Homeಕರ್ನಾಟಕಬಿಟಿಎಂ ಲೇಔಟ್ ಲೈಂಗಿಕ ದೌರ್ಜನ್ಯ ಪ್ರಕರಣ; ಕೇರಳದಲ್ಲಿ ಆರೋಪಿ ಬಂಧನ

ಬಿಟಿಎಂ ಲೇಔಟ್ ಲೈಂಗಿಕ ದೌರ್ಜನ್ಯ ಪ್ರಕರಣ; ಕೇರಳದಲ್ಲಿ ಆರೋಪಿ ಬಂಧನ

- Advertisement -
- Advertisement -

ಏಪ್ರಿಲ್ 13 ರಂದು ಸುದ್ದಗುಂಟೆಪಾಳ್ಯದ ಬಿಟಿಎಂ ಲೇಔಟ್‌ನ ವಸತಿ ಪ್ರದೇಶದಲ್ಲಿ ತನ್ನ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ 26 ವರ್ಷದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.

ಸಂತೋಷ್ ಡೇನಿಯಲ್ ಎಂಬ ಆರೀಪಿಯು ಜಾಗ್ವಾರ್ ಶೋ ರೂಂನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಮೂರು ರಾಜ್ಯಗಳಲ್ಲಿ 700 ಸಿಸಿಟಿವಿ ಕ್ಯಾಮೆರಾಗಳನ್ನು ಅನುಸರಿಸಿ ವ್ಯಾಪಕ ಹುಡುಕಾಟ ನಡೆಸಿದ ನಂತರ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆತನನ್ನು ಬಂಧಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಲೈಂಗಿಕ ದೌರ್ಜನ್ಯದ ವೀಡಿಯೊ ವೈರಲ್ ಆಗಿದ್ದು, ಮಹಿಳೆ ತನ್ನ ಸ್ನೇಹಿತನೊಂದಿಗೆ ರಾತ್ರಿಯಲ್ಲಿ ನಿರ್ಜನ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಸಂತೋಷ್ ಅವರನ್ನು ಹಿಂಬಾಲಿಸುತ್ತಿದ್ದಾನೆಂದು ಆಕೆಗೆ ತಿಳಿದಿರಲಿಲ್ಲ. ಏನಾಗುತ್ತಿದೆ ಎಂದು ತಿಳಿಯುವ ಮೋದಲೇ ಆತ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ. ಆಘಾತಕ್ಕೊಳಗಾದ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಕೆಲವು ಸೆಕೆಂಡುಗಳ ಕಾಲ ನಿಂತು, ಏನಾಯಿತು ಎಂದು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಾ, ಆತಂಕದಲ್ಲೇ ಮನೆಗೆ ನಡೆದುಕೊಂಡು ಹೋಗಿದ್ದಾರೆ.

ಈ ಘಟನೆ ಏಪ್ರಿಲ್ 3 ರಂದು ನಡೆದರೂ, ಮೂರು ದಿನಗಳ ನಂತರ ವೀಡಿಯೊ ಕಾಣಿಸಿಕೊಂಡಿದ್ದು, ನಗರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 74, 75 ಮತ್ತು 78 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದರು.

ಮೂರು ರಾಜ್ಯಗಳಲ್ಲಿ ವಾರಗಟ್ಟಲೆ ನಡೆಸಿದ ಶೋಧದ ನಂತರ, ಪೊಲೀಸರು ಕೊನೆಗೂ ಕೇರಳದಲ್ಲಿ ಸಂತೋಷ್‌ನನ್ನು ಬಂಧಿಸಿದರು.

ಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ ‘ಎನ್‌ಕೌಂಟರ್’ನಲ್ಲಿ ಹತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...