Homeಕರ್ನಾಟಕಬೆಂಗಳೂರು: ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ

ಬೆಂಗಳೂರು: ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ

- Advertisement -
- Advertisement -

ಬೆಂಗಳೂರು ನಗರದ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತವಾಗಿದೆ. ಹಳೇ ಕಟ್ಟಡ ಕುಸಿತದಿಂದ ಪಕ್ಕದ ಮನೆಯ ಗೋಡೆಗೆ ಹಾನಿಗೊಳಗಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಲಕ್ಕಸಂದ್ರದ 7ನೇ ಮುಖ್ಯರಸ್ತೆ, 14ನೇ ಕ್ರಾಸ್​ನಲ್ಲಿ 1962 ರಲ್ಲಿ ನಿರ್ಮಿಸಿದ್ದ ಕಟ್ಟಡ ಕುಸಿದಿದ್ದು, ಇತ್ತಿಚೆಗೆ ಇಲ್ಲಿ ಮೆಟ್ರೋ ಕಾಮಗಾರಿ ನಡೆದಿತ್ತು ಎನ್ನಲಾಗಿದೆ. ಇದರಿಂದ ಕಟ್ಟಡದಲ್ಲಿ ಬಿರುಕು ಮೂಡಿದ್ದು, ವಾಸವಿದ್ದವರನ್ನು ಖಾಲಿ ಮಾಡಿಸಲಾಗಿದೆ. ಹೀಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ವಾಸಿಸಲು ಯೋಗ್ಯವಿಲ್ಲದ ಕಟ್ಟಡವಾದರೂ ಬಾಡಿಗೆಗೆ ನೀಡಿದ್ದ, ಕಟ್ಟಡದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಕಟ್ಟಡದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಬೆಳಗ್ಗಿನಿಂದಲೇ ಕಟ್ಟಡ ಬಾಗಲು ಶುರು ಮಾಡಿದ್ದರಿಂದ ಸ್ಥಳೀಯ ಜನರು ಎಚ್ಚರಿಕೆ ವಹಿಸಿದ್ದರು. ಘಟನೆ ಬಗ್ಗೆ ಮೊದಲೇ ಜಾಗ್ರತೆ ವಹಿಸಿದ್ದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದರು.

ಕುಸಿದಿರುವ ಕಟ್ಡದ ಅವಶೇಷಗಳ ಅಡಿಯಲ್ಲಿ ಯಾರಾದರೂ ಸಿಲುಕಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಇಲ್ಲಿಯವರೆಗು ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ. ಮೊದಲ ಜಾಗ್ರತೆ ವಹಿಸಿದ್ದರಿಂದ ಜನರ ಪ್ರಾಣಕ್ಕೆ ಅಪಾಯವಾಗಿಲ್ಲ. ಇಲ್ಲದಿದ್ದರೇ ಭಾರಿ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ.


‌ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಸಿಲಿಂಡರ್‌ ಸ್ಪೋಟಗೊಂಡು ಮೂವರ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read