವರು ಪರಿಶೀಲಿಸಬೇಕಿತ್ತು. ಈಗ ನಾವು ಅತಿಕ್ರಮಣವನ್ನು ಕೆಡವುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

ಕೆಲವು ದಿನಗಳಿಂದ ಬೆಂಗಳೂರಿನ ಹಲವು ವಸತಿ ಪ್ರದೇಶದಲ್ಲಿ ಕಟ್ಟಡಗಳನ್ನು ಕೆಡವಲಾಗುತ್ತಿದೆ. ಆದರೆ ಯಾವುದೇ ಅಧಿಕೃತ ಅಂಕಿಅಂಶಗಳು ಇನ್ನೂ ಬಂದಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನ ಪೂರ್ವ ಭಾಗದಲ್ಲಿ ಮಂಗಳವಾರ ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಯನ್ನು ನಿವಾಸಿಗಳು ತಮ್ಮ ಮನೆಗಳಲ್ಲಿದ್ದಾಗ ನೆಲಸಮಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕಟ್ಟಡದ ಮಾಲೀಕ ದಿನೇಶ್ ರೆಡ್ಡಿ ಅವರು, “ಕಟ್ಟಡದ ನಿರ್ಮಾಣಕ್ಕೆ ಮುಂದಾದಾಗಲೆ ಎಲ್ಲಾ ಅಗತ್ಯ ಅನುಮತಿಗಳನ್ನು ತೆಗೆದುಕೊಂಡಿದ್ದೇವೆ. ಈ ಮಳೆನೀರು ಚರಂಡಿ ಬಹಳ ದಿನಗಳಿಂದ ಇದೆ, ಈ ವಿಚಾರ ಗೊತ್ತಿದ್ದರೂ ಅಧಿಕಾರಿಗಳು ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ. ನಾನು ಯಾವುದೇ ನಿಯಮ ಉಲ್ಲಂಘಿಸಿಲ್ಲ.ಯಾವುದೇ ಸೂಚನೆ ನೀಡದೆ ಬಂದು ಕಾಂಪೌಂಡ್ ಗೋಡೆ ಕೆಡವಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ, ಕಟ್ಟಡ ಧ್ವಂಸವನ್ನು ಮೇಲ್ವಿಚಾರಣೆ ನಡೆಸುತ್ತಿರುವ ಕಾರ್ಯನಿರ್ವಾಹಕ ಇಂಜಿನಿಯರ್, ಕಟ್ಟಡ ನಿರ್ಮಾಣಕ್ಕೆ ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ. “ಈ ಕಟ್ಟಡಕ್ಕೆ ಯಾವುದೇ ಮಂಜೂರಾತಿ ಯೋಜನೆ ನೀಡಲಾಗಿಲ್ಲ. ಅವರು ಕಾನೂನು ಉಲ್ಲಂಘಿಸಿ ಮಳೆನೀರು ಹರಿಯುವ ಚರಂಡಿಯಲ್ಲಿ ಕಟ್ಟಡ ನಿರ್ಮಿಸಿದ್ದಾರೆ” ಎಂದು ಕಾರ್ಯಪಾಲಕ ಎಂಜಿನಿಯರ್ ಮುನಿರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ದೇವಾಲಯ ನಿರ್ಮಾಣ ವಿವಾದದ ಬಳಿಕ ಬೆಂಗಳೂರು ವಿವಿಯಲ್ಲಿ ದಿಢೀರನೆ ಗಣಪತಿ ಪ್ರತಿಷ್ಟಾಪನೆ; ಆರೋಪ

ಆದಾಗ್ಯೂ, ಕಟ್ಟಡ ಧ್ವಂಸದ ಬಗ್ಗೆ ಯಾವುದೇ ಸೂಚನೆಯನ್ನು ನೀಡಿಲ್ಲ ಎಂದು ಅನೇಕ ನಿವಾಸಿಗಳು ದೂರಿದ್ದಾರೆ. “ಸರ್ಕಾರ ನಮಗೆ ಯಾವುದೆ ಮಾಹಿತಿ ನೀಡಿಲ್ಲ. ಕಟ್ಟಡಗಳನ್ನು ಕೆಡವಲು ಆರಂಭಿಸಿದಾಗ ನಾವು ನಮ್ಮ ಮನೆಯೊಳಗಿದ್ದೆವು” ಎಂದು ಕೆಡವಲಾಗುತ್ತಿರುವ ನಾಲ್ಕು ಅಂತಸ್ತಿನ ಕಟ್ಟಡದ ನಿವಾಸಿ ಅಲೋಕ್ ಹೇಳಿದ್ದಾರೆ.

“ನಾನು ರಾತ್ರಿ ಪಾಳಿ ಕೆಲಸದಲ್ಲಿದ್ದು, ಅದನ್ನು ಮುಗಿಸಿ ಗಾಢ ನಿದ್ದೆಯಲ್ಲಿದ್ದೆ. ಕೆಡವುವಿಕೆಯ ದೊಡ್ಡ ಶಬ್ದಕ್ಕೆ ನಾನು ಇದ್ದಕ್ಕಿದ್ದಂತೆ ಎಚ್ಚರವಾಯಿತು” ಎಂದು ಮತ್ತೊಬ್ಬ ನಿವಾಸಿ ಪ್ರವೀಣ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...