Homeಕರ್ನಾಟಕಬೆಂಗಳೂರು: ಫ್ರೀಡಂ ಪಾರ್ಕ್‌ನಲ್ಲಿ ಜೇನು ನೊಣಗಳ ದಾಳಿ, 10 ಮಂದಿ ಪೊಲೀಸರಿಗೆ ಗಾಯ

ಬೆಂಗಳೂರು: ಫ್ರೀಡಂ ಪಾರ್ಕ್‌ನಲ್ಲಿ ಜೇನು ನೊಣಗಳ ದಾಳಿ, 10 ಮಂದಿ ಪೊಲೀಸರಿಗೆ ಗಾಯ

- Advertisement -
- Advertisement -

ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಏಕಾಏಕಿ ಜೇನು ನೊಣಗಳ ದಾಳಿ ನಡೆದಿದ್ದು, ಬಂದೋಬಸ್ತ್‌ನಲ್ಲಿದ್ದ ಸುಮಾರು 10 ಪೊಲೀಸರು ಸೇರಿದಂತೆ ಹಲವರಿಗೆ ಗಾಯಗಳಾಗಿವೆ.

ಘಟನೆಯ ಪರಿಣಾಮ ಪೊಲೀಸರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ಸೇರಿಸಲಾಗಿದೆ ಎಂದು ವರದಿಯಾಗಿದೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಲವಾರು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರಿಂದ ಬಂದೋಬಸ್ತ್‌ಗಾಗಿ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು. ಇದ್ದಕ್ಕಿದ್ದಂತೆ ಬಂದ ಸಾವಿರಾರು ಜೇನು ಹುಳುಗಳು ಪೊಲೀಸರು ಹಾಗೂ ಇತರರ ಮೇಲೆ ದಾಳಿ ನಡೆಸಿವೆ.

ಇದನ್ನೂ ಓದಿ: ಬುಲ್ಲಿ ಬಾಯ್‌, ಸುಲ್ಲಿ ಡೀಲ್ಸ್‌ ವಿಕೃತಿ: ದೆಹಲಿ ಪೊಲೀಸರಿಂದ ಚಾರ್ಜ್‌ಶೀಟ್‌‌ ಸಲ್ಲಿಕೆ

“ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಪ್ರಾರಂಭವಾಗುವ ಮೊದಲು ಈ ಘಟನೆ ನಡೆದಿದೆ. ಇಲ್ಲದಿದ್ದರೆ ಭಾರಿ ಅನಾಹುತವಾಗುತ್ತಿತ್ತು” ಎಂದು ಪೊಲೀಸರು ಹೇಳಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿಗಳು ಸೇರಿದಂತೆ ‘ಬಂದೋಬಸ್ತ್’ ಸಿಬ್ಬಂದಿ ಮೇಲೆ ಜೇನು ನೊಣಗಳು ದಾಳಿ ನಡೆಸಿವೆ ಎಂದು ಡಿಸಿಪಿ (ಪಶ್ಚಿಮ) ಸಂಜೀವ್ ಪಾಟೀಲ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ನಗರದಲ್ಲಿ ಪ್ರತಿಭಟನಾ ಮೆರವಣಿಗೆಗೆ ಅನುಮತಿ ನೀಡಿದ್ದಕ್ಕೆ ಕರ್ನಾಟಕ ಹೈಕೋರ್ಟ್ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್ ಆವರಣಕ್ಕೆ ಸೀಮಿತಗೊಳಿಸುವಂತೆ ಮತ್ತು ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಹೈಕೋರ್ಟ್ ಸೂಚಿಸಿದೆ.

ಓರ್ವ ಇನ್ಸ್‌ಪೆಕ್ಟರ್ ಹಾಗೂ ಎಂಟು ಮಂದಿ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೇನುನೊಣಗಳು ಸ್ವಾಭಾವಿಕವಾಗಿ ದಾಳಿ ಮಾಡಿವೆಯೇ ಅಥವಾ ಕೆಲವು ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯವೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಸಂಜೀವ್ ಪಾಟೀಲ್ ಹೇಳಿದ್ದಾರೆ.


ಇದನ್ನೂ ಓದಿ: ತಂದೆಯಿಂದ ಬೆದರಿಕೆ: ಬೆಂಗಳೂರು ಪೊಲೀಸರಿಂದ ರಕ್ಷಣೆ ಕೋರಿದ ತಮಿಳುನಾಡು ಸಚಿವರ ನವವಿವಾಹಿತ ಪುತ್ರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...