Homeಕರ್ನಾಟಕಬೆಂಗಳೂರು: ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ, ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ

ಬೆಂಗಳೂರು: ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ, ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ

- Advertisement -
- Advertisement -

ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ರೈಲಿನ ಬಿ1 ಬಿ2 ಕೋಚ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಮುಂಬೈಯಿಂದ ಇಂದು ಬೆಳಗ್ಗೆ 6 ಗಂಟೆಗೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದು, ಪ್ಲಾಟ್ ಫಾರ್ಮ್ 4ರಲ್ಲಿ ನಿಂತಿತ್ತು. 7:30ರ ಸುಮಾರಿಗೆ ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಇಂಜಿನ್‍ನಿಂದ ಐದು ಬೋಗಿಗಳ ದೂರದಲ್ಲಿದ್ದ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಸ್ಥಳೀಯ ಪೊಲೀಸರು ಬೆಂಕಿ ನಂದಿಸಲಿಕ್ಕೆ ಪ್ರಯತ್ನ ಪಟ್ಟಿದ್ದಾರೆ. ಆದರೆ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ.

ಕೂಡಲೇ ಎರಡು ಅಗ್ನಿಶಾಮಕ ವಾಹನ ಕರೆಸಿಕೊಳ್ಳಲಾಯಿತು. ನಂತರ ಅಗ್ನಿಶಾಮಕ ಸಿಬ್ಬಂದಿ ಸತತ ಅರ್ಧ ಗಂಟೆ ಬೆಂಕಿ ನಂದಿಸಲು ಪ್ರಯತ್ನ ಪಟ್ಟರೂ 2 ಎಸಿ ಕೋಚ್‍ಗಳು ಸಂಪೂರ್ಣ ಸುಟ್ಟು ಹೋಗಿವೆ. ಬಳಿಕ ಸತತ ಪ್ರಯತ್ನದ ನಂತರ ಬೆಂಕಿಯನ್ನು ನಂದಿಸಲಾಗಿದೆ. ಬೆಂಕಿ ಸಂಪೂರ್ಣ ಹತೋಟಿಗೆ ಬಂದ ನಂತರ ಹಾನಿಗೊಳಗಾದ ಬೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಗುತ್ತಿದೆ. ಬೆಂಕಿಯಿಂದಾಗಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿತ್ತು.

ಈ ಘಟನೆ ವೇಳೆ ಯಾರು ಪ್ರಯಾಣಿಕರು ಇರಲಿಲ್ಲ. ಇದರಿಂದಾಗಿ ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ನೈರುತ್ಯ ರೈಲ್ವೇ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...