ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಉದ್ಯಮಿ ಒಬ್ಬರಿಂದ 1.5 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ನಾಲ್ವರು ಜಿಎಸ್‌ಟಿ ಅಧಿಕಾರಿಗಳನ್ನು ಬುಧವಾರ ಬಂಧಿಸಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದ್ದು, ಬೆಂಗಳೂರಿನಲ್ಲಿ ಇಡಿ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ ದೆಹಲಿ ಮೂಲದ ಅಭಿಷೇಕ್, ಸಹಾಯಕ ಅಧಿಕಾರಿ ಸಂತೋಷ್, ಜಿಎಸ್‌ಟಿ ಅಧಿಕಾರಿ ಮನೋಜ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪ್ರಕರಣದಲ್ಲಿ ಬಂಧನಕ್ಕೆ ಒಳಗಾದವರಲ್ಲಿ ಬೆಂಗಳೂರು ವಲಯದ ಕೇಂದ್ರ ತೆರಿಗೆ ಅಧಿಕಾರಿ ಸೂಪರಿಂಟೆಂಡೆಂಟ್, ಜಿಎಸ್‌ಟಿ ಬೆಂಗಳೂರು ವಲಯದ ಇಬ್ಬರು ಹಿರಿಯ ಗುಪ್ತಚರ ಅಧಿಕಾರಿಗಳು ಮತ್ತು ಬೆಂಗಳೂರು ವಲಯ ಜಿಎಸ್‌ಟಿಯ ಗುಪ್ತಚರ ಅಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳು ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘‘ಉದ್ಯಮಿಯೊಬ್ಬರನ್ನು ಅಪಹರಿಸಿ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಮಾರು ನಾಲ್ಕೈದು ಮಂದಿ ತನ್ನನ್ನು ಕರೆದುಕೊಂಡು ಹೋಗಿ ಅಪಾರ ಪ್ರಮಾಣದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. 1.5 ಕೋಟಿ ಪಡೆದ ನಂತರ ಉದ್ಯಮಿಯನ್ನು ಬಿಟ್ಟು ಬಿಟ್ಟಿದ್ದಾರೆ” ಎಂದು ಬೆಂಗಳೂರು ಆಯುಕ್ತ ಬಿ ದಯಾನಂದ ಹೇಳಿದ್ದಾರೆ ಎಂದು ವರದಿಯಾಗಿದೆ.
ಇದನ್ನೂಓದಿ:ಅಯೋಧ್ಯೆ | ಬಿಜೆಪಿ ಮತ್ತು ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಾಂತರ ರೂ.ಗಳ ಭೂ ಹಗರಣ: ಅಖಿಲೇಶ್ ಯಾದವ್ ಆರೋಪ
ಬೆಂಗಳೂರು ವಲಯ ಘಟಕದ (ಕೇಂದ್ರ ಜಿಎಸ್‌ಟಿ) ಜಿಎಸ್‌ಟಿ ಗುಪ್ತಚರ ಮಹಾನಿರ್ದೇಶಕರ ಅಧಿಕಾರಿಗಳು ಅನುಮತಿಯಿಲ್ಲದೆ ದಾಳಿ ನಡೆಸಿದ್ದಾರೆ ಎಂದು ತನಿಖೆಯ ಸಂದರ್ಭದಲ್ಲಿ ಪೊಲೀಸರು ಕಂಡುಕೊಂಡಿದ್ದಾರೆ ಆಯುಕ್ತರು ತಿಳಿಸಿದ್ದಾರೆ.
ಮಂಜೂರಾತಿ ಇಲ್ಲದೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿರುವುದು ಕಂಡುಬಂದಿದ್ದು, ಉದ್ಯಮಿಯನ್ನು ಎರಡು ದಿನಗಳ ಕಾಲ ಅಕ್ರಮ ಬಂಧನದಲ್ಲಿರಿಸಿರುವುದು ಕೂಡಾ ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗಕ್ಕೆ (ಸಿಸಿಬಿ) ವರ್ಗಾಯಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.ಉದ್ಯಮಿ
ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು


