Homeಕರ್ನಾಟಕಬೆಂಗಳೂರು: ಬುಧವಾರದವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬುಧವಾರದವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

- Advertisement -
- Advertisement -

ನವೆಂಬರ್ 13ರಿಂದ ನವೆಂಬರ್ 16ರವರೆಗೆ (ಭಾನುವಾರದಿಂದ ಬುಧವಾರದವರೆಗೆ) ಬೆಂಗಳೂರಿನಲ್ಲಿ ಲಘುವಾಗಿ ಸಾಧಾರಣ ಮಳೆಯಾಗಲಿದೆ. ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ನವೆಂಬರ್ 12ರ ಶನಿವಾರದಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನವು 19.4 ಸೆಲ್ಸಿಯಸ್‌ ಆಗಿದ್ದು, ಬೆಳಿಗ್ಗೆ ಚಳಿಯ ವಾತಾವರಣವಿತ್ತು. ಮುಂದಿನ 48 ಗಂಟೆಗಳಲ್ಲಿ ಕನಿಷ್ಠ ತಾಪಮಾನವು 24 ರಿಂದ 18 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.

“ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಕವಿಯುವ ಸಾಧ್ಯತೆ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 24 ಮತ್ತು 18 ಡಿಗ್ರಿ ಸೆಲಿಯಸ್‌ನಷ್ಟಿರುವ ಸಾಧ್ಯತೆಯಿದೆ” ಎಂದು ಐಎಂಡಿ  ತಿಳಿಸಿದೆ.

ನವೆಂಬರ್ 13ರವರೆಗೆ ಕರ್ನಾಟಕದ ಕೆಲವು ಭಾಗಗಳಲ್ಲಿ ಎಲ್ಲೋ ಅಲರ್ಟ್ ‌ಘೋಷಿಸಿದ್ದಾರೆ. ಐಎಂಡಿ ಪ್ರಕಾರ, “ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಗುಡುಗು ಸಹಿತ, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.”

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...