Homeಕರ್ನಾಟಕಜೆಡಿಎಸ್ ಚಿಹ್ನೆ ಬಳಸದಂತೆ, ಪದಾಧಿಕಾರಿಗಳ ನೇಮಕ ಮಾಡದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ

ಜೆಡಿಎಸ್ ಚಿಹ್ನೆ ಬಳಸದಂತೆ, ಪದಾಧಿಕಾರಿಗಳ ನೇಮಕ ಮಾಡದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ

- Advertisement -
- Advertisement -

ಜೆಡಿಎಸ್‌ ಉಚ್ಚಾಟಿತ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರು ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ ಸುದ್ದಿಗೋಷ್ಠಿ ಹಮ್ಮಿಕೊಳ್ಳುವಂತಿಲ್ಲ ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವಂತಿಲ್ಲ ಎಂದು ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯ ಶನಿವಾರ ಮಧ್ಯಂತರ ನಿರ್ಬಂಧಕಾಜ್ಞೆ ವಿಧಿಸಿದೆ.

ಇಬ್ರಾಹಿಂ ಅವರು ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿದ್ದರೂ, ಪಕ್ಷದ ಚಿಹ್ನೆ ಹೆಸರು ಬಳಸುತ್ತಿರುವುದನ್ನು ಪ್ರಶ್ನಿಸಿ ಜೆಡಿಎಸ್‌‌ ಪ್ರಧಾನ ಕಾರ್ಯದರ್ಶಿ ಎ ಪಿ ರಂಗನಾಥ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ 9ನೇ ಹೆಚ್ಚುವರಿ ಸಿಟಿ ಸಿವಿಲ್‌ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ವಿಧಿಸಿದ್ದು ಪ್ರಕರಣವನ್ನು 12 ಫೆಬ್ರವರಿ 2024ಕ್ಕೆ ಮುಂದೂಡಲಾಗಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ನೋಟಿಸ್‌ ನೀಡುವ ಸಂಬಂಧ ಸೂಕ್ತ ಆದೇಶ ರವಾನಿಸದಿದ್ದರೆ ನೋಟಿಸ್‌ ನೀಡುವಲ್ಲಿ ವಿಳಂಬ ಉಂಟಾಗಿ ಅರ್ಜಿದಾರರ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ. ಅಂತಹ ಸಂದರ್ಭಗಳಲ್ಲಿ ಅರ್ಜಿದಾರ ತೊಂದರೆ ಮತ್ತು ಅನ್ಯಾಯಕ್ಕೆ ತುತ್ತಾಗುತ್ತಾನೆ. ವಿಳಂಬದಿಂದಾಗಿ ನಿರ್ಬಂಧಕಾಜ್ಞೆ ನೀಡುವ ಉದ್ದೇಶಕ್ಕೆ ಸೋಲುಂಟಾಗುತ್ತದೆ. ಪ್ರಕರಣದ ಸಂದರ್ಭ ಮತ್ತು ಸನ್ನಿವೇಶ ಗಮನಿಸಿ ಮುಂದಿನ ವಿಚಾರಣೆಯವರೆಗೆ ಅರ್ಜಿದಾರರು ಮನವಿ ಮಾಡಿದಂತೆ ಮಧ್ಯಂತರ ನಿರ್ಬಂಧಕಾಜ್ಞೆ ನೀಡುತ್ತಿರುವುದಾಗಿ ನ್ಯಾಯಾಲಯದ ಆದೇಶ ತಿಳಿಸಿದೆ.

ಸಿಎಂ ಇಬ್ರಾಹಿಂ ಅವರನ್ನು ಅಧ್ಯಕ್ಷ ಹುದ್ದೆಯಿಂದ ಉಚ್ಚಾಟಿಸಿರುವುದರಿಂದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಅವರು ಕೈಗೊಂಡ ಕ್ರಮಗಳು , ನಿರ್ಣಯಗಳು ಹಾಗೂ ನೀಡಿದ ಆದೇಶಗಳನ್ನು ಅಕ್ರಮ, ನಿರಂಕುಶ, ಅಧಿಕಾರರಹಿತ, ಅನೂರ್ಜಿತ ಹಾಗೂ ನಿರರ್ಥಕ ಎಂದು ಘೋಷಿಸಬೇಕು ಎಂದು ಎ ಪಿ ರಂಗನಾಥ ಕೋರಿದ್ದರು.

ಇಬ್ರಾಹಿಂ ಅವರು ಈ ವರ್ಷದ ಜನವರಿ 9 ರಿಂದ19ರವರೆಗೆ ಪಕ್ಷಕ್ಕೆ 2ರಿಂದ 8ನೇ ಪ್ರತಿವಾದಿಗಳ ನೇಮಕಾತಿ ಮಾಡಿದ್ದು, ಅದನ್ನು ರದ್ದುಗೊಳಿಸಬೇಕು. ಅಲ್ಲದೆ ಇಬ್ರಾಹಿಂ ಅವರು ಪಕ್ಷದ ಹೆಸರು, ಚಿಹ್ನೆ, ಲೆಟರ್‌ ಹೆಡ್‌ ಹಾಗೂ ಪತ್ರ ವ್ಯವಹಾರ ನಡೆಸದಂತೆ ಶಾಶ್ವತ ತಡೆಯಾಜ್ಞೆ ನೀಡಬೇಕು ಎಂಬುದಾಗಿ ರಂಗನಾಥ ವಿನಂತಿಸಿದ್ದರು.

ರಾಜ್ಯ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದಕ್ಕೆ ಹಾಗೂ ಅವರು ಜೆಡಿಎಸ್‌ ಜೊತೆ ಗುರುತಿಸಿಕೊಳ್ಳುವುದಕ್ಕೆ ಶಾಶ್ವತ ನಿರ್ಬಂಧ ಹೇರಬೇಕು. ಜೊತೆಗೆ 2ರಿಂದ 8ನೇ ಪ್ರತಿವಾದಿಗಳು ಪದಾಧಿಕಾರಿಗಳಾಗಿ ಮುಂದುವರೆಯದಂತೆ ತಡೆ ಬೀಡಬೇಕು ಎಂದು ಅವರು ಮನವಿ ಮಾಡಿದ್ದರು.

ಇಬ್ರಾಹಿಂ ಅವರಲ್ಲದೆ ಇಮ್ರಾನ್‌ ಪಾಷಾ, ಉಮಾದೇವಿ, ಲಕ್ಷ್ಮೀ ಬಿ, ಹೆನ್ರಿಟಾ ಮಾರಿಯಾ, ಥೆರೇಸಾ ಬೋಸ್‌, ಎಸ್‌ ವಹೀದಾ ಬಾನು ಹಾಗೂ ನಜೀಮ್‌ ಅವರನ್ನು ಪ್ರಕರಣದ ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

ಇದನ್ನೂ ಓದಿ: ಹಾರೋಹಳ್ಳಿ ಶ್ರೀರಾಮ ಪೂಜೆ; ಸಂಸದ ಪ್ರತಾಪ್ ಸಿಂಹಗೆ ದಲಿತ ಮುಖಂಡರಿಂದ ಘೇರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...