Homeಕರ್ನಾಟಕಬೆಂಗಳೂರಿನಲ್ಲಿ ಭೀಕರ ಘಟನೆ: ತನ್ನ ಮಗಳನ್ನು ನಾಲ್ಕನೇ ಅಂತಸ್ತಿನಿಂದ ಎಸೆದು ಕೊಂದ ವೈದ್ಯೆಯ ಬಂಧನ

ಬೆಂಗಳೂರಿನಲ್ಲಿ ಭೀಕರ ಘಟನೆ: ತನ್ನ ಮಗಳನ್ನು ನಾಲ್ಕನೇ ಅಂತಸ್ತಿನಿಂದ ಎಸೆದು ಕೊಂದ ವೈದ್ಯೆಯ ಬಂಧನ

- Advertisement -
- Advertisement -

ದಂತ ವೈದ್ಯೆಯೊಬ್ಬರು ಅಪಾರ್ಟ್‌ಮೆಂಟ್‌ನ ನಾಲ್ಕನೇ ಅಂತಸ್ತಿನಿಂದ ನಾಲ್ಕು ವರ್ಷದ ಸ್ವಂತ ಮಗಳನ್ನು ಎಸೆದು ಕೊಂದ ಅಮಾನುಷ ಘಟನೆಯೊಂದು ಬೆಂಗಳೂರಿನಲ್ಲಿ ವರದಿಯಾಗಿದೆ. ಗುರುವಾರ ನಡೆದ ಈ ಭೀಕರ ಘಟನೆಯು ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ.

ಮಗುವನ್ನು ಎಸೆದ ನಂತರ ಆಕೆಯೂ ಸಹ ರಕ್ಷಣ ಕಂಬಗಳನ್ನು ದಾಟಿ ಸ್ವಲ್ಪ ಹೊತ್ತು ನಿಂತಿದ್ದರು. ಅದನ್ನು ಗಮನಿಸಿದ ಕುಟುಂಬದ ಸದಸ್ಯರು ಆಕೆಯನ್ನು ವಾಪಸ್ ಮನೆಯೊಳಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಎಸ್‌.ಆರ್‌ ನಗರದ ನಿವಾಸಿಯಾದ ದಂತ ವೈದ್ಯೆಯು ನಾಲ್ಕನೇ ಅಂತಸ್ತಿನಿಂದ ಮಗುವನ್ನು ಎಸೆದ ನಂತರ ಆ ಮಗುವು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ಕು ವರ್ಷ ಮಗು ವಾಕ್ ಮತ್ತು ಶ್ರವಣ ದೋಷದ ಸಮಸ್ಯೆ ಎದುರಿಸುತ್ತಿತ್ತು. ಇದರಿಂದ ವೈದ್ಯೆ ಖಿನ್ನತೆಗೊಳಗಾಗಿದ್ದಳು. ಆ ಕಾರಣದಿಂದಾಗಿಯೇ ಮಗವನ್ನು ಎಸೆದಿದ್ದಾಳೆ ಎನ್ನಲಾಗುತ್ತಿತ್ತು, ಈ ಕುರಿತು ಆಕೆಯ ಪತಿ ಪೊಲೀಸ್ ದೂರು ನೀಡಿದ ನಂತರ ವೈದ್ಯೆಯನ್ನು ಬಂಧಿಸಲಾಗಿದೆ.

“ಪ್ರಕರಣದ ಕುರಿತು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತೇವೆ. ಸದ್ಯಕ್ಕೆ ಬಂಧಿತ ಮಹಿಳೆಯ ಆರೋಗ್ಯ ಸ್ಥಿತಿ ಚೆನ್ನಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ: ಮನೆಯೇ ಇಲ್ಲದವರು ಏನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...