Homeಕರೋನಾ ತಲ್ಲಣಬೆಂಗಳೂರು: ನಿಧಾನಗತಿಯಲ್ಲಿ ಕೊರೊನಾ ಏರಿಕೆ, ಎರಡು ಶಾಲೆಗಳಲ್ಲಿ 31 ಪ್ರಕರಣಗಳು

ಬೆಂಗಳೂರು: ನಿಧಾನಗತಿಯಲ್ಲಿ ಕೊರೊನಾ ಏರಿಕೆ, ಎರಡು ಶಾಲೆಗಳಲ್ಲಿ 31 ಪ್ರಕರಣಗಳು

- Advertisement -
- Advertisement -

ರಾಜ್ಯದಲ್ಲಿ ನಿಧಾನಗತಿಯಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಸ್ಕ್‌ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಬೆಂಗಳೂರಿನ ಎರಡು ಖಾಸಗಿ ಶಾಲೆಯ 31 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಬಿಬಿಎಂಪಿಯ ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಸೋಮವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕು ಇರುವ ತರಗತಿಯ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.

ಕಳೆದ ಗುರುವಾರ (ಜೂನ್ 9) ರಾಜಗೋಪಾಲ ನಗರದ ಖಾಸಗಿ ಶಾಲೆಯ 5 ಮತ್ತು 6ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು.  ಎರಡು ಶಾಲೆಗಳಿಂದ ಒಟ್ಟು 31 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರುಮತ್ತು ಸಿಬ್ಬಂದಿ ವರ್ಗವನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ಶಾಲೆಯ ತರಗತಿ ಮತ್ತು ಆವರಣಕ್ಕೆ ಸೋಂಕು ನಿವಾರಾಕ ದ್ರಾವಣ ಸಿಂಪಡಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ದಾಸರಹಳ್ಳಿ ವಲಯದ ಆರೋಗ್ಯ ವೈದ್ಯಾಧಿಕಾರಿ ಸುರೇಶ್ ರುದ್ರಪ್ಪ ತಿಳಿಸಿದ್ದಾರೆ.

ಸೋಮವಾರ ರಾಜ್ಯದಲ್ಲಿ ಒಟ್ಟು 415 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 400 ಪ್ರಕರಣಗಳು ವರದಿಯಾಗಿವೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳು 3,688 ಇದ್ದು, ಬೆಂಗಳೂರಿನಲ್ಲಿಯೇ 3,542 ಪ್ರಕರಣಗಳಿವೆ.

ಕಳೆದ ಜೂನ್ 11 ರಂದು ರಾಜ್ಯ ಆರೋಗ್ಯ ಇಲಾಖೆ ಮಾಸ್ಕ್ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಮಾರ್ಷಲ್‌ಗಳು ಅಥವಾ ಪೊಲೀಸ್ ಸಿಬ್ಬಂದಿಯ ಸಹಾಯ ಪಡೆಯುವಂತೆ ಸುತ್ತೊಲೆಯಲ್ಲಿ ಸೂಚಿಸಲಾಗಿದೆ.

ಮುಚ್ಚಿದ ಸ್ಥಳಗಳಾದ ಶಾಪಿಂಗ್‌ ಮಾಲ್‌ಗಳು, ರೆಸ್ಟೊರೆಂಟ್‌ಗಳು, ಪಬ್‌ಗಳು, ಹೋಟೆಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಮಾಸ್ಕ್‌ ಧರಿಸಿದ್ದರೆ ಮಾತ್ರವೇ ಪ್ರವೇಶ ಕಲ್ಪಿಸುವುದು ಆಯಾ ಸಂಸ್ಥೆಯ ಮಾಲೀಕರು, ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ (ಬಸ್‌ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ ಎಂದು ಸೂಚಿಸಲಾಗಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...