Homeಕರ್ನಾಟಕಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ.

- Advertisement -
- Advertisement -

ಸಿನಿಮಾ ಇತಿಹಾಸ, ಮಾಹಿತಿ, ಫೋಟೋಗಳನ್ನು ದಾಖಲಿಸುವುದರ ಜೊತೆಗೆ ಇಂದಿನ ಪೀಳಿಗೆಗೆ ಸಿನಿಮಾರಂಗದ ದಶಕಗಳ ಹಿಂದಿನ ಅಪೂರ್ವ ಮಾಹಿತಿ, ಫೋಟೋಗಳನ್ನು ತಲುಪಿಸುವುದು, ಸಿನಿಮಾ ಕುರಿತಾಗಿ ಉತ್ತಮ ಅಭಿರುಚಿ ರೂಪಿಸುವ ಆಶಯದೊಂದಿಗೆ ‘ಚಿತ್ರಪಥ’ ಆರ್ಕೈವ್ ಪೋರ್ಟಲ್‌ ಅನಾವರಣಗೊಳ್ಳುತ್ತಿದೆ.

ಹಿರಿಯ ಸಿನಿಮಾ ಕಲಾವಿದರು ಹಾಗೂ ತಂತ್ರಜ್ಞರನ್ನು ಸ್ಮರಿಸುವುದರ ಜೊತೆಗೆ ಅಪರೂಪದ ಫೋಟೋ, ಪತ್ರ, ಮಾಹಿತಿಗಳನ್ನು ದಾಖಲಿಸುವುದು, ಉತ್ತಮ ಬರಹ, ಲೇಖನ, ವಿಶ್ಲೇಷಣೆಗಳ ಮೂಲಕ ಸಿನಿಮಾ ಕುರಿತಾಗಿ ಒಳನೋಟಗಳನ್ನು ನೀಡುವ ನಿಟ್ಟಿನಲ್ಲಿ ‘ಚಿತ್ರಪಥ’ ಪೋರ್ಟಲ್ ಕೆಲಸ ಮಾಡಲಿದೆ.

ಮಾರ್ಚ್‌ 6ರ ಶನಿವಾರ ಬೆಂಗಳೂರಿನ ಮಲ್ಲೇಶ್ವರ 18ನೇ ಕ್ರಾಸ್‌ನ ರೇಣುಕಾಂಬ ಸ್ಟುಡಿಯೋದಲ್ಲಿ ಕನ್ನಡ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ‘ಚಿತ್ರಪಥ’ವನ್ನು ಅನಾವರಣಗೊಳಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌, ಚಿತ್ರಸಾಹಿತಿ ಕವಿರಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ. ಜಾಗತಿಕ ಸಿನಿಮಾದ ವಸ್ತು, ವಿಷಯವನ್ನು ಕನ್ನಡಿಗರಿಗೆ ತಲುಪಿಸುವ ಪುಟ್ಟ ವಾಹಕವಾಗಿಯೂ ‘ಚಿತ್ರಪಥ’ ಆರ್ಕೈವ್ ಪೋರ್ಟಲ್ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಿತ್ರರಂಗ ನಡೆದುಬಂದ ಹಾದಿಯನ್ನು ದಾಖಲಿಸುವ, ಅಲ್ಲಿನ ಶ್ರೀಮಂತಿಕೆ, ಬೆರಗು-ಹೊಳಪನ್ನು ಹೇಳುವ, ಚಿತ್ರರಂಗದ ಅಂದಿನ ಕಾರ್ಯವೈಖರಿ, ಶೂಟಿಂಗ್ ಸ್ಟುಡಿಯೋಗಳು ಹಾಗೂ ಪರಿಕರಗಳ ವಿವರಗಳನ್ನು ನೀಡುವುದು, ಶ್ರೇಷ್ಠ ತಂತ್ರಜ್ಞರು ಹಾಗೂ ಕಲಾವಿದರ ಕುರಿತ ಮಾಹಿತಿ ನೀಡುವ ನಿಟ್ಟಿನಲ್ಲಿ ಹೆಜ್ಜೆ ಇಡುವ ಒಂದು ಪ್ರಯತ್ನ. ಚಿತ್ರರಂಗದ ದಂತಕಥೆಗಳು ಎನಿಸಿದ ತಂತ್ರಜ್ಞರು ಹಾಗೂ ಕಲಾವಿದರ ಅಪರೂಪದ ಫೋಟೋಗಳೊಂದಿಗಿನ ಮಾಹಿತಿ, ಪ್ರತಿಭಾವಂತರ ಕುರಿತ ಟಿಪ್ಪಣಿಗಳು ಇಲ್ಲಿ ಇರಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

‘ಚಿತ್ರಪಥ’ದಲ್ಲಿ ಪ್ರಮುಖವಾಗಿ ಕನ್ನಡ ಚಿತ್ರರಂಗದ ಬಗ್ಗೆ ಹೆಚ್ಚಿನ ಮಾಹಿತಿ ಇರಲಿದೆ. ಕನ್ನಡ ಚಿತ್ರರಂಗದ ಹಿರಿಯ ಸಿನಿಮಾ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರು ಸೆರೆಹಿಡಿದ ಫೋಟೋಗಳು ಪ್ರಮುಖವಾಗಿ ಪೋರ್ಟಲ್‍ನಲ್ಲಿ ಬಳಕೆಯಾಗಲಿವೆ ಎಂದು ತಿಳಿಸಲಾಗಿದೆ.

ಪೋರ್ಟಲ್‌ನಲ್ಲಿ ನಾಸ್ಟಾಲ್ಜಿಯಾ, ಚಿತ್ರ-ಕಥೆ, ಶೂಟಿಂಗ್ ಸೋಜಿಗ, ಮಾಹಿತಿ–ವಿಶೇಷ, ನೆನಪು, ಪೋಸ್ಟರ್ ಮಾಹಿತಿ, ಅತಿಥಿ ಅಕ್ಷರ ಎಂಬ ವಿಭಾಗಗಳಿರಲಿವೆ. ಫೋಟೋಗಳ ಹಿಂದಿನ ಕತೆ, ಸಂದರ್ಭಗಳನ್ನು ಸ್ವತಃ ಫೋಟೋಗಳನ್ನು ಸೆರೆಹಿಡಿದ ಸ್ಥಿರಚಿತ್ರ ಛಾಯಾಗ್ರಾಹಕರು ನಿರೂಪಿಸಿದ್ದು, ಈ ವೀಡಿಯೋಗಳನ್ನು ’ಚಿತ್ರಪಥ’ ಯೂಟ್ಯೂಬ್ ಚಾನೆಲ್‌ನಲ್ಲಿ ನೋಡಬಹುದು.

ಹದಿಮೂರು ವರ್ಷಗಳ ಕಾಲ ಕನ್ನಡಪ್ರಭ, ವಿಜಯ ಕರ್ನಾಟಕ, ದಿ ಸ್ಟೇಟ್‌ ವೆಬ್‌ ಪೋರ್ಟಲ್‌ನಲ್ಲಿ ಸಿನಿಮಾ ಪತ್ರಕರ್ತನಾಗಿ ಕೆಲಸ ಮಾಡಿರುವ ಶಶಿಧರ ಚಿತ್ರದುರ್ಗ ಈ ಪೋರ್ಟಲ್ ಆರಂಭಿಸುತ್ತಿದ್ದಾರೆ. ಇವರು ಸಿನಿಮಾಗೆ ಸಂಬಂಧಿಸಿದಂತೆ ಏಳು ಪುಸ್ತಕಗಳನ್ನು ಪ್ರಕಟಿಸಿದ್ದು, 2015ನೇ ಸಾಲಿನ ರಾಜ್ಯಸರ್ಕಾರದ ಸಿನಿಮಾ ಸಬ್ಸಿಡಿ ಕಮಿಟಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.


ಇದನ್ನೂ ಓದಿ: 75% ಖಾಸಗಿ ಉದ್ಯೋಗಗಳು ಸ್ಥಳೀಯರಿಗೆ ಮೀಸಲು – ಹರಿಯಾಣ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...