Homeಕರ್ನಾಟಕಬೆಂಗಳೂರು: ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ಬಂಧಿಸಿ ದೌರ್ಜನ್ಯ ಎಸಗಿದ ಬಿಜೆಪಿ ಸರ್ಕಾರ

ಬೆಂಗಳೂರು: ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ಬಂಧಿಸಿ ದೌರ್ಜನ್ಯ ಎಸಗಿದ ಬಿಜೆಪಿ ಸರ್ಕಾರ

ಪೊಲೀಸರು ಮಹಿಳೆಯೊಬ್ಬರ ‘ತಾಳಿ’ಗೆ ಕೈ ಹಾಕಿ ಹಿಡಿದು ಎಳೆದಿದ್ದಾಗಿ ಹೋರಾಟಗಾರರೊಬ್ಬರು ಆರೋಪಿಸಿದ್ದಾರೆ

- Advertisement -
- Advertisement -

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಮ್ಮ ಮೇಲೆ ಪೊಲೀಸರನ್ನು ಛೂ ಬಿಟ್ಟು ದೌರ್ಜನ್ಯ ನಡೆಸುತ್ತಿದೆ ಎಂದು ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಜನವರಿ 18ರ ಬುಧವಾರದಿಂದ ಹಮ್ಮಿಕೊಂಡಿದ್ದರು. ನಗರದ ಚಳಿಗೂ ಜಗ್ಗದೆ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ, ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧರಣಿಯ ಮೂರನೇ ದಿನವಾದ ಇಂದು ಪೊಲೀಸರು ಪ್ರತಿಭಟನಾ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದಿದ್ದು, ಸುಮಾರು 20 ಬಸ್‌ಗಳಲ್ಲಿ ತುಂಬಿಸಿ ಅಜ್ಞಾತ ಸ್ಥಳಗಳಲ್ಲಿ ಇಟ್ಟಿದ್ದಾಗಿ ಆರೋಪಿಸಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ವೇಳೆ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾಗಿ ಹೋರಾಟಗಾರರು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯ ಕಾರ್ಯದರ್ಶಿ ಉಮಾಮಣಿ, “ಕಳೆದ ಮೂರು ದಿನಗಳಿಂದ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಸರ್ಕಾರದಿಂದ ಯಾವುದೆ ಪ್ರತಿನಿಧಿಗಳು ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಇಂದು ವಿಧಾನಸೌಧ ಮುತ್ತಿಗೆ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದೆವು. ಆದರೆ ಅದಕ್ಕೂ ಮುಂಚೆ ನಮ್ಮನ್ನು ಬಂಧಿಸಿ ದೌರ್ಜನ್ಯ ಎಸಗಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಬಂಧಿಸುವಾಗ ಮಹಿಳೆಯೊಬ್ಬರ ‘ತಾಳಿ’ಗೆ ಕೈ ಹಾಕಿ ಹಿಡಿದು ಎಳೆದಿದ್ದಾಗಿ ಹೋರಾಟಗಾರರೊಬ್ಬರು ಆರೋಪಿಸಿದ್ದಾರೆ. “ಶುಕ್ರವಾರದ ದಿನವಾಗಿ ನಮ್ಮ ಮಾಂಗಲ್ಯಕ್ಕೆ ಕೈ ಹಾಕಿ ಅದನ್ನು ಕಿತ್ತು ಹಾಕಿದ್ದಾರೆ. ಇದು ಸರ್ಕಾರಕ್ಕೆ ಒಳ್ಳೆಯದೆ? ಅವರ ಮನೆಯ ಹೆಣ್ಣು ಮಕ್ಕಳ ಮೇಲೆ ಅವರು ಈ ರೀತಿಯಾಗಿ ವರ್ತಿಸುತ್ತಿದ್ದರೆ? ನಾವು ನಮ್ಮ ಹಕ್ಕುಗಳನ್ನಷ್ಟೆ ಕೇಳುತ್ತಿದ್ದೇವೆ. ಅದು ತಪ್ಪೆ” ಎಂದು ಅವರು ಕೇಳಿದ್ದಾರೆ.

“ಸೇವೆ ಖಾಯಂ ಮಾಡುವುದು, NEP ಜಾರಿಯಾದರೆ 31 ಸಾವಿರ ವೇತನ ನೀಡುವುದು, ಮಿನಿ ಅಂಗನವಾಡಿಯನ್ನು ಮೇಲ್ದರ್ಜೆಗೆ ಏರಿಸುವುದು, ಸುಪ್ರೀಂಕೋರ್ಟ್ ಆದೇಶದಂತೆ ನಿವೃತ್ತಿಯಾದ ಕಾರ್ಯಕರ್ತರಿಗೆ ಮತ್ತು ಸಹಾಯಕಿಯರಿಗೆ ಗ್ರಾಜ್ಯುಟಿ ಮತ್ತು ಪಿಂಚಣಿ ನೀಡುವುದು, ಇಎಸ್‌ಐ ಜಾರಿ ಮತ್ತು ತೀವ್ರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸಂಬಳ ಸಹಿತ ರಜೆ ನೀಡಬೇಕು, ಹೀಗೆ ಐದು ಮುಖ್ಯ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದೇವೆ” ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಬುಧವಾರದಂದು ಬೆಂಗಳೂರು ರೈಲು ನಿಲ್ದಾಣದಿಂದ ಬೃಹತ್‌ ಪ್ರತಿಭಟನಾ ರ್‍ಯಾಲಿ ಮೂಲಕ ಫ್ರೀಡಂ ಪಾರ್ಕಿ‌ಗೆ ತೆರಳುವುದಾಗಿ ಹೇಳಿದ್ದರೂ ಪೊಲೀಸರು ಅದಕ್ಕೆ ಅನುಮತಿ ನೀಡಿರಲಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಹೀಗಾಗಿ ಫ್ರೀಡಂ ಪಾರ್ಕ್‌‌ಗೆ ಆಗಮಿಸಿ ನಾವು ಧರಣಿ ಪ್ರಾರಂಭಿಸಿದ್ದೆವು ಎಂದು ಅವರು ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...