Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಖುಲಾಸೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಖುಲಾಸೆ

- Advertisement -
- Advertisement -

ಮನೆ ಕೆಲಸದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸೋಮವಾರ (ಡಿ.29) ಆರೋಪ ಮುಕ್ತಗೊಳಿಸಿ ಮಹತ್ವದ ಆದೇಶ ನೀಡಿದೆ. ಕಳೆದ ತಿಂಗಳು ಇದೇ ಸಂತ್ರಸ್ತೆಯ ಘನತೆಗೆ ಚ್ಯುತಿ ಉಂಟು ಮಾಡಿದ ರೇವಣ್ಣ ವಿರುದ್ಧದ ಆರೋಪವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿತ್ತು.

ಹೈಕೋರ್ಟ್‌ ನಿರ್ದೇಶನದಂತೆ ಪ್ರಕರಣದ ವಿಚಾರಣೆಯನ್ನು ವಿಶೇಷ ಮ್ಯಾಜಿಸ್ಟ್ರೇಟ್‌ ಕೆ.ಎನ್‌ ಶಿವಕುಮಾರ್‌ ಅವರು ವಿಚಾರಣೆ ನಡೆಸಿದ್ದರು.

ಸಂತ್ರಸ್ತೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿರುವ ಕಾರಣಕ್ಕೆ ಪ್ರಕರಣದ ಸಂಜ್ಞೇಯ ಪರಿಗಣಿಸಲು ನಿರಾಕರಿಸಿರುವ ನ್ಯಾಯಾಲಯ, ರೇವಣ್ಣ ವಿರುದ್ಧದ ಆರೋಪಗಳನ್ನು ಕೈಬಿಟ್ಟು ಆದೇಶಿಸಿದೆ.

ಪ್ರಕರಣದ ಮೊದಲ ಆರೋಪಿಯಾಗಿರುವ ಎಚ್.ಡಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ‌ಮಾಡಲಾಗಿತ್ತು. ಆದರೆ, ಈ ಅಪರಾಧಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿದ್ದು, ಈ ವಿಳಂಬವನ್ನು ಮನ್ನಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

2025ರ ನವೆಂಬರ್ 19ರಂದು ಮನೆ ಕೆಲಸದ ಮಹಿಳೆಯ ಘನತೆಗೆ ಧಕ್ಕೆಯುಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಚ್.ಡಿ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಸಂಜ್ಞೇಯ ತೆಗೆದುಕೊಂಡಿದ್ದ ವಿಚಾರಣಾ‌ಧೀನ ನ್ಯಾಯಾಲಯದ ಕ್ರಮವನ್ನು ರದ್ದುಪಡಿಸಿದ್ದ ಹೈಕೋರ್ಟ್, ಲೈಂಗಿಕ ದೌರ್ಜನ್ಯ ಆರೋಪವನ್ನು ಪರಿಗಣಿಸಲು ಪ್ರಕರಣವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಮರಳಿಸಿತ್ತು.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಎಚ್‌.ಡಿ ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಂ ಐ ಅರುಣ್‌ ಅವರ ಏಕಸದಸ್ಯ ಪೀಠವು ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ರ (ಮಹಿಳೆಯ ಘನತೆಗೆ ಚ್ಯುತಿ) ಅಡಿ ಸಂಜ್ಞೇಯ ತೆಗೆದುಕೊಂಡು 42ನೇ ಎಸಿಜೆಎಂ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಿತ್ತು. ಆದರೆ, ಐಪಿಸಿ 354ಎ (ಲೈಂಗಿಕ ದೌರ್ಜನ್ಯ) ಅಡಿ ಸೂಕ್ತ ಆದೇಶ ಹೊರಡಿಸಲು ಪರಿಗಣಿಸುವಂತೆ ಪ್ರಕರಣವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಹಿಂದಿರುಗಿಸಿತ್ತು. ಇದೀಗ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಸಂಜ್ಞೇಯ ತೆಗೆದುಕೊಳ್ಳಲು ವಿಚಾರಣಾ ನ್ಯಾಯಾಲಯವು ನಿರಾಕರಿಸಿದೆ.

ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ ರೇವಣ್ಣ ಹಾಗೂ ಅವರ ಪುತ್ರ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ 2024ರ ಏಪ್ರಿಲ್‌ 28ರಂದು ಪ್ರಕರಣ ದಾಖಲಾಗಿತ್ತು.

ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್‌ 354ಎ, 354ಡಿ, 506, 509ರ ಅಡಿ ಪ್ರಕರಣ ದಾಖಲಿಸಲಾಗಿದ್ದು ರೇವಣ್ಣ ಅವರನ್ನು ಮೊದಲನೇ ಆರೋಪಿ ಹಾಗೂ ಪ್ರಜ್ವಲ್‌ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.

ರೇವಣ್ಣ ಅವರು ತಮ್ಮ ಪತ್ನಿ ಭವಾನಿ ಮನೆಯಲ್ಲಿ ಇಲ್ಲದ ವೇಳೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತಿದ್ದರು. ಅಲ್ಲದೆ ನನ್ನ ಮಗಳಿಗೂ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದನೆ ನೀಡುತ್ತಿದ್ದು, ಮಗಳು ಹೆದರಿ ನಂಬರ್‌ ಬ್ಲಾಕ್‌ ಮಾಡಿಕೊಂಡಿದ್ದಳು. ಇದರಿಂದ ನಾನು ಕೆಲಸ ತೊರೆದಿದ್ದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದರು.

ಜೀವ ಭಯ ಇರುವುದರಿಂದ ನನಗೆ ಹಾಗೂ ನನ್ನ ಮಗಳ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌ ಡಿ ರೇವಣ್ಣ ಹಾಗೂ ಪ್ರಜ್ವಲ್‌ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಕೋರಿದ್ದರು.

ಈ ಮಧ್ಯೆ, ಸಂತ್ರಸ್ತೆಯನ್ನು ಅಪಹರಿಸಿದ ಸಂಬಂಧ ರೇವಣ್ಣ, ಅವರ ಪತ್ನಿ ಭವಾನಿ ಸೇರಿದಂತೆ 9 ಮಂದಿ ವಿರುದ್ಧ ಕೆ.ಆರ್‌ ಪೇಟೆಯಲ್ಲಿ ಬೇರೊಂದು ಪ್ರಕರಣ ದಾಖಲಾಗಿದೆ. ಇದರಲ್ಲಿ ರೇವಣ್ಣ ಮೊದಲ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...

ವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ ವಿಜಯನ್ ಆರೋಪ

ತಮಿಳುನಾಡಿನ ಬಳಿಕ ಕೇರಳ ವಿಧಾನಸಭೆಯಲ್ಲೂ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮಂಗಳವಾರ (ಜ.20) ಜಟಾಪಟಿ ನಡೆದಿದೆ. ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣದಲ್ಲಿನ ಕೇಂದ್ರ ಸರ್ಕಾರವನ್ನು ಟೀಕಿಸುವ ಕೆಲ ಸಾಲುಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್...

ಶಬರಿಮಲೆ ಚಿನ್ನ ಕಳವು ಪ್ರಕರಣ: ಕೇರಳ, ಕರ್ನಾಟಕ, ತಮಿಳುನಾಡಿನ 21 ಸ್ಥಳಗಳಲ್ಲಿ ಇಡಿ ದಾಳಿ

ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಮಂಗಳವಾರ ಮೂರು ರಾಜ್ಯಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ...

ಡಿಜಿಪಿ ರಾಮಚಂದ್ರ ರಾವ್ ವಿಡಿಯೊ ಪ್ರಕರಣ: ‘ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’: ಡಾ. ಜಿ. ಪರಮೇಶ್ವರ್

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯೊಂದಿಗೆ ಅಸಭ್ಯ ವರ್ತನೆ ನಡೆಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ, ಪಕ್ಷ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡ ಅತ್ಯಂತ ಕಿರಿಯ ನಾಯಕ 

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾಗಿ 45 ವರ್ಷದ ನಿತಿನ್ ನಬಿನ್ 2026 ಜನವರಿ 20ರ, ಮಂಗಳವಾರ ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಕೇಂದ್ರ ಸಚಿವರಾಗಿರುವ ಜೆ.ಪಿ. ನಡ್ಡಾ ಅವರ ಸ್ಥಾನದಲ್ಲಿ...