Homeಕರ್ನಾಟಕನಿರ್ಮಲಾ ಸೀತಾರಾಮನ್ ವಿರುದ್ದ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ : ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ?...

ನಿರ್ಮಲಾ ಸೀತಾರಾಮನ್ ವಿರುದ್ದ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ : ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ? ಎಂದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಆರೋಪದ ಮೇಲೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ದ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಸೆ.28) ಆದೇಶಿಸಿದೆ.

ಚುನಾವಣಾ ಬಾಂಡ್ ಮೂಲಕ ಹೆದರಿಸಿ ಸುಲಿಗೆ ಮಾಡಲಾಗಿದೆ. ಹಾಗಾಗಿ, ನಿರ್ಮಲಾ ಸೀತಾರಾಮನ್ ಹಾಗೂ ಮತ್ತಿತರರ ವಿರುದ್ದ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ)ಯ ಸಹ ಅಧ್ಯಕ್ಷ ಆದರ್ಶ್ ಅಯ್ಯರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ದೂರು ಪರಿಗಣಿಸಿದ ನ್ಯಾಯಾಲಯ, ನಿರ್ಮಲಾ ಸೀತಾರಾಮನ್, ಜಾರಿ ನಿರ್ದೇಶನಾಲಯ(ಇಡಿ) ದ ಅಧಿಕಾರಿಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ಸಮಿತಿಯ ಪದಾಧಿಕಾರಿಗಳು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ ವಿಜಯೇಂದ್ರ ಮತ್ತು ಬಿಜೆಪಿ ರಾಜ್ಯ ಸಮಿತಿಯ ಪದಾಧಿಕಾರಿಗಳ ವಿರುದ್ದ ಎಫ್‌ಐಆರ್‌ ದಾಖಲಿಸಲು ತಿಲಕ್ ನಗರ ಪೊಲೀಸರಿಗೆ ನಿರ್ದೇಶನ ನೀಡಿದೆ.

ಮುಂದಿನ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ನಿಗದಿ ಮಾಡಿದೆ.

ರಾಜೀನಾಮೆ ಕೊಡ್ತಾರಾ? ಸಿಎಂ ಸಿದ್ದರಾಮಯ್ಯ

ನಿರ್ಮಲಾ ಸೀತಾರಾಮನ್ ಮೇಲೆ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿರುವುದರಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, “ಹೆಚ್‌.ಡಿ ಕುಮಾರಸ್ವಾಮಿ ಮೊದಲು ನಿರ್ಮಲಾ ಸೀತಾರಾಮನ್ ಅವರನ್ನು ಕೆಳಗಿಳಿಸಲಿ, ಬಳಿಕ ನನ್ನ ರಾಜೀನಾಮೆ ಕೇಳಲಿ. ಚುನಾವಣಾ ಬಾಂಡ್ ದುರುಪಯೋಗ ಮಾಡಿರುವುದರಿಂದ ಪ್ರಧಾನಿ ಮೋದಿ ಕೂಡ ರಾಜೀನಾಮೆ ಕೊಡಬೇಕು” ಎಂದರು.

ಇದನ್ನೂ ಓದಿ : ಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ ‘ಶುದ್ಧೀಕರಣ’ ಮಾಡಿದ ಬಿಜೆಪಿ ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...