Homeಚಳವಳಿನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಪ್ರೀತಿಯಿಂದ ಮಾತ್ರ ಸಮಾನತೆಯ ಸಮಾಜ ಕಟ್ಟಲು ಸಾಧ್ಯ, ಪ್ರೀತಿ ಬೇಕು, ದ್ವೇಷ ಬೇಡ.

- Advertisement -
- Advertisement -

ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ಸರ್ಕಾರವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರುವುದಾಗಿ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಹೇಳಿಕೆ ನೀಡುತ್ತಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಪ್ರೀತಿಗಾಗಿ ಪ್ರತಿಭಟನೆ ನಡೆಯುತ್ತಿದೆ.

ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ, ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಪ್ರೀತಿಯಿಂದ ಮಾತ್ರ ಸಮಾನತೆಯ ಸಮಾಜ ಕಟ್ಟಲು ಸಾಧ್ಯ, ಪ್ರೀತಿ ಬೇಕು, ದ್ವೇಷ ಬೇಡ ಎಂಬ ಭಿತ್ತಿಪತ್ರಗಳನ್ನು ಹಿಡಿದು ನೂರಾರು ಮಂದಿ ಇಂದು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕದ ಮಹಿಳಾ, ದಲಿತ, ಮುಸ್ಲಿಂ, ಲಿಂಗತ್ವ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ, ಮಾನವ ಹಕ್ಕುಗಳ ಸಂಘಟನೆಗಳು ಜಂಟಿ ಆಂದೋಲನ ಸಮಿತಿ ಜಂಟಿಯಾಗಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿವೆ.

ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

 

ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿ, ಕಾನೂನು ತರುವ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಸಿ.ಟಿ.ರವಿ, ಶಶಿಕಲಾ ಜೊಲ್ಲೆ ಇವರುಗಳನ್ನು ಟ್ಯಾಗ್ ಮಾಡಿ, “ಪ್ರೀತಿ ಸಂವಿಧಾನದ ಸರಳ ಪಾಠ. ಆದರೆ ನೀವು ಸಂವಿಧಾನವನ್ನು ಇಷ್ಟಪಡುವುದಿಲ್ಲ ಅಥವಾ ಅರ್ಥಮಾಡಿಕೊಳ್ಳುವುದಿಲ್ಲ. ಆದ್ದರಿಂದ, ನೀವು ಅದನ್ನು ತಿಳಿದುಕೊಳ್ಳುವವರೆಗೆ ನಾವು ಪ್ರತಿಭಟನೆ ಪುನರಾವರ್ತಿಸುತ್ತೇವೆ!” ಎಂದಿದ್ದಾರೆ.
ದೇಶದ ಆರ್ಥಿಕತೆ ಕುಸಿದಿದೆ. ಕೃಷಿ ಮಸೂದೆಗಳ ವಿರುದ್ಧ ರೈತರು ದೆಹಲಿಯಲ್ಲಿ ಹೋರಾಡುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಇಲ್ಲದ ಲವ್ ಜಿಹಾದ್ ಚರ್ಚೆಯನ್ನು ಮುನ್ನಲೆಗೆ ತಂದಿದೆ ಎಂದು ಸಮಿತಿ ಕಿಡಿಕಾರಿದೆ.

ಮಹಿಳೆಯರ ರಕ್ಷಣೆಯ ಹೆಸರಿನಲ್ಲಿ ಮಹಿಳೆಯರು ಯಾರನ್ನು ಪ್ರೀತಿಸಬೇಕು, ಯಾರನ್ನು ಮದುವೆಯಾಗಬೇಕು ಎಂದು ಬಿಜೆಪಿ ನಿಯಂತ್ರಿಸುವ ಹುನ್ನಾರ ನಡೆಸುತ್ತಿದೆ. ಇಂತಹ ಕಾನೂನುಗಳ ಮೂಲಕ ನಮ್ಮ ಸಮಾಜವನ್ನು ಜಾತಿ, ಧರ್ಮಗಳ ಆಧಾರಲ್ಲಿ ಮತ್ತಷ್ಟು ವಿಭಜಿಸುವ, ಸಮುದಾಯದ ನಾಗರಿಕತೆಗೆ ಧಕ್ಕೆ ತರುವುದನ್ನು ನಾವು ವಿರೋಧಿಸುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಘಟನೆಗಳು ಪ್ರೀತಿಸೋದು ತಪ್ಪಾ? ಎಂಬ ಟ್ವಿಟರ್‌ ಖಾತೆಯ ವೇದಿಕೆಯಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಾರೆ.  ’ಅಂತರ ಧಾರ್ಮಿಕ ಪ್ರೀತಿಯ ಅಪರಾಧೀಕರಣದ ವಿರುದ್ಧ ಅಭಿಯಾನ’ ಎಂಬ ಶೀರ್ಷಿಕೆಯಡಿ ತಮ್ಮ ಖಾತೆಯನ್ನು ಲವ್ ಜಿಹಾದ್ ವಿರುದ್ಧದ ಅಭಿಯಾನ ಎಂದು ಕರೆದಿದ್ದಾರೆ.

ಇಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಆಡಳಿತ 10 ವರ್ಷಗಳಲ್ಲಿ ಅತಿ ಹೆಚ್ಚು ‘ಇಡಿ’ ದಾಳಿ: ವರದಿ

0
ಮೋದಿ ಆಡಳಿತದ ಕಳೆದ 10 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಮತ್ತು, ಆಸ್ತಿಮುಟ್ಟುಗೋಲು ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಬಿಜೆಪಿ ಸರಕಾರ 'ಇಡಿ' ಮತ್ತು ಸಿಬಿಐಯಂತಹ ಸರಕಾರಿ ಸಂಸ್ಥೆಗಳನ್ನು ಪ್ರತಿಪಕ್ಷಗಳ...