Homeಕರ್ನಾಟಕಚುನಾವಣಾಧಿಕಾರಿಗಳ ಜೊತೆ ಕಾಣಿಸಿಕೊಂಡ ಬಿಜೆಪಿ ಏಜೆಂಟ್: ದೂರು ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ

ಚುನಾವಣಾಧಿಕಾರಿಗಳ ಜೊತೆ ಕಾಣಿಸಿಕೊಂಡ ಬಿಜೆಪಿ ಏಜೆಂಟ್: ದೂರು ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ

- Advertisement -
- Advertisement -

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ಏಪ್ರಿಲ್ 26 ಮತ್ತು ಮೇ 7ರಂದು ನಡೆಯಲಿದೆ. ಈ ಹಿನ್ನೆಲೆ 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಇಂದಿನಿಂದ (ಏ.13) ಆರಂಭಗೊಂಡಿದೆ.

ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ವಿಶೇಷ ಚೇತನರು (ಶೇ.40ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳವರು) ಹಾಗೂ ಮತದಾರರ ಪಟ್ಟಿಯಲ್ಲಿ ಗುರುತಿಸಿರುವವರಿಗೆ ಅಂಚೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ.

ಏಪ್ರಿಲ್ 13ರಿಂದ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಮೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ 95,128 ಮತದಾರರಿದ್ದಾರೆ. ಇವರಲ್ಲಿ ಕೇವಲ 6,206 ಮಂದಿ ಅಂಚೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಏಜೆಂಟ್ ಚುನಾವಣಾಧಿಕಾರಿ ಜೊತೆಗೂಡಿ ಮತದಾನ ಮಾಡುವ ನಾಲ್ಕೈದು ಮನೆಗಳಿಗೆ ತೆರಳಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರ ಬೆಂಬಲಿಗರು, ಬಿಜೆಪಿ ಏಜೆಂಟ್‌ ಓರ್ವ ಚುನಾವಣಾಧಿಕಾರಿಗಳ ತಂಡದೊಂದಿಗೆ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಅಲ್ಲದೇ, ವಿಡಿಯೋ ಕೂಡ ಮಾಡಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಸುಮಾರು ಒಂದೂವರೆ ನಿಮಿಷದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚುನಾವಣಾಧಿಕಾರಿಗಳ ಜೊತೆಗಿದ್ದ ಬಿಜೆಪಿ ಏಜೆಂಟ್‌ನನ್ನು ಕಿರಣ್ ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರ ಚುನಾವಣಾ ಏಜೆಂಟ್ ಪ್ರವೀಣ್ ಪೀಟರ್ ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದು, ನೀತಿ ಸಂಹಿತೆ ಉಲ್ಲಂಘಿಸಿರುವ ಸಂಬಂಧಪಟ್ಟ ಅಧಿಕಾರಿಯನ್ನು ಈ ಕೂಡಲೇ ಅಮಾನತು ಮಾಡಿ, ಬಿಜೆಪಿ ಏಜೆಂಟ್ ಉಪಸ್ಥಿತರಿದ್ದ ವೇಳೆ ನಡೆದ ಮತದಾನ ಪ್ರಕ್ರಿಯೆಯನ್ನು ಅಸಿಂಧುಗೊಳಿಸಲು ಆಗ್ರಹಿಸಿದ್ದಾರೆ.

“ಹಿರಿಯ ನಾಗರಿಕರು, ವಿಕಲ ಚೇತನರು ಮನೆಯಿಂದಲೇ ಮತದಾನ ಮಾಡುವ ಕಾರ್ಯ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ಬಿಜೆಪಿ ಪಕ್ಷದ ಏಜೆಂಟ್ ಚುನಾವಣಾಧಿಕಾರಿಗಳ ಜತೆಗೂಡಿ ಮತದಾನ ಮಾಡುವ ನಾಲೈದು ಮನೆಗಳಿಗೆ ತೆರಳಿದ್ದು, ನಿಮ್ಮ ಚುನಾವಣಾಧಿಕಾರಿಗಳು ಮತ್ತು ಮೈಕ್ರೋ ಅಬ್ ಸರ್ವರ್ ಮೂಕಪ್ರೇಕ್ಷಕರಾಗಿ ವರ್ತಿಸಿರುವುದು ಕಂಡು ಬಂದಿದೆ. ಆದ್ದರಿಂದ ಈ ಕೂಡಲೇ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಹಾಗೂ ಆ ಮತವನ್ನು ಅಸಿಂಧುಗೊಳಿಸಬೇಕು. ಈ ಸಂಬಂಧ ತಕ್ಷಣವೇ ಕ್ರಮ ಕೈಗೊಂಡು, ನೀತಿ ಸಂಹಿತೆ ಉಲ್ಲಂಘಿಸಿರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...