Homeಕರ್ನಾಟಕಬೆಂಗಳೂರು | ಹಸುಗಳ ಕೆಚ್ಚಲು ಕೊಯ್ದ ದುಷ್ಕರ್ಮಿಯ ಬಂಧನ

ಬೆಂಗಳೂರು | ಹಸುಗಳ ಕೆಚ್ಚಲು ಕೊಯ್ದ ದುಷ್ಕರ್ಮಿಯ ಬಂಧನ

- Advertisement -
- Advertisement -

ಬೆಂಗಳೂರಿನ ವಿನಾಯಕನಗರ ಪ್ರದೇಶದಲ್ಲಿ ಎರಡು ಹಸುಗಳ ಕೆಚ್ಚಲು ಕೊಯ್ದು, ಮತ್ತೊಂದು ಹಸುವಿಗೆ ಗಾಯಗೊಳಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ದುಷ್ಕರ್ಮಿಯನ್ನು ಬಿಹಾರದ ಚಂಪಾರಣ್ ಜಿಲ್ಲೆಯ ಶೇಖ್ ನಸ್ರು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬೆಂಗಳೂರು

ಆರೋಪಿಯನ್ನು ಜನವರಿ 25 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿ ಹೇಳಿದೆ. ಹಸುಗಳ ಮೇಲೆ ದಾಳಿ ಮಾಡುವಾಗ ಆರೋಪಿಯು ಕುಡಿದಿದ್ದ ಎಂದು ಪೊಲೀಸರ (ಪಶ್ಚಿಮ) ಉಪ ಆಯುಕ್ತ ಎಸ್. ಗಿರೀಶ್ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಮತ್ತು ಬಟ್ಟೆ ಚೀಲ ಹೊಲಿಗೆ ಅಂಗಡಿಯಲ್ಲಿ ನಸ್ರು ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎಂದು ಗಿರೀಶ್ ಹೇಳಿದ್ದಾರೆ. ದುಷ್ಕೃತ್ಯದಲ್ಲಿ ಬೇರೆ ಯಾರೂ ಭಾಗಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಹಸುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ರಸ್ತುತ ಅಪಾಯದಿಂದ ಪಾರಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು

ಭಾನುವಾರ ಬೆಳಗಿನ ಜಾವ ಈ ಘಟನೆ ನಡೆದಿದೆ ಎಂದು ಹಾಲು ಮಾರಾಟಗಾರರಾಗಿರುವ ಹಸುಗಳ ಮಾಲೀಕ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬೆಳಿಗ್ಗೆ ಹಾಲು ಕರೆಯಲು ತೆರಳಿದಾಗ ಹಸುಗಳ ಕೆಚ್ಚಲಿನಲ್ಲಿ ರಕ್ತಸ್ರಾವವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಬಿಜೆಪಿ ಪ್ರತಿಭಟನೆ ನಡೆಸಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಹಿಂದೆ ಇರುವ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳದಿದ್ದರೆ ನಾವು ‘ಕಪ್ಪು ಸಂಕ್ರಾಂತಿ’ ಆಚರಿಸುತ್ತೇವೆ ಎಂದು ಅಶೋಕ್ ಹೇಳಿದ್ದಾರೆ.

ಇದನ್ನೂಓದಿ:  ಅಸ್ಸಾಂ | ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

ಅಸ್ಸಾಂ | ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...