ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ದದ ಜಾತಿ ನಿಂದನೆ ಮತ್ತು ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಆರೋಪ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ತನ್ನ ವಿರುದ್ದದ ಪ್ರಕರಣ ರದ್ದುಪಡಿಸುವಂತೆ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.
ಪ್ರಕರಣದ ಹಿನ್ನೆಲೆ : ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚೆಲುವರಾಜು ಅವರಿಂದ ಹಣ ಪಡೆದು ವಂಚಿಸಿದ ಮತ್ತು ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ ಆರೋಪವನ್ನು ಮುನಿರತ್ನ ಎದುರಿಸುತ್ತಿದ್ದಾರೆ.
ಚೆಲುವರಾಜು ಮತ್ತು ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ ನೀಡಿದ್ದ ದೂರುಗಳನ್ನು ಆಧರಿಸಿ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಾಗಿತ್ತು. ಇವುಗಳನ್ನು ರದ್ದುಪಡಿಸುವಂತೆ ಮುನಿರತ್ನ ಹೈಕೋರ್ಟ್ ಮೊರೆ ಹೋಗಿದ್ದರು.
ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್


