Homeದಲಿತ್ ಫೈಲ್ಸ್ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

- Advertisement -
- Advertisement -

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ ಮೇಲೆ ದಾಂಧಲೆ-ದೌರ್ಜನ್ಯ ನಡೆಸಿದ್ದಾರೆ.

ಗಂಗಸಂದ್ರ ಗ್ರಾಮದ ಬಿ.ಎಂ ಕಾವಲ್ ಸರ್ವೇ ನಂ.24ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಮಾದಿಗ ಸಮುದಾಯದ ಹಲವು ಕುಟುಂಬಗಳ ಭೂಮಿ ಇದೆ. ಸುಮಾರು 60-70 ವರ್ಷಗಳ ಹಿಂದೆಯೇ ಸರ್ಕಾರ ಈ ಭೂಮಿಯನ್ನು ದಲಿತ ಕುಟುಂಬಗಳ ಹೆಸರಿಗೆ ನೋಂದಣಿ ಮಾಡಿಕೊಟ್ಟಿದೆ. ಗ್ರಾಮದ ದಲಿತ ಕುಟುಂಬಗಳು ಮೂರು ತಲೆ ಮಾರುಗಳಿಂದ ಆ ಭೂಮಿಯನ್ನು ಉಳಿಸಿಕೊಂಡು ಬಂದಿದ್ದಾರೆ. ಆದರೆ, ಈಗ ಏಕಾಏಕಿ ಆ ಭೂಮಿಗೆ ಕಗ್ಗಲೀಪುರ ವಲಯ ಅರಣ್ಯಾಧಿಕಾರಿ ಮತ್ತು ಅವರ ಮೇಲಧಿಕಾರಿ ಎಸಿಎಫ್‌ ಹಾಗೂ ಪೊಲೀಸರು ದಾಳಿ ಮಾಡಿದ್ದಾರೆ. ಭೂಮಿ ಅರಣ್ಯ ಇಲಾಖೆಗೆ ಸೇರಿದ್ದೆಂದು ಭೂಮಿಯನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. 

ಮಾತ್ರವಲ್ಲದೆ, ಸುಮಾರು 50 ಮಂದಿ ಗೂಂಡಾಗಳಿಗೆ ಅರಣ್ಯ ಗಾರ್ಡ್‌ಗಳ ವೇಷ ತೊಡಿಸಿ, ಅರಣ್ಯ ಸಿಬ್ಬಂದಿಗಳೆಂದು ಬಿಂಬಿಸಿ, ದಲಿತ ನಿವಾಸಿಗಳ ಮೇಲೆ ದರ್ಪ ಮೆರೆದಿದ್ದಾರೆ ಎಂದು ಭೂ-ಒಡೆತನ ಹೊಂದಿರುವ ದಲಿತರು ಆರೋಪಿಸಿದ್ದಾರೆ. 

ದಲಿತ ಕುಟುಂಬಗಳ ಬಳಿ ಆ ಭೂಮಿಗೆ ಸಂಬಂಧಿಸಿದ ಆರ್‌ಟಿಸಿ, ಎಂಆರ್‌ ಕಾಪಿಗಳಿವೆ. ಆದರೆ, ದುರಸ್ತಿಯಾಗಿಲ್ಲ ಎಂಬ ಏಕೈಕ ನೆಪ ಇಟ್ಟುಕೊಂಡು ಈ ಭೂಮಿ ಮೀಸಲು ಅರಣ್ಯದ ಬಫರ್ ವಲಯವೆಂದು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ದಾಖಲಾತಿಗಳನ್ನು ಅಧಿಕಾರಿಗಳಿಗೆ ತೋರಿಸಿದರೆ, ಇವು ಸ್ವಾತಂತ್ರ್ಯ ನಂತರ ಕೊಟ್ಟಿರುವ ದಾಖಲೆಗಳು. ಆದರೆ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಕಾಲದಲ್ಲೇ ಇದು ಅರಣ್ಯ ಭೂಮಿ ಅಂತ ಆಗಿದೆ. ಇದು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಮೊಂಡುತನದ ವಾದ ಮಾಡುತ್ತಿರುವ ಅಧಿಕಾರಿಗಳು, ದಲಿತ ಕುಟುಂಬಗಳ ಮೇಲೆ ಗೂಂಡಾವರ್ತನೆ ತೋರಿದ್ದಾರೆ.

ಅಲ್ಲಿನ ನಿವಾಸಿಗಳು ತಮ್ಮ ಭೂಮಿಯ ರಕ್ಷಣೆಗಾಗಿ ಹಾಕಿದ್ದ ಡಾ. ಬಿ.ಆರ್‌ ಅಂಬೇಡ್ಕರ್ ರವರ ಭಾವಚಿತ್ರವಿದ್ದ ಬೋರ್ಡ್ ಕಿತ್ತು ಎಸೆದಿರುವ ಅಧಿಕಾರಿಗಳು, ದಲಿತರ ಭೂಮಿಗೆ ಕಾಂಪೌಂಡ್‌ ನಿರ್ಮಿಸಲು ಮುಂದಾಗಿದ್ದಾರೆ.

“ಭೂಮಿ ನಮ್ಮದು ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಸರ್ಕಾರವೇ ನಮ್ಮ ಪೂರ್ವಜರ ಹೆಸರಿಗೆ ಭೂಮಿಯನ್ನು ವರ್ಗಾಯಿಸಿ, ಕಂದಾಯ ಇಲಾಖೆಯಡಿ ದಾಖಲೆಗಳನ್ನು ಮಾಡಿ ಕೊಟ್ಟಿದೆ. ನಮ್ಮ ಜೀವನಕ್ಕೆ ಈ ಭೂಮಿಯೇ ಆಧಾರವಾಗಿದೆ. ಹಲವು ವರ್ಷಗಳಿಂದ ಈ ಭೂಮಿಯನ್ನು ಉಳಿಸಿಕೊಂಡು ಬಂದಿದ್ದೇವೆ. ಆದರೆ, ಅರಣ್ಯ ಅಧಿಕಾರಿಗಳು ನಮ್ಮ ಭೂಮಿಯನ್ನು ಕಸಿಕೊಳ್ಳುತ್ತಿದ್ದಾರೆ” ಎಂದು ದಲಿತ ಕುಟುಂಬಗಳು ನೋವು ತೋಡಿಕೊಳ್ಳುತ್ತಿದ್ದಾರೆ. 

ಅಧಿಕಾರಿಗಳ ದೌರ್ಜನ್ಯದ ಮಾಹಿತಿ ತಿಳಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್ ಅವರು ಸ್ಥಳಕ್ಕೆ ಧಾವಿಸಿದ್ದು, ಅಧಿಕಾರಿಗಳ ಕಿರುಕುಳವನ್ನು ಖಂಡಿಸಿದ್ದಾರೆ. ನಿವಾಸಿಗಳೊಂದಿಗೆ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ.

“ಸೋಮವಾರವಷ್ಟೇ ಇದೇ ಭೂಮಿ ವಿಚಾರವಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ಅವರನ್ನು ಭೇಟಿ ಮಾಡಿದ್ದೆವು. ಕಂದಾಯ ದಾಖಲಾತಿ ಸ್ಪಷ್ಟವಾಗಿದ್ದರೂ, ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಮಂಜೂರಾಗಿರುವ ಭೂಮಿಯನ್ನ ಅರಣ್ಯ ಇಲಾಖೆಯವರು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ. ಕುಟುಂಬಗಳಿಗೆ ತೊಂದರೆ, ಕಿರುಕುಳ ನೀಡುತ್ತಿದ್ದಾರೆ ಎಂಬ ವಿಚಾರವನ್ನು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ” ಎಂದು ಯಶವಂತ್‌ ತಿಳಿಸಿದ್ದಾರೆ.

“ನಮ್ಮ ಮನವಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ‘ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ನಡುವೆ ದಾಖಲಾತಿ ಮತ್ತು ಗಡಿ ವಿಚಾರದಲ್ಲಿ ಗೊಂದಲವಿದ್ದರೆ, ಅವುಗಳನ್ನ ನಿವಾರಿಸಲು ಎಸ್‌ಐಟಿ ರಚನೆ ಮಾಡಿಕೊಂಡಿದ್ದೇವೆ. ಬೆಂಗಳೂರಿನಲ್ಲಿ ಆ ಎಸ್‌ಐಟಿಗೆ ಅಧ್ಯಕ್ಷ ನಾನೇ ಆಗಿದ್ದೇನೆ. ಬೆಂಗಳೂರು ಎಸ್‌ಐಟಿ ಅಥವಾ ರಾಜ್ಯ ಎಸ್‌ಐಟಿಯಲ್ಲಿ ಗಂಗಸಂದ್ರದ ಭೂಮಿ ವಿಚಾರ ಚರ್ಚೆಗೆ ಬಂದಿಲ್ಲ. ನಿಮ್ಮ  ಕಂದಾಯ ದಾಖಲಾತಿಗಳು ಸ್ಪಷ್ಟವಾಗಿರುವ ಕಡೆಗೆ ಅರಣ್ಯ ಅಧಿಕಾರಿಗಳು ಹೋರಬಾರದೆಂದು ಡಿಸಿಎಫ್‌ ರವೀಂದ್ರ ಮೂಲಕ ಸ್ಪಷ್ಟ ಸೂಚನೆ ಕೊಡುತ್ತೇನೆ’ ಎಂಬುದಾಗಿ ಭರವಸೆ ನೀಡಿದ್ದರು. ಆದರೂ, ಇಂದು ಅರಣ್ಯ ಅಧಿಕಾರಿಗಳು ಏಕಾಏಕಿ ದಲಿತರ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ” ಎಂದು ಯಶವಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅಧಿಕಾರಿಗಳು ಕಾನೂನುಬಾಹಿರವಾಗಿ ದಲಿತರ ಭೂಮಿಯನ್ನು ಕಬ್ಜ ಮಾಡಲು ಬಂದಿದ್ದಾರೆ. 60/70 ವರ್ಷಗಳಿಂದ ಈ ಭೂಮಿಯನ್ನ ಉಳಿಸಿಕೊಂಡಿರುವ ಬಡವರನ್ನೇ ಅಪರಾಧಿಗಳನ್ನಾಗಿ ಮಾಡಲು ಮುಂದಾಗಿದ್ದಾರೆ. ವಿಧಾನಸಭೆಯಲ್ಲಿ ಭೂವಿವಾದದ ವಿಚಾರಗಳು ಚರ್ಚೆಗೆ ಬಂದಾಗ, ಅರಣ್ಯ ಇಲಾಖೆಯ ಸಚಿವರು, ‘ಯಾವುದೇ ಭೂಮಿಯಾಗಿದ್ದರೂ, 2-3 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸಬಾರದು’ ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಆದರೂ, ಇಲ್ಲಿ ಎಲ್ಲ ದಾಖಲೆಗಳು ಸ್ಪಷ್ಟವಾಗಿದ್ದರೂ, ಅಧಿಕಾರಿಗಳು ಭೂಮಿಯನ್ನು ಕಿತ್ತುಕೊಳ್ಳಲು ಹವಣಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯ ಪ್ರವೇಶ ಮಾಡಬೇಕು. ಇಲ್ಲಿ ಅಕ್ರಮವಾಗಿ ಕಾಂಪೌಂಡ್ ಹಾಕಿ ದಲಿತರ ಭೂಮಿಯನ್ನು ಕಬ್ಜ ಮಾಡಿ, ತೊಂದರೆ ಕೊಡುತ್ತಿರುವ ಅಧಿಕಾರಿಗಳನ್ನು ತಡೆಯಬೇಕು. ಮತ್ತೆ ಈ ಭೂಮಿಯನ್ನು ವಿವಾದಕ್ಕೆ ಸಿಲುಕಿಸಿ, ದಲಿತ ಕುಟುಂಬಗಳಿಗೆ ತೊಂದರೆ ಕೊಡದಂತೆ ಸ್ಪಷ್ಟ ನಿರ್ದೇಶನ ನೀಡಬೇಕು” ಎಂದು ಯಶವಂತ್ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...