Homeಕರ್ನಾಟಕಬೆಂಗಳೂರು: ಓಲಾ-ಉಬರ್‌‌ ನಿಷೇಧಕ್ಕೆ ಮಧ್ಯಂತರ ತಡೆ; ಸರ್ಕಾರದ ಆದೇಶಕ್ಕೆ ಹಿನ್ನಡೆ

ಬೆಂಗಳೂರು: ಓಲಾ-ಉಬರ್‌‌ ನಿಷೇಧಕ್ಕೆ ಮಧ್ಯಂತರ ತಡೆ; ಸರ್ಕಾರದ ಆದೇಶಕ್ಕೆ ಹಿನ್ನಡೆ

- Advertisement -
- Advertisement -

ಬೆಂಗಳೂರಿನಲ್ಲಿ ಓಲಾ-ಉಬರ್‌ಗೆ ಸಾರಿಗೆ ಇಲಾಖೆ ನಿಷೇಧಿಸಿ ಹೊರಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಸರ್ಕಾರ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಅದು ಹೇಳಿದ್ದು, ಓಲಾ-ಉಬರ್‌ ಕಂಪೆನಿಗಳು ಕೂಡಾ ಅನುಕೂಲಕರ ದರವನ್ನು ವಿಧಿಸಬೇಕು ಎಂದು ಹೇಳಿದೆ.

2 ಕಿಲೋಮೀಟರ್‌ಗಿಂತ ಕಡಿಮೆ ದೂರಕ್ಕೂ 100 ರೂ. ಶುಲ್ಕ ವಿಧಿಸುತ್ತಿದೆ ಎಂದು ಆರೋಪಿಸಿ ಸಾರಿಗೆ ಇಲಾಖೆಯು ಓಲಾ, ಉಬರ್ ಮತ್ತು ರಾಪಿಡೋ ಆಟೋ ಸೇವೆಗಳನ್ನು ನಿಲ್ಲಿಸುವಂತೆ ಸೆಪ್ಟೆಂಬರ್‌ 6 ರಂದು ನೋಟಿಸ್ ಜಾರಿ ಮಾಡಿತ್ತು. ಪ್ರಸ್ತುತ, ಬೆಂಗಳೂರಿನಲ್ಲಿ ಮೊದಲ 2 ಕಿ.ಮೀಗೆ ಕನಿಷ್ಠ ಆಟೋ ದರವನ್ನು 30 ರೂ.ಗೆ ನಿಗದಿಪಡಿಸಲಾಗಿದೆ. ನಂತರ ಪ್ರತಿ ಕಿಲೋಮೀಟರ್‌ಗೆ 15 ರೂ. ಶುಲ್ಕ ವಿಧಿಸಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರ ಹೊರಡಿಸಿದ್ದ ಆದೇಶದಲ್ಲಿ, “ಈ ಕಂಪನಿಗಳು ತಮ್ಮ ಆಟೋ ಸೇವೆಗಳನ್ನು ಆದಷ್ಟು ಬೇಗನೆ ನಿಲ್ಲಿಸಬೇಕು ಮತ್ತು ಟ್ಯಾಕ್ಸಿಗಳಲ್ಲಿ ಪ್ರಯಾಣಿಕರಿಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ವಿಧಿಸಬಾರದು. ಆದೇಶವನ್ನು ಅನುಸರಿಸಲು ವಿಫಲವಾದರೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿತ್ತು.

ಇಂದು ನೀಡಿದ ಮಧ್ಯಂತರ ಆದೇಶದಲ್ಲಿ, ಈ ಹಿಂದೆ ನೀಡಿದ್ದ ಪರವಾನಿಗೆ ಕಾಲಾವಕಾಶ ವಿಸ್ತರಿಸುವಂತೆ ಕೇಳಿಕೊಂಡಿದ್ದು, 2021 ರ ಸಾರಿಗೆ ಇಲಾಖೆ ನಿಗದಿ ಪಡಿಸಿದ ದರವನ್ನು ಪಾಲಿಸಬೇಕು ಎಂದು ಹೇಳಿದೆ. ಸಾರಿಗೆ ಇಲಾಖೆ ಹೊರಡಿಸಿದ ಆದೇಶ ಪಾಲನೆ ಮಾಡಬೇಕು ಮತ್ತು ಹೆಚ್ಚುವರಿ ಸರ್ವಿಸ್ ಚಾರ್ಜ್ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಅಧಿಕ ದರ ನಿಗಧಿ ಆರೋಪ: ಓಲಾ, ಉಬರ್ ಆಟೋ ಸೇವೆ ನಿಲ್ಲಿಸಲು ನೋಟಿಸ್

ಪ್ರಕರಣದ ಕುರಿತು 15 ದಿನ ಒಳಗೆ ವರದಿ ವರದಿ ಸಲ್ಲಿಸುವಂತೆ ಹೈಕೋರ್ಟ್‌ ಸರ್ಕಾರಕ್ಕೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 07 ವಿಚಾರಣೆ ಮುಂದೂಡಿಕೆ. ವಿಚಾರಣೆ ವೇಳೆ ಸರ್ಕಾರ ನಿಗಧಿ ಮಾಡಿದ ಬೆಲೆಗಿಂತ 20% ಮತ್ತು ಜಿಎಸ್‌ಟಿಗೆ ಓಲಾ-ಉಬರ್ ಪರ ವಕೀಲರು ಮನವಿ ಮಾಡಿದ್ದಾರೆ. ಸರ್ಕಾರದ ಆದೇಶಕ್ಕೆ ಆಟೋ ಚಾಲಕರು ಅಕ್ಷೇಪಣೆ ಮಾಡಿದ ಹಿನ್ನೆಲೆಯಲ್ಲಿ, ಮುಂದಿನ ಸಭೆಗೆ ಆಟೋ ಚಾಲಕರು, ಯೂನಿಯನ್‌ಗಳು ಹಾಗೂ ಸಾರ್ವಜನಿಕರನ್ನು ಕರೆಯಬೇಕು ಎಂದು ನ್ಯಾಯಾಲಯ ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...