Homeಮುಖಪುಟಪ್ಯಾಲೆಸ್ತೀನ್ ಪರ ಜಾಗೃತಿ ಕಾರ್ಯಕ್ರಮದಲ್ಲಿದ್ದವರ ಮೇಲೆ ಹಲ್ಲೆ: ಬೆಂಗಳೂರು ಪೊಲೀಸರ ವಿರುದ್ಧ ಆರೋಪ

ಪ್ಯಾಲೆಸ್ತೀನ್ ಪರ ಜಾಗೃತಿ ಕಾರ್ಯಕ್ರಮದಲ್ಲಿದ್ದವರ ಮೇಲೆ ಹಲ್ಲೆ: ಬೆಂಗಳೂರು ಪೊಲೀಸರ ವಿರುದ್ಧ ಆರೋಪ

- Advertisement -
- Advertisement -

ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಓರ್ವನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ಸುಮಾರು 20 ಜನರನ್ನು ಬಂಧಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ಯಾಲೆಸ್ತೀನ್‌ ಪರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಕ್ವಿಲಿನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಜನರೊಂದಿಗೆ ಮಾತನಾಡಲು ಮತ್ತು ಪ್ಯಾಲೆಸ್ತೀನ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸಲು ಭಾನುವಾರ ಸಂಜೆ 4.45ರ ಸುಮಾರಿಗೆ ಫ್ರೇಜರ್ ಟೌನ್‌ನ ಕ್ಯಾರಿ ಫ್ರೆಶ್ ಸೂಪರ್‌ಮಾರ್ಕೆಟ್ ಬಳಿ 25-30 ಜನರು ಜಮಾಯಿಸಿದ್ದೆವು. ನಾವು ಚಹಾ ಸೇವಿಸುತ್ತಿದ್ದೆವು.  ಪೊಲೀಸರು ನಮ್ಮನ್ನು ಹಿಡಿದು ಬಂಧಿಸಲು ಪ್ರಾರಂಭಿಸಿದರು. ಆಗ ನಾವು ಘೋಷಣೆಗಳನ್ನು ಕೂಗಿದೆವು ಎಂದು ಹೇಳಿದ್ದಾರೆ.

ನಮ್ಮ ಜೊತೆಯಿದ್ದ ಅರಿಂದಮ್ ಎಂಬ ಟ್ರೇಡ್ ಯೂನಿಯನ್ ಕಾರ್ಯಕರ್ತನ ಮೇಲೆ ಪೊಲೀಸ್ ವ್ಯಾನ್‌ನೊಳಗೆ ಹಲ್ಲೆ ಮಾಡಲಾಗಿದೆ. ಅವನ ತಲೆ ಸೇರಿದಂತೆ ದೇಹದ ಇತರ ಭಾಗಗಳ ಮೇಲೆ ಹೊಡೆಯುತ್ತಲೇ ಇದ್ದರು. ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಅವರನ್ನು ತೆರಳಲು ಬಿಟ್ಟಿಲ್ಲ. ಪುರುಷ ಪೊಲೀಸ್ ಸಿಬ್ಬಂದಿ ನಾಲ್ವರು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಒಬ್ಬ ಮಹಿಳಾ ಪ್ರೊಫೆಸರ್ ಜೊತೆ ಎಷ್ಟು ಹಿಂಸಾತ್ಮಕವಾಗಿ ನಡೆದಿಕೊಂಡಿದ್ದಾರೆ ಎಂದರೆ ಆಕೆಯ ಕೈಯಲ್ಲಿ ಗುರುತುಗಳಿವೆ ಎಂದು ಅಕ್ವಿಲಿನ್ ಹೇಳಿದ್ದಾರೆ.

ಪೂರ್ವ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಈ ಕುರಿತು ಪ್ರತಿಕ್ರಿಯಿಸಿದ್ದು, ಈ ಗುಂಪು ಏನಾದರೂ ಮಾಡಲು ಪ್ರಾರಂಭಿಸಿದೆಯೇ ಅಥವಾ ಇಲ್ಲವೇ ಎಂಬುದು ಪ್ರಶ್ನೆಯಲ್ಲ. ಹೈಕೋರ್ಟ್ ಒಂದು ಸ್ಥಳದಲ್ಲಿ ಮಾತ್ರ ಪ್ರತಿಭಟನೆಗೆ ಅನುಮತಿ ನೀಡಿದೆ ಮತ್ತು ಅವರು ಅನುಮತಿಯನ್ನು ತೆಗೆದುಕೊಂಡು ಅಲ್ಲಿ ಪ್ರತಿಭಟಿಸಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಎರಡು ತಿಂಗಳ ಹಿಂದೆ ಮನೆಯಲ್ಲೇ ಕುಳಿತು ತಯಾರಿಸಲಾಗಿದೆ: ಮಮತಾ ಬ್ಯಾನರ್ಜಿ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...