ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಬ್ಯಾಂಕ್ ಪಿಂಚಣಿದಾರಿಗೆ ಮತ್ತು ನಿವೃತ್ತಿ ವೇತನದಾರರಿಗೆ ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯ ಶನಿವಾರ ಉಪವಾಸ ಸತ್ಯಾಗ್ರಹ ನಡೆಸಿತು. ಈ ವೇಳೆ ಮಾತನಾಡಿದ ಸಮನ್ವಯ ಅಧ್ಯಕ್ಷ ಕೆ.ವಿ ಆಚಾರ್ಯ, ಬ್ಯಾಂಕೇತರ ಸರ್ಕಾರಿ ನಿವೃತ್ತರಿಗೆ ಪಿಂಚಣಿ ಪರಿಷ್ಕರಣೆಯನ್ನು ಕಾಲಕಾಲಕ್ಕೆ ಮಾಡಲಾಗುತ್ತಿದೆ. ಆದರೆ, ಬ್ಯಾಂಕ್ ನಿವೃತ್ತರಿಗೆ ಸತತ 30 ವರ್ಷಗಳಿಂದ ಪರಿಷ್ಕರಣೆ ಮಾಡಿಲ್ಲ. ಕೇಂದ್ರ ಸರ್ಕಾರ ನಮ್ಮ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. … Continue reading ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ