Homeಕರ್ನಾಟಕಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ : ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ : ಸಾವಿನ ಸಂಖ್ಯೆ 5ಕ್ಕೆ ಏರಿಕೆ

- Advertisement -
- Advertisement -

ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಬು ಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ ಎಂದು ವರದಿಗಳು ಹೇಳಿವೆ.

ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಸಿಬ್ಬಂದಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದ ಅರ್ಮಾನ್, ಮೊಹಮ್ಮದ್ ಸಾಹಿಲ್, ತಿರುಪಾಲಿ, ಶಂಕರ್​​, ಸತ್ಯರಾಜ್ ಎಂಬ ಐವರು ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

ಬದುಕಿ ಬಂದ ಅಯಾನ್ : ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಅಯಾನ್ ಎಂಬವರನ್ನು 13 ಗಂಟೆಗಳ ಸತತ ಕಾರ್ಯಾಚರಣೆಯಲ್ಲಿ ರಕ್ಷಣೆ ಮಾಡಲಾಗಿದೆ. ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಟ್ಟಡ ಕುಸಿಯುವಾಗ 21 ಕಾರ್ಮಿಕರು ಅದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಈಗಾಗಲೇ 13 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಈ ಪೈಕಿ 6 ಮಂದಿಗೆ ತೀವ್ರ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಕೆಲವರು ಅವೇಶಷಗಳಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ಒಂದು ಹ್ಯಾಮರ್, ಮೂರು ಜೆಸಿಬಿಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ.

ಹೆಣ್ಣೂರು ಸಮೀಪದ ಬಾಬಾ ಸಾಬ್ ಪಾಳ್ಯದಲ್ಲಿ 60-40 ಸೈಟ್‌ ಅಳತೆಯಲ್ಲಿ 6 ಅಂತಸ್ತಿನ ಅಪಾರ್ಟ್‌ಮೆಂಟ್ ನಿರ್ಮಿಸಲಾಗುತ್ತಿತ್ತು. ಬಿಹಾರ ಮತ್ತು ಉತ್ತರ ಕರ್ನಾಟಕ ಮೂಲದ 21ಮಂದಿ ಕಾರ್ಮಿಕರು ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದರು. ನಿನ್ನೆ (ಅ.22) ಸಂಜೆ ಭಾರೀ ಮಳೆಯ ನಡುವೆ ಕಟ್ಟಡ ಕುಸಿದು ಬಿದ್ದಿದೆ.

ಮಾಲೀಕನ ವಿರುದ್ದ ಎಫ್‌ಐಆರ್

ಮಲ್ಲೇಶ್ವರಂನಲ್ಲಿ ವಾಸವಿರುವ ಆಂಧ್ರ ಮೂಲದ ಮುನಿರಾಜು ರೆಡ್ಡಿ ಎಂಬುವರಿಗೆ ಸೇರಿದ ಕಟ್ಟಡ ಕುಸಿದು ಬಿದ್ದಿದೆ ಎಂಬ ಮಾಹಿತಿ ದೊರೆತಿದೆ. ಕಳಪೆ ಕಾಮಗಾರಿಯ ಕಾರಣ ಕಟ್ಟಡ ಬುಡಮೇಲಾಗಿ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಮಾಲೀಕ ಮುನಿರಾಜು ರೆಡ್ಡಿ ವಿರುದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ದುರಂತ ಸಂಭವಿಸುತ್ತಿದ್ದಂತೆ ಮುನಿರಾಜು ರೆಡ್ಡಿ, ಅವರ ಪುತ್ರ ಮೋಹನ್ ರೆಡ್ಡಿ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿಯ ಮೇಸ್ತ್ರಿ ನಾಪತ್ತೆಯಾಗಿದ್ದಾರೆ. ಅವರಿಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಚನ್ನಪಟ್ಟಣ ಉಪಕದನ | ರೋಚಕ ಘಟ್ಟ ತಲುಪಿದ ಮೈತ್ರಿ ಜಟಾಪಟಿ : ಕಾದು ನೋಡುವ ತಂತ್ರದಲ್ಲಿ ಯೋಗೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...