Homeಕರ್ನಾಟಕಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ಜನವಿರೋಧಿ ನೀತಿಗಳು, ಇಂಧನ ಬೆಲೆ ಹೆಚ್ಚಳ ಹಾಗೂ ಇದರ ಪರಿಣಾಮವಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ ನಡೆಸಲಾಯಿತು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಯಿತು.

ವಿಧಾನ ಮಂಡಲ ಅಧಿವೇಶನ ಆರಂಭದ ದಿನದಂದು ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸಿ ಒಕ್ಕೂಟ ಸರ್ಕಾರದ ನೀತಿಗಳನ್ನು ಖಂಡಿಸಲಾಗಿತ್ತು.  ಈ ಹಿಂದೆ ರಾಜ್ಯಾದ್ಯಂತ ಸೈಕಲ್ ಜಾಥಾ, 100 ನಾಟೌಟ್ ನಂತಹ ಕಾರ್ಯಕ್ರಮಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿತ್ತು.

“ಸರ್ಕಾರದ ಈ ಜನವಿರೋಧಿ ನೀತಿ ವಿರೋಧಿಸಿ ನಾವಿಂದು ಈ ಪ್ರತಿಭಟನೆ ಮಾಡಿದ್ದೇವೆ. ಜನರ ಪರ ಧ್ವನಿ ಎತ್ತಲು ನಾವು ಮೊನ್ನೆ ಎತ್ತಿನ ಗಾಡಿಯಲ್ಲಿ ಸದನಕ್ಕೆ ಆಗಮಿಸಿದ್ದೆವು. ಇಂದು ಸೈಕಲ್ ಮೂಲಕ ಆಗಮಿಸಿದ್ದೇವೆ. ಸರ್ಕಾರ ಬೆಲೆ ಇಳಿಸಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯಲಿದೆ. ಜನರು ಕೂಡ ಈ ಕೆಟ್ಟ ಸರ್ಕಾರ ಕಿತ್ತೊಗೆಯಲು ಸಜ್ಜಾಗಬೇಕು ಎಂದು ಕರೆ ನೀಡುತ್ತೇನೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ’ಎತ್ತಿನಗಾಡಿ ಚಲೋ’ ಪ್ರತಿಭಟನೆ

“ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಇರುವಾಗ ಅದರ ಲಾಭ ಮಾತ್ರ ಜನಸಾಮಾನ್ಯರಿಗೆ ಸಿಗುವಂತೆ ಮಾಡಿಲ್ಲ. ಪೆಟ್ರೋಲ್ ಬೆಲೆ 100 ರ ಗಡಿ ದಾಟಿದೆ, ಡೀಸೆಲ್ 94 ಆಗಿದೆ, ಅಡುಗೆ ಅನಿಲ 880 ರೂ. ಆಗಿದೆ. ಇದರಿಂದ ಇತರೆ ದಿನಬಳಕೆ ವಸ್ತುಗಳ ಬೆಲೆಯೂ ಹೆಚ್ಚಾಗಿದೆ. ಪೆಟ್ರೋಲ್ ಬೆಲೆಯಲ್ಲಿ 25 ರೂ. ಡೀಸೆಲ್ ಬೆಲೆಯಲ್ಲಿ 20 ರೂ. ಹಾಗೂ ಅಡುಗೆ ಅನಿಲದ ಬೆಲೆ 150 ರೂ. ಕಡಿಮೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸುತ್ತಿದ್ದೇವೆ” ಎಂದಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್‌.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ಗೋವಿಂದರಾಜು ಸೇರಿದಂತೆ ಮಾಜಿ ಮಂತ್ರಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಜಾಥಾದಲ್ಲಿ ಭಾಗವಹಿಸಿದ್ದರು.

“ಯುಪಿಎ ಸರ್ಕಾರದ ಅವಧಿಯಲ್ಲಿ ಇದ್ದ ಇಂಧನತೈಲಗಳ ಮೇಲಿನ ತೆರಿಗೆ ಪೆಟ್ರೋಲ್ -₹ 9.21, ಡೀಸೆಲ್ – ₹ 3.45 ಇತ್ತು. ಮೋದಿಯವರ ದರೋಡೆ ಸರ್ಕಾರದಲ್ಲಿ ಪೆಟ್ರೋಲ್ – ₹ 32.90, ಡೀಸೆಲ್ -₹ 31.80 ಇದೆ. ಸುಮಾರು 300% ತೆರಿಗೆ ಏರಿಸಿ ಜನರ ಸುಲಿಯನ್ನು ದರೋಡೆ ಎನ್ನದೆ ಇನ್ನೇನು ಹೇಳಬೇಕು? ದೋಚಿದ ಈ ಹಣ ಎಲ್ಲಿ ಹೋಗುತ್ತಿದೆ ಎಂದು ಬಿಜೆಪಿ ಹೇಳಬೇಕು” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಗೂಂಡಾರಾಜ್ ಆಗುತ್ತಿದೆ- ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...