Homeಕರ್ನಾಟಕರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನಲ್ಲಿ ಎಂದು ಮುಗಿಯದ ಸಮಸ್ಯೆ ರಸ್ತೆಗುಂಡಿಗಳದ್ದು. ಪ್ರತಿ ವರ್ಷವೂ ದುರಸ್ಥಿ ಕಾರ್ಯ ನಡೆಯುತ್ತಲೇ ಇದೆ ಎಙಂದು ಬಿಬಿಎಫಿ ಹೇಳಿಕೊಂಡರೂ, ಜನರಿಗೆ ಮಾತ್ರ ಕಷ್ಟ ತಪ್ಪಿದ್ದಲ್ಲ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಕಿಡಿ ಕಾರಿದೆ.

”ಬಿಬಿಎಂಪಿ ಸಲ್ಲಿಸಿರುವ ಸ್ಥಿತಿಗತಿ ವರದಿ ನಮಗೆ ತೃಪ್ತಿ ತಂದಿಲ್ಲ. ರಸ್ತೆಗಳ ದುರಸ್ತಿಗೆ ಅವರು ಯಾವ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದಾರೆ..? ಅವರು ರಸ್ತೆಗಳ ನಿರ್ಮಾಣ ಮತ್ತು ದುರಸ್ತಿಯಲ್ಲಿ ಯಾವುದೇ ತಜ್ಞರು ಅಥವಾ ಹೊರಗಿನ ಏಜೆನ್ಸಿಗಳನ್ನು ತೊಡಗಿಸಿಕೊಂಡಿದ್ದಾರೆಯೇ ಎಂಬುದನ್ನು ಪಾಲಿಕೆಯು ತಿಳಿಸಬೇಕು’ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ, ಕೋರಮಂಗಲದ ವಿಜಯನ್ ಮೆನನ್ ಮತ್ತು ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಪಾಲಿಕೆ ಎಂಜಿನಿಯರ್‌ಗಳನ್ನು ಜೈಲಿಗೆ ಕಳುಹಿಸಬೇಕು ಎಂದು ಕಿಡಿಕಾರಿರುವ ಹೈಕೋರ್ಟ್, ಮುಂದಿನ ವಿಚಾರಣೆಯ ದಿನಾಂಕವಾದ ಫೆಬ್ರವರಿ 7 ರಂದು ಮುಖ್ಯ ಇಂಜಿನಿಯರ್‌,  ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನಿರ್ದೇಶಿಸಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ಬಿಬಿಎಂಪಿ ವಕೀಲರು ನಗರದ ರಸ್ತೆಗಳ ಸ್ಥಿತಿಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ರಸ್ತೆಗಳು ಗುಂಡಿಗಳಿಂದ ತುಂಬಿದ್ದು, 30 ಕಿಮೀಗಿಂತ ಹೆಚ್ಚಿನ ಪ್ರಮುಖ ರಸ್ತೆಗಳು ಮತ್ತು 482 ಕಿಮೀ ಉಪ ರಸ್ತೆಗಳಲ್ಲಿ ಗುಂಡಿ ದುರಸ್ತಿ ಕಾರ್ಯ ನಡೆದಿಲ್ಲ. BWSSB, BESCOM ಮತ್ತು GAIL ನಂತಹ ಏಜೆನ್ಸಿಗಳು ರಸ್ತೆ ಅಗೆಯುವುದು, ಪೈಪ್‌ಲೈನ್‌ಗಳನ್ನು ಹಾಕುವುದರ ಪರಿಣಾಮವಾಗಿ ಹೊಂಡಗಳು ಮತ್ತು ರಸ್ತೆಯು ಹದಗೆಟ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಏಜೆನ್ಸಿಗಳಿಂದಲೇ ದುರಸ್ತಿ ಕಾರ್ಯ ನಡೆಯಬೇಕಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿಲ್ಲ ಎಂದು ಬಿಬಿಎಂಪಿ ವಕೀಲರು ತಿಳಿಸಿದರು. ಈ ಏಜೆನ್ಸಿಗಳು ಅನುಮತಿ ಪಡೆದು ರಸ್ತೆ ಅಗೆಯುವುದನ್ನು ಆರಂಭಿಸಿದರೂ ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸುತ್ತಿಲ್ಲ ಎಂದು ದೂರಿದ್ದಾರೆ.

ಇದಕ್ಕೆ ಉತ್ತರಿಸಿರುವ ನ್ಯಾಯಾಲಯ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಏಜೆನ್ಸಿಗಳ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಗುಂಡಿ ದುರಸ್ತಿಗೆ ಅಳವಡಿಸಿದ ವಿಧಾನ ಮತ್ತು ತಂತ್ರಜ್ಞಾನಗಳಾವುವು. ರಸ್ತೆಗಳಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡು ಜನರಿಗೆ ತೊಂದರೆ ಉಂಟುಮಾಡುವ ಬಿಬಿಎಂಪಿ ಮತ್ತು ಇತರ ಏಜೆನ್ಸಿಗಳ ನಡುವೆ ಯಾವುದೇ ನೀತಿ ಮತ್ತು ಸಮನ್ವಯವಿದೆಯೇ ಎಂಬುದನ್ನು ಬಿಬಿಎಂಪಿ ವಕೀಲರು ಸೂಚಿಸಿಲ್ಲ ಎಂದಿದೆ.

ಈ ಸಂಸ್ಥೆಗಳು ಮತ್ತು ಬಿಬಿಎಂಪಿ ನಡುವೆ ಒಂದಷ್ಟು ಸಮನ್ವಯತೆ ಇರಬೇಕು. ಇದಲ್ಲದೆ, ರಸ್ತೆಗಳು ಮತ್ತು ಹೊಂಡಗಳ ದುರಸ್ತಿಗೆ ಬಿಬಿಎಂಪಿ ಬಳಸುತ್ತಿರುವ ತಂತ್ರಜ್ಞಾನವು ಸರಿಯಾಗಿ ಕಾಣುತ್ತಿಲ್ಲ ಎಂದು ನ್ಯಾಯಾಲಯ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ.


ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ನಿರ್ವಹಣೆಯ 204 ಕೆರೆಗಳಲ್ಲಿ 20 ಮಾತ್ರ ಒತ್ತುವರಿಯಿಂದ ಮುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದುದರಲ್ಲಿ ಬೆಂಗಳೂರು ದಾರಿಗಳು ಚೆನ್ನಾಗಿವೆ.
    ಹಳ್ಳಿಗಳು, ಹೊರ ಊರಿನ ದಾರಿಗಳು ತುಂಬಾ ಹದಗೆಟ್ಟಿವೆ. Bwssb,bescom,kptcl, ofc ಯವರೂ ದಾರಿ ಅಗೆಯುತ್ತಾರೆ essential service ಹೆಸರಲ್ಲಿ. ಯಾರನ್ನು ಬೊಟ್ಟು ಮಾಡುವುದು.
    ಎಶ್ಟೋ ಮಂದಿ ಅಲೆಮಾರಿಗಳಿಗೆ ಮನೆಇಲ್ಲ.

  2. ಇದಕ್ಕೆ ಸರ್ಕಾರವನ್ನು ಹೊಣೆ ಮಾಡಬೇಕೆ ಹೊರತು ಇಂಜಿನಿಯರುಗಳನಲ್ಲ.
    ಗುತ್ತಿಗೆದಾರರು ಡಾಂಬರು, ಜೆಲ್ಲಿ,ರೋಲರ್,ಕೆಲಸಗಾರರು ಅವರಿಗೆ ತಕ್ಕ ಹಣದ ಪೂರಯ್ಕೆಯನ್ನು ಸರ್ಕಾರ ಮಾಡಬೇಕಿರುತ್ತದೆ. ಇವುಗಳ ಪೂರಯ್ಕೆ ಇಲ್ಲದೆ ತಮ್ಮ ಜೊತೆಗಾರರಿಗಿಂತ ಓದಿನಲ್ಲಿ ಮುಂದೆ ಇದ್ದು ಇಂಜಿನಿಯರಿಂಗ್ ಓದಿದವರನ್ನು ಕೋರ್ಟ್ ಈಕೆಳ ಮಟ್ಟದಲ್ಲಿ ನೋಡುವುದು ತರವಲ್ಲ.
    ಇಂಜಿನಿಯರ್ ಎಂದರೆ, ಎಇ/,ಜೆಇ, aee,ee,se,ce,EIC ಮುಂತಾದ ಹಲವಾರು ಕೇಡರುಗಳಿವೆ.
    ಯಾರನ್ನು ಸೆರೆಮನೆಗೆ ದೂಡುವುದು?
    ತಾಳುಬುಡ ತಿಳಿಯದವರ ಪೇಚಾಟ ಇದಶ್ಟೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...