Homeಕರ್ನಾಟಕಬೆಂಗಳೂರು: ದೇವಸ್ಥಾನದಲ್ಲಿ ದಲಿತ ಮಹಿಳೆಗೆ ಹಲ್ಲೆ ನಡೆಸಿದ ಧರ್ಮದರ್ಶಿಯ ಬಂಧನ

ಬೆಂಗಳೂರು: ದೇವಸ್ಥಾನದಲ್ಲಿ ದಲಿತ ಮಹಿಳೆಗೆ ಹಲ್ಲೆ ನಡೆಸಿದ ಧರ್ಮದರ್ಶಿಯ ಬಂಧನ

- Advertisement -
- Advertisement -

ದೇವಸ್ಥಾನದ ಆವರಣದಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣನನ್ನು ಬಂಧಿಸಿದ್ದಾರೆ. ಡಿಸೆಂಬರ್ 21 ರಂದು ನಡೆದ ಈ ಘಟನೆಯು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಸಂತ್ರಸ್ತೆ ಹೇಮಾವತಿ ಅವರು ಜನವರಿ 4ರ ಗುರುವಾರದಂದು ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದು, ಘಟನೆ ಡಿಸೆಂಬರ್ 21 ರಂದು ಸಂಭವಿಸಿದೆ ಎಂದು ತಿಳಿಸಿದ್ದಾರೆ. ದೇವಾಲಯ ಪ್ರವೇಶಿಸಿದ ಮಹಿಳೆಗೆ ಕಾಲಿನಿಂದ ಒದ್ದು, ಮನಬಂದಂತೆ ಥಳಿಸಿ, ತಲೆಗೂದಲು ಹಿಡಿದು ಹೊರಗೆಳೆದುಹಾಕಿದ್ದು ವಿಡಿಯೋದಲ್ಲಿ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಮಹಿಳೆಗೆ ಮನಬಂದಂತೆ ಥಳಿಸಲಾಗಿದೆ. ಕಾಲಿನಿಂದ ಒದೆಯಲಾಗಿದೆ. ಕೂದಲು ಹಿಡಿದು ಹೊರಗೆಳೆದುಹಾಕಲಾಗಿದೆ. ಅಲ್ಲದೆ ಕಟ್ಟಿಗೆ ತೆಗೆದುಕೊಂಡು ಹೊಡೆದಿರುವ ಸಿಸಿಕ್ಯಾಮರ ದೃಶ್ಯಗಳನ್ನು ನೋಡಬಹುದಾಗಿದೆ.

ಈ ವಿಡಿಯೋ ಆಧರಿಸಿ ಧರ್ಮದರ್ಶಿ ಮುನಿಕೃಷ್ಣ ವಿರುದ್ಧ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ಹೇರಿಲ್ಲ ಎಂದು ವರದಿಯಾಗಿದೆ. ಆದರೆ ಆರೋಪಿ ತಾನು ಜಾತಿ ದೌರ್ಜನ್ಯ ನಡೆಸಿಲ್ಲ ಎಂದು ಪೊಲೀಸರ ಬಳಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

“ವೆಂಕಟೇಶ್ವರ ಸ್ವಾಮಿಯು ನನ್ನ ಪತಿಯಾಗಿದ್ದು, ಹಾಗಾಗಿ ನಾನು ಆ ಮೂರ್ತಿಯ ಪಕ್ಕದಲ್ಲಿ ಕುಳಿತುಕೊಳ್ಳಲು ಬಿಡಿ ಎಂದು ಹಠ ಮಾಡಿದರು. ಅದಕ್ಕೆ ಅವಕಾಶ ಕೊಡದಿದ್ದಾಗ ಆಕೆ ಅರ್ಚಕರಿಗೆ ಉಗಿದರು. ಅಲ್ಲಿಂದ ಹೊರಹೋಗಲು ನಿರಾಕರಿಸಿದಾಗ ಬಲವಂತವಾಗಿ ಥಳಿಸಿ ಹೊರಗೆಳೆದು ಹಾಕಲಾಯಿತು” ಎಂದು ಆರೋಪಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...