Homeಕರ್ನಾಟಕಬೆಂಗಳೂರು: ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲು ಬಿಎಂಟಿಸಿ ನಿರ್ಧಾರ

ಬೆಂಗಳೂರು: ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲು ಬಿಎಂಟಿಸಿ ನಿರ್ಧಾರ

- Advertisement -
- Advertisement -

ಬೆಂಗಳೂರಿನಲ್ಲಿರುವ ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡಲು ವನಿತಾ ಸಂಗಾತಿ ಯೋಜನೆ ಅಡಿಯಲ್ಲಿ ಉಚಿತ ಬಸ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದೆ. ಮುಂದಿನ ತಿಂಗಳಿಂದ ಪಾಸ್ ದೊರೆಯಲಿದ್ದು, ಅರ್ಹರು ಅರ್ಜಿ ಸಲ್ಲಿಸಲು ಬಿಎಂಟಿಸಿ ಅರ್ಜಿ ಆಹ್ವಾನಿಸಿದೆ.

ಗಾರ್ಮೆಂಟ್ಸ್‌ಗಳಲ್ಲಿ ದುಡಿಯುವ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ಉಚಿತ ಬಸ್‌ ನೀಡುವುದಾಗಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮಂಡನೆಯ ಸಂದರ್ಭದಲ್ಲಿ ಘೋಷಿಸಿದ್ದರು. ಇದೀಗ, ಅವರ ಭರವಸೆ ಜಾರಿಗೆ ಬಂದಿದ್ದು, ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆಗಾಗಿ ಬಿಎಂಟಿಸಿ ಅರ್ಜಿ ಆಹ್ವಾನಿಸಿದೆ.

ನಗರದಲ್ಲಿ ಸುಮಾರು 850ಕ್ಕಿಂತಲೂ ಹೆಚ್ಚಿನ ಗಾರ್ಮೆಂಟ್ಸ್ ಕಾರ್ಖಾನೆಗಳಿವೆ. ಈ ಎಲ್ಲಾ ಕಾರ್ಖಾನೆಗಳಲ್ಲಿ ಸುಮಾರು 3 ಲಕ್ಷಕ್ಕಿಂತಲೂ ಹೆಚ್ಚಿನ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ, ಶೇ.80 ಕ್ಕಿಂತ ಹೆಚ್ಚು ಕಾರ್ಮಿಕರು ಮಹಿಳೆಯರಾಗಿದ್ದಾರೆ. ಈ ಎಲ್ಲಾ ಮಹಿಳಾ ಕಾರ್ಮಿಕರು ಪ್ರತಿ ನಿತ್ಯ ತಮ್ಮ ಕರ್ತವ್ಯ ಸ್ಥಳಕ್ಕೆ ಹೋಗಲು ಹಾಗೂ ವಾಸಸ್ಥಳಕ್ಕೆ ಹಿಂದಿರುಗಲು ಖಾಸಗಿ ಬಸ್ಸು, ಆಟೋ ಹಾಗೂ ಇತರೆ ಖಾಸಗಿ ಸಂಸ್ಥೆಯ ವಾಹನಗಳನ್ನು ಹೆಚ್ಚಾಗಿ ಅವಲಂಬಿಸಿರುವುದು ಕಂಡುಬಂದಿರುತ್ತದೆ. ಅವರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲು ಹಾಗೂ ಆರ್ಥಿಕ ಸಹಾಯವನ್ನು ಮಾಡಲು ‘ವನಿತಾ ಸಂಗಾತಿ’ ಯೋಜನೆಯಡಿಯಲ್ಲಿ ಉಚಿತವಾಗಿ ಮಾಸಿಕ ಬಸ್‌ ಪಾಸುಗಳನ್ನು ಜನವರಿ-22 ರಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ಇದನ್ನೂ ಓದಿ: ಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

’ವನಿತಾ ಸಂಗಾತಿ’ ಪಾಸ್ ಪಡೆಯಲು ಬಯಸುವ ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರು, ತಾವು ಕರ್ತವ್ಯ ನಿರ್ವಹಿಸುವ ಗಾರ್ಮೆಂಟ್ಸ್‌ ಕಾರ್ಖಾನೆಯ ಮಾಲೀಕರಿಗೆ ಮನವಿ ಸಲ್ಲಿಸಬೇಕು. ಮಾಲೀಕರು ಅರ್ಜಿ ಸಲ್ಲಿಸಿರುವ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಇ-ಮೇಲ್‌ ವಿಳಾಸ [email protected] ಗೆ ಸಲ್ಲಿಸಬೇಕು.

ಅರ್ಜಿ ಪರಿಶೀಲಿಸಿದ ಬಳಿಕ ಅರ್ಹ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಒದಗಿಸುತ್ತದೆ ಎಂದು ಸಂಸ್ಥೆ ಹೇಳಿದೆ. ವನಿತಾ ಸಂಗಾತಿ ಪಾಸುಗಳನ್ನು ಪಡೆದ ಮಹಿಳಾ ಕಾರ್ಮಿಕರು ಸಂಸ್ಥೆಯ ಎಲ್ಲಾ ಸಾಮಾನ್ಯ ಸೇವೆಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದೆ.

ಬಿಎಂಟಿಸಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸ್ವೀಕರಿಸುವ ಪಟ್ಟಿಗನುಸಾರವಾಗಿ, ಗಾರ್ಮೆಂಟ್ಸ್‌ ಮಾಲೀಕರಿಂದ ಅವ‍ಶ್ಯ ದಾಖಲೆಗಳ ಪ್ರತಿಗಳನ್ನು (ಹಾರ್ಡ್‌ ಕಾಫಿ) ಹಾಗೂ ಗಾರ್ಮೆಂಟ್ಸ್‌ ಮಾಲೀಕರ ಪಾಲಿನ ಮೊತ್ತ ಶೇ.40 ರಷ್ಟನ್ನು ಪಡೆದು (ಆರ್‌.ಟಿ.ಜಿ.ಎಸ್‌/ ಎನ್.ಇ.ಎಫ್‌.ಟಿ ಮೂಲಕ), ವನಿತಾ ಸಂಗಾತಿ ಪಾಸುಗಳನ್ನು ಕೆಂಪೇಗೌಡ ಬಸ್‌ ನಿಲ್ದಾಣ ಪಾಸು ಕೌಂಟರ್‌ನಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.


ಇದನ್ನೂ ಓದಿ: ಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...