Homeಕರ್ನಾಟಕಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

- Advertisement -
- Advertisement -

ಬೆಂಗಳೂರಿನ ಮಧ್ಯದ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ 1942ರ ಕ್ವಿಟ್ ಇಂಡಿಯಾ ಚಳವಳಿ ಹುತಾತ್ಮ ಸ್ಮಾರಕ ಸಂರಕ್ಷಣೆಗೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ವೇದಿಕೆ ಹಾಗೂ ಇತರೆ ಎಲ್ಲ ಜನಪರ ಸಂಘಟನೆಗಳು ಸಹಿ ಸಂಗ್ರಹ ಅಭಿಯಾನ ಆರಂಭಿಸಿವೆ.

ಸಹಿ ಸಂಗ್ರಹ ಮಾಡಿ ಜುಲೈ 20ರಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಅಭಿಯಾನಕ್ಕೆ ಕೈ ಜೋಡಿಸಿ, ಮನವಿ ಪತ್ರಕ್ಕೆ ತಮ್ಮ ಹೆಸರನ್ನು ಸೇರಿಸುವ ಮೂಲಕ ಸಾಮಾಜಿಕ ಮಾಧ್ಯದಲ್ಲಿ ಬೆಂಬಲ ಸೂಚಿಸುವಂತೆ ಜನಪರ ಹೋರಾಟಗಾರರು ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಖಿಲ ಭಾರತ ಸ್ವಾತಂತ್ರ್ಯ ಯೋಧರ ಸಮಿತಿ ಪ್ರಧಾನ ಕಾರ್ಯದರ್ಶಿ ಅಪ್ಪರಾವ್ ನವಲೆ, ಸಮಿತಿ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ಜಾನ್ಸಿರಾಣಿ, ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ, ಕೆಜೆವಿಎಸ್‌ನ ಈ ಬಸವರಾಜು, ಸಮತಾ ಸಂಘಟನೆ ಪ್ರಭಾ ಬೆಳವಂಗಲ, ಕರ್ನಾಟಕ ಜನಶಕ್ತಿಯ ಸಿರಿಮನೆ ನಾಗರಾಜ, ಸಮುದಾಯ ಸಾಂಸ್ಕೃತಿಕ ಸಂಘಟನೆಯ ಗುಂಡಣ್ಣ ಚಿಕ್ಕಮಗಳೂರು, ಸಾಮಾಜಿಕ ಹೋರಾಟಗಾರ ಎಚ್.ಎಂ.ವೆಂಕಟೇಶ್, ಸಾಮಾಜಿಕ ಕಾರ್ಯಕರ್ತ ಅಲ್ದೂರ್ ಶಿವರಾಜ್, ಭೂಮಿಕ ಪತ್ರಿಕೆಯ ಸಂಪಾದಕ ಲಕ್ಷ್ಮಣ್‌, ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯು.ಬಸವರಾಜ್ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಸಂಘಟನೆಗಳ ಮನವಿ ಪತ್ರದಲ್ಲಿ ಏನಿದೆ?

ನಮ್ಮ ದೇಶವು ‘ಆಜಾದಿ 75’ ವರ್ಷಾಚರಣೆಯನ್ನು ದೇಶದೆಲ್ಲಡೆ ಸಂಭ್ರಮದಿಂದ ಆಚರಿಸುತ್ತಿರುವುದು ತಮಗೆ ತಿಳಿದ ಸಂಗತಿಯಾಗಿದೆ.

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ಜನಸಾಮಾನ್ಯರು ‌ಕೂಡ ಸ್ವಾತಂತ್ರ್ಯಕ್ಕಾಗಿ ಅಂದಿನ ವಿವಿಧ ಪ್ರದೇಶಗಳಲ್ಲಿ ಹಲವು ರೀತಿಯ ತ್ಯಾಗ ಬಲಿದಾನದ ಹೋರಾಟಗಳನ್ನು ನಡೆಸಿದ್ದಾರೆ. ಅದರಲ್ಲಿ 1942 ರಲ್ಲಿ ‌ಮಹಾತ್ಮಾ ಗಾಂಧಿಜೀಯವರು ಕರೆ ನೀಡಿದ ‘ಕ್ವಿಟ್ ಇಂಡಿಯಾ’ ಚಳವಳಿ ಕರೆಗೆ ಓಗೊಟ್ಟು ಬೆಂಗಳೂರಿನ ‘ಸೆಂಟ್ರಲ್ ಕಾಲೇಜ್‌’ನ ವಿದ್ಯಾರ್ಥಿಗಳು ನಡೆಸಿದ ನಡೆಸಿದ ಹೋರಾಟ ಸ್ಪೂರ್ತಿದಾಯಕವಾದುದ್ದು.
ವಿದ್ಯಾರ್ಥಿಗಳು ಅಂದು ನಡೆಸಿದ ಹೋರಾಟದ ಮೇಲೆ ಅಂದಿನ ಬ್ರಿಟಿಷ್‌ ಪೊಲೀಸರು ಗುಂಡಿನ‌ದಾಳಿ ನಡೆಸಿದ ಪರಿಣಾಮ ಸೆಂಟ್ರಲ್ ಕಾಲೇಜಿನ ವಿದ್ಯಾರ್ಥಿಗಳಾದ ಶಾಮಣ್ಣ ಬೇಟೆ ರಂಗಪ್ಪ, ಜಿ.ವಿ.ತಿರುಮಲಯ್ಯ, ಪ್ರಲ್ಹಾದ ಶೆಟ್ಟಿ ಹಾಗೂ ಗುಂಡಪ್ಪ ಎನ್ನುವ ನಾಲ್ಕು ವಿದ್ಯಾರ್ಥಿಗಳು ಹುತಾತ್ಮರಾದರು.

ಈ ಹುತಾತ್ಮರ ನೆನಪಿನಲ್ಲಿ ಬೆಂಗಳೂರು‌ ನಗರ ಪಾಲಿಕೆ 1972ರಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ‘ಹುತಾತ್ಮರ ನೆನಪಿನಲ್ಲಿ ಸ್ಮಾರಕ’ ಸ್ಥಾಪಿಸಿ ಅವರಿಗೆ ಗೌರವ ಸಲ್ಲಿಸಿದೆ. ಆದರೆ ಬೆಂಗಳೂರಿನ ಕೇಂದ್ರಸ್ಥಾನದಲ್ಲಿರುವ ಆ ಹುತಾತ್ಮ ಸ್ಮಾರಕದ ಸುತ್ತ ಇತ್ತೀಚಿನ ವರ್ಷಗಳಲ್ಲಿ ಎದ್ದಿರುವ ಅನಧಿಕೃತ ಕಟ್ಟಡದ ಪರಿಣಾಮ ಅಲ್ಲಿರುವ ‘ಹುತಾತ್ಮ ಸ್ಮಾರಕ’ವೇ ಸಾರ್ವಜನಿಕವಾಗಿ ಮರೆಯಾಗಿ ಹೋಗಿದೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಇರುವ ಈ ಹುತಾತ್ಮ ಸ್ಮಾರಕವನ್ನು ಸಂರಕ್ಷಿಸಬೇಕು ಮತ್ತು ಮೈಸೂರು ಬ್ಯಾಂಕ್ ವೃತ್ತವನ್ನು ‘ಹುತಾತ್ಮ ವೃತ್ತ’ವೆಂದು ಘೋಷಿಸಬೇಕೆಂದು ಈ ಹಿಂದೆಯೇ ಹಲವು ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಎಚ್.ಎಸ್.ದೊರೆಸ್ವಾಮಿಯವರ ನೇತೃತ್ವದಲ್ಲಿ ಹಲವು ಸ್ವಾತಂತ್ರ್ಯ ಹೋರಾಟಗಾರರು ಮತ್ತು ಹಲವು ಸಂಘಟನೆಗಳು ಚಳವಳಿ ನಡೆಸಿ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದ್ದರು. ಆದರೆ ಆ ಬಗ್ಗೆ ಇದುವರೆಗೂ ಯಾವುದೇ ಸೂಕ್ತ ಕ್ರಮವಹಿಸದಿರುವುದು ನೋವಿನ‌ ಸಂಗತಿ.

ಆದುದರಿಂದ ಈಗ ದೇಶ ‘ಆಜಾದಿ 75’ರ ಆಚರಣೆಯಲ್ಲಿದೆ. ಇಂತಹ ಸನ್ನಿವೇಶದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಹೆಚ್ಚಿನ ಗೌರವ ನೀಡಬೇಕಿರುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಅಲ್ಲದೆ ಆಧುನಿಕತೆಯ ಭರಾಟೆಯಲ್ಲಿ ಸಿಲುಕಿರುವ ವಿದ್ಯಾರ್ಥಿ ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಇಂತಹ ಹುತಾತ್ಮರ ಬಗ್ಗೆ ತಿಳಿಯಪಡಿಸುವುದು ತೀರ ಅವಶ್ಯವಿದೆ.

ಇದನ್ನೂ ಓದಿರಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಈ ಹಿನ್ನಲೆಯಲ್ಲಿ ತಾವು ಬೆಂಗಳೂರಿನ ಕೇಂದ್ರಭಾಗದಲ್ಲಿರುವ ಆ ಹುತಾತ್ಮ ಸ್ಮಾರಕವನ್ನು ಸಾರ್ವಜನಿಕರ ಕಾಣುವಂತೆ ಮಾಡುವುದು ಹಾಗೂ ಅದರ ದರ್ಶನಕ್ಕೆ ಮುಕ್ತ ಲಭ್ಯವಾಗುವಾಗುವಂತೆ ಕೂಡಲೇ ಕ್ರಮವಹಿಸಬೇಕು ಎಂದು ಕೋರುತ್ತವೆ.

ನಮ್ಮ ಸಂಘಟನೆ ಹಾಗೂ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ವೇದಿಕೆ ಹಾಗೂ ಇತರೆ ಎಲ್ಲ ಜನಪರ ಸಂಘಟನೆಗಳೊಂದಿಗೆ ಸೇರಿ ಇದೇ ಆಗಸ್ಟ್ 9ರ ಕ್ವಿಟ್ ಇಂಡಿಯಾ ನೆನಪಿನಲ್ಲಿ ಒಂದು ಕಿರು ಕಾರ್ಯಕ್ರಮವನ್ನು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲು ನಿರ್ಧರಿಸಿದ್ದೇವೆ. ಅದಕ್ಕೆ ಅಲ್ಲಿ ಸೂಕ್ತ ಸ್ಥಳಾವಕಾಶ ಮಾಡಿಕೊಡಲು ಕೋರುತ್ತೇವೆ ಮತ್ತು ಮುಂದಿನ ತಮ್ಮ‌ಸಚಿವ ಸಂಪುಟದ ಸಭೆಯಲ್ಲಿ ಮೈಸೂರು ಬ್ಯಾಂಕ್ ವೃತ್ತವನ್ನು ‘ಹುತಾತ್ಮರ ವೃತ್ತ’ ಎಂದು ಅಧಿಕೃತವಾಗಿ ಘೋಷಿಸಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಅಮೂಲ್ಯ ಜೀವಗಳನ್ನು ತೆತ್ತ ಆ ಹುತಾತ್ಮರಿಗೆ ಸೂಕ್ತ ಗೌರವವನ್ನು ತಮ್ಮ ಸರ್ಕಾರ ಸಲ್ಲಿಸಲು ಕೋರುತ್ತಿದ್ದೇವೆ. ಈ ಬಗ್ಗೆ ತಮ್ಮ‌ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂದು‌ ಭಾವಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...