Homeಮುಖಪುಟಬೆಂಗಳೂರು ಚಲನಚಿತ್ರೋತ್ಸವ | ಹಿರಿಯ ನಟಿ ಶಬಾನಾ ಅಝ್ಮಿಗೆ 'ಜೀವಮಾನ ಸಾಧನೆ ಪ್ರಶಸ್ತಿ'

ಬೆಂಗಳೂರು ಚಲನಚಿತ್ರೋತ್ಸವ | ಹಿರಿಯ ನಟಿ ಶಬಾನಾ ಅಝ್ಮಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’

- Advertisement -
- Advertisement -

ಹದಿನಾರನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀಡಲಾಗುವ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಭಾರತೀಯ ಚಲನಚಿತ್ರರಂಗದ ಖ್ಯಾತ ನಟಿ ಶಬಾನಾ ಅಝ್ಮಿ ಅವರನ್ನು ಆಯ್ಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ಸರ್ಕಾರ ರಚಿಸಿತ್ತು. ಸಮಿತಿಯು ಸಭೆ ಸೇರಿ ಶಬಾನಾ ಅಝ್ಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಸರ್ಕಾಕ್ಕೆ ಶಿಫಾರಸ್ಸು ಮಾಡಿದೆ.

ಹೆಸರಾಂತ ಚಲನಚಿತ್ರ ನಟಿ ಶಬಾನಾ ಅಝ್ಮಿ ಅವರನ್ನು ಜೀವಮಾನದ ಸಾಧನೆಗಾಗಿ ರಾಜ್ಯ ಅವಿರೋಧವಾಗಿ ಆಯ್ಕೆ ಮಾಡಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 1ರಂದು ಉದ್ಘಾಟನೆಗೊಂಡ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದು (ಮಾ.8) ಸಮಾರೋಪಗೊಳ್ಳಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುಲೋಚನಾ ಸಭಾಂಗಣದಲ್ಲಿ ಸಂಜೆ 6.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಶಬಾನಾ ಅಝ್ಮಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಶಬಾನಾ ಅಝ್ಮಿ ಸಂಕ್ಷಿಪ್ತ ಪರಿಚಯ

ಶಬಾನಾ ಅಝ್ಮಿ ಸೆಪ್ಟೆಂಬರ್ 18,1950ರಂದು ಹೈದರಾಬಾದ್‌ನಲ್ಲಿ ಪ್ರಸಿದ್ಧ ಕವಿ ಕೈಫಿ ಅಝ್ಮಿ ಮತ್ತು ಶೌಕತ್ ಅಝ್ಮಿ ದಂಪತಿಗೆ ಮಗಳಾಗಿ ಜನಿಸಿದರು. ತಮ್ಮ 24ನೇ ವಯಸ್ಸಿನಲ್ಲಿ ಚಲನಚಿತ್ರ ವೃತ್ತಿ ಜೀವನವನ್ನು ಪ್ರಾರಂಭಿಸಿ ಅವರ ಮೊದಲ ಚಿತ್ರ ‘ಅಂಕುರ್’ 1974ರಲ್ಲಿ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ಅವರ ನಟನೆಯು ಮೆಚ್ಚುಗೆ ಪಡೆಯಿತು.

ಭಾರತೀಯ ಚಲನಚಿತ್ರ, ದೂರದರ್ಶನ ಹಾಗೂ ರಂಗಭೂಮಿ ನಟಿಯಾಗಿರುವ ಶಬಾನಾ ಅಝ್ಮಿ ಹಿಂದಿ ಚಲನಚಿತ್ರೋದ್ಯಮದಲ್ಲಿ ಸುಮಾರು 160ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಭಾರತದ ಅತ್ಯಂತ ಮೆಚ್ಚುಗೆ ಪಡೆದ ನಟಿಯಲ್ಲಿ ಒಬ್ಬರಾದ ಶಬಾನ ಅಝ್ಮಿ, ಹಲವಾರು ಪ್ರಕಾರಗಳಲ್ಲಿ ನಟಿಸಿ ಮಹಿಳಾ ಪಾತ್ರಗಳಿಗೆ ಜೀವತುಂಬಿ ಹೆಸರುವಾಸಿಯಾಗಿದ್ದಾರೆ.

ಐದು ಫಿಲ್ಮ್ ಫೇರ್‌ ಪ್ರಶಸ್ತಿಗಳು ಮತ್ತು ಹಲವಾರು ಅಂತಾರಾಷ್ಟ್ರೀಯ ಪುರಸ್ಕಾರಗಳ ಜೊತೆಗೆ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಶಬಾನಾ ಅಝ್ಮಿ ಅವರಿಗೆ ಸಂದಿವೆ. ಭಾರತ ಸರ್ಕಾರ 1998ರಲ್ಲಿ ಪದ್ಮಶ್ರೀ ಮತ್ತು 2012ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...