Homeಕರ್ನಾಟಕಬೆಂಗಳೂರು: ಸಹೋದ್ಯೋಗಿಗಳಿಂದ ಜಾತಿ ನಿಂದನೆ, ಕಿರುಕುಳ; ದಲಿತ ವ್ಯಕ್ತಿ ಮನನೊಂದು ಆತ್ಮಹತ್ಯೆಗೆ ಶರಣು

ಬೆಂಗಳೂರು: ಸಹೋದ್ಯೋಗಿಗಳಿಂದ ಜಾತಿ ನಿಂದನೆ, ಕಿರುಕುಳ; ದಲಿತ ವ್ಯಕ್ತಿ ಮನನೊಂದು ಆತ್ಮಹತ್ಯೆಗೆ ಶರಣು

- Advertisement -
- Advertisement -

ಸಹೋದ್ಯೋಗಿಗಳಿಂದ ಜಾತಿ ಆಧಾರಿತ ನಿಂದನೆ, ಕಿರುಕುಳ ಅನುಭವಿಸುತ್ತಿದ್ದ ಕಾರಣಕ್ಕೆ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಮನನೊಂದು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಎಚ್‌ಎಎಲ್ ನಿವಾಸಿ ವಿವೇಕ್ ಕುಮಾರ್‌ (35) ಮೃತ ದುರ್ದೈವಿ. ಅವರು ಯೆಮಲೂರಿನ ಲೈಫ್ ಸ್ಟೈಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಜೂನ್ 3, ಶನಿವಾರದಂದು ತನ್ನ ಸಹೋದ್ಯೋಗಿಗಳ ವಿರುದ್ಧ ದೂರು ನೀಡಿದ ಕೆಲವೇ ಗಂಟೆಗಳ ನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅದಕ್ಕೂ ಮುನ್ನ ಆತ್ಮಹತ್ಯೆಗೆ ಕಾರಣವೇನೆಂದು ವಿವರಿಸಿ ವಿಡಿಯೋ ಮಾಡಿರುವ ವಿವೇಕ್, ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಆ ಬಳಿಕ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ವಿವೇಕ್ ರಾಜ್ – NIFT ಬೆಂಗಳೂರಿನ ಹಳೆಯ ವಿದ್ಯಾರ್ಥಿ – ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ವಿವೇಕ್ ರಾಜ್ ಅವರು ಪರಿಶಿಷ್ಟ ಜಾತಿ (ಎಸ್‌ಸಿ) ಚಾಮರ್ ಸಮುದಾಯಕ್ಕೆ ಸೇರಿದವರು.

ವಿವೇಕ್ ಅವರ ತಂದೆ ರಾಜಕುಮಾರ್ ಅವರು ಜೂನ್ 4 ರಂದು ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ವೈಟ್‌ಫೀಲ್ಡ್ ಪೊಲೀಸರು ಇದೀಗ ಸಂಸ್ಥೆಯ ವ್ಯವಸ್ಥಾಪಕಿ ಮಾಲತಿ ಮತ್ತು ಸಹೋದ್ಯೋಗಿಗಳಾದ ಕುಮಾರ್ ಸೂರಜ್ ಮತ್ತು ನಿತೇಶ್ ಕುಮಾರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿದ್ದಾರೆ.

ಎಫ್ಐಆರ್ ಪ್ರಕಾರ, ವಿವೇಕ್ ಹಲವಾರು ತಿಂಗಳುಗಳಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದರು ಮತ್ತು ಅವರ ಮೇಲೆ ಜಾತಿವಾದಿ ನಿಂದನೆಗಳನ್ನು ಮಾಡಲಾಗಿತ್ತು. ಕಚೇರಿಯಲ್ಲಿನ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ವಿವೇಕ್ ಅವರು ಮಾನೋವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ 3ರಂದು ಅವರು ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

ತಾನು ಕೆಳಜಾತಿಯವರು ಎಂಬ ಕಾರಣಕ್ಕೆ ತನ್ನ ಸಹೋದ್ಯೋಗಿಗಳಾದ ಮಾಲತಿ ಎಸ್ ಮತ್ತು ನಿತೀಶ್ ಕುಮಾರ್ ಅವರು ಕಿರುಕುಳ ನೀಡುತ್ತಿದ್ದಾರೆ ಮತ್ತು ತಮ್ಮ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ ಎಂದು ವಿವೇಕ್ ರಾಜ್ ಮಾರತ್ತಹಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಕಂಪನಿಯ ಎಚ್‌ಆರ್‌ ಕುಮಾರ್‌ ಸೂರಜ್‌ ಅವರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರುತ್ತೇನೆ ಎಂದು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಜೂನ್ 3 ರಂದು ಎಫ್‌ಐಆರ್ ದಾಖಲಿಸಿದ್ದರು.

ಸಹೋದ್ಯೋಗಿಗಳು ಕಿರುಕುಳ ನೀಡುತ್ತಿದ್ದರು ಎಂದು ವಿಡಿಯೋದಲ್ಲಿ ವಿವೇಕ್‌ ಆರೋಪಿಸಿದ್ದಾರೆ. ಅವರ ಕಿರುಕುಳ ತಾಳಲಾರದೆ ಆತ್ಮಹತ್ಯೆಯ ಹಾದಿ ಹಿಡಿದಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಇದೀಗ ವಿಡಿಯೋ ನೋಡಿದ ಎಚ್‌ಎಎಲ್ ಪೊಲೀಸರು ವಿವೇಕ್ ಮನೆಗೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಧ್ಯ ನಿತೀಶ್ ಎಂಬಾತನನ್ನು ಬಂಧಿಸಿದ್ದಾರೆ. ಇನ್ನಿಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

0
ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ...