Homeಕರ್ನಾಟಕಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ 'ಪಕ್ಷಪಾತದ ನಿಲುವು' : ಸಿಜೆಐಗೆ ಪತ್ರ ಬರೆದ ವಕೀಲ

ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ‘ಪಕ್ಷಪಾತ ನಿಲುವು’ ಅನುಸರಿಸುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್ ದೇಶಪಾಂಡೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಾಂಗ ಯಡಿಯೂರಪ್ಪ ಪರ ನಿಲುವು ತಾಳುತ್ತಿದೆ ಎಂದು ವಕೀಲ ಸಚಿನ್ ಆರೋಪಿಸಿದ್ದು, 2017ರಿಂದ ಬಾಕಿ ಉಳಿದಿರುವ ಯಡಿಯೂರಪ್ಪ ವಿರುದ್ದದ ಹಲವು ಪ್ರಕರಣಗಳ ತನಿಖೆಗೆ ಯಾವುದೇ ವಿವರಣೆ ನೀಡದೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದಿದ್ದಾರೆ.

“ಯಡಿಯೂರಪ್ಪ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ಕೋರಿದರೆ, ಸುಪ್ರೀಂ ಕೋರ್ಟ್ ತಕ್ಷಣವೇ ಅದನ್ನು ಮಂಜೂರು ಮಾಡುತ್ತದೆ. ಯಾವುದೇ ವಿವರಣೆ ಇಲ್ಲದೆ ನೀಡುವ ತಡೆಯಾಜ್ಞೆ ಆದೇಶಗಳನ್ನು ಪ್ರಾಸಿಕ್ಯೂಷನ್ (ಕರ್ನಾಟಕ ಸರ್ಕಾರ ಮತ್ತು ಭ್ರಷ್ಟಾಚಾರ ನಿಗ್ರಹ ದಳ) ಪ್ರಶ್ನಿಸುವವರೆಗೆ ಯಾವುದೇ ವ್ಯತ್ಯಾಸವಿಲ್ಲದೆ ವರ್ಷಗಳ ಕಾಲ ವಿಸ್ತರಣೆ ಮಾಡಲಾಗುತ್ತಿದೆ” ಎಂದು ಸಚಿನ್ ದೂರಿದ್ದಾರೆ.

ಯಡಿಯೂರಪ್ಪ ವಿರುದ್ಧ ಪಿಸಿ ಕಾಯ್ದೆಯಡಿ ದಾಖಲಾದ ಭ್ರಷ್ಟಾಚಾರ ಪ್ರಕರಣಗಳನ್ನು ಹೈಕೋರ್ಟ್‌ ವಜಾ ಮಾಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತ/ಭ್ರಷ್ಟಾಚಾರ ನಿಗ್ರಹ ದಳ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಆದರೆ, ಇದುವರೆಗೂ ತಡೆ ನೀಡುವುದನ್ನು ಸುಪ್ರೀಂ ಕೋರ್ಟ್‌ ಪರಿಗಣಿಸಿಲ್ಲ ಎಂದು ಸಚಿನ್ ಹೇಳಿದ್ದಾರೆ.

“ನಿರ್ದಿಷ್ಟವಾಗಿ ಯಡಿಯೂರಪ್ಪ ಅವರಿಗೆ ಅನುಕೂಲಕರವಾದ ಹೈಕೋರ್ಟ್ ಆದೇಶಗಳನ್ನು ತಡೆಯಲು ಪ್ರಾಸಿಕ್ಯೂಷನ್ ಪ್ರಯತ್ನಿಸಿದ ಪ್ರಕರಣಗಳಲ್ಲಿ, ತಡೆ ನೀಡುವ ಮತ್ತು ವಿಚಾರಣೆಯನ್ನು ವಿಳಂಬಗೊಳಿಸುವ ಮಾದರಿಯು ನ್ಯಾಯಾಂಗ ಪಕ್ಷಪಾತ ಮಾಡುತ್ತಿದೆಯೇ? ಎಂಬ ಪ್ರಶ್ನೆ ಮೂಡಿಸುತ್ತದೆ” ಎಂದು ಸಚಿನ್ ಕಳವಳ ವ್ಯಕ್ತಪಡಿಸಿದ್ದಾರೆ.

ಸಿಜೆಐಗೆ ಬರೆದಿರುವ ಪತ್ರದಲ್ಲಿ ವಕೀಲ ಸಚಿನ್ ಅವರು ತನ್ನ ಆರೋಪವನ್ನು ಪುಷ್ಠೀಕರಿಸುವ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಕೆಲ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಅವುಗಳು ಹೀಗಿವೆ..

ಶಿವರಾಮ ಕಾರಂತ ಬಡಾವಣೆಯಲ್ಲಿ 257 ಎಕರೆ ಡಿನೋಟಿಫಿಕೇಶನ್‌

ಆಲಂ ಪಾಷಾ ಅವರು ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ 2021ರ ಜನವರಿ 05ರಂದು ಹೈಕೋರ್ಟ್‌, ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿದಿರುವುದರಿಂದ ಪ್ರಾಸಿಕ್ಯೂಷನ್‌ಗೆ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ ಅಡಿ ಅನುಮತಿ ಬೇಕಿಲ್ಲ ಎಂದು ಹೇಳಿತ್ತು.

ಈ ಬೆನ್ನಲ್ಲೇ ಯಡಿಯೂರಪ್ಪ ಅವರು ಬಂಧನ ಭೀತಿಯಿಂದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. 2021ರ ಜನವರಿ 27ರಂದು ಸುಪ್ರೀಂ ಕೋರ್ಟ್‌ ಯಡಿಯೂರಪ್ಪ ಅವರ ಬಂಧನಕ್ಕೆ ತಡೆ ನೀಡಿ, ನೋಟಿಸ್‌ ಜಾರಿ ಮಾಡಿತ್ತು. ಆದೇಶದಲ್ಲಿ ಎಲ್ಲಿಯೂ ಏಕೆ ತಡೆ ನೀಡಲಾಗುತ್ತದೆ ಎಂಬುವುದಕ್ಕೆ ಸುಪ್ರೀಂ ಕೋರ್ಟ್ ಕಾರಣ ನೀಡಿರಲಿಲ್ಲ. ಯಡಿಯೂರಪ್ಪ ಜೊತೆಗೂಡಿ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳು ಸಲ್ಲಿಸಿರುವ ಅರ್ಜಿಯಲ್ಲಿಯೂ ಅದೇ ಆದೇಶ ಪಾಲನೆ ಮಾಡಲಾಗಿದೆ. ನಾಲ್ಕು ವರ್ಷಗಳಿಂದ ಈ ಆದೇಶ ಚಾಲ್ತಿಯಲ್ಲಿದೆ.

2008-2011ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಡಾ. ಕೆ ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿಗೆ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ 257 ಎಕರೆಯನ್ನು ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

2017ರ ಜೂನ್‌ 06ರಂದು ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಎಸಿಬಿ, ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ್ದ ಕರ್ನಾಟಕ ಹೈಕೋರ್ಟ್‌ 2017ರ ಸೆಪ್ಟೆಂಬರ್‌ 22ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಹೈಕೋರ್ಟ್‌ ತಡೆಯಾಜ್ಞೆ ಪ್ರಶ್ನಿಸಿ ಎಸಿಬಿಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 2017ರ ಡಿಸೆಂಬರ್‌ 11ರಂದು ಈ ಕುರಿತು ನೋಟಿಸ್‌ ಜಾರಿಯಾಗಿದ್ದು, ಇದುವರೆಗೆ ಯಾವುದೇ ಬೆಳವಣಿಗೆಯಾಗಿಲ್ಲ. 2018ರ ನವೆಂಬರ್‌ 14ರಂದು ಕೊನೆಯ ಬಾರಿಗೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆರು ವರ್ಷಗಳಿಂದ ಇದುವರೆಗೂ ಪ್ರಕರಣವು ವಿಚಾರಣೆಗೆ ಬಂದಿಲ್ಲ. 2017ರ ಸೆಪ್ಟೆಂಬರ್‌ನಿಂದ ಪ್ರಕರಣದ ತನಿಖೆಗೆ ತಡೆ ನೀಡಲಾಗಿದೆ.

ವಾಸುದೇವ ರೆಡ್ಡಿ ಡಿನೋಟಿಫಿಕೇಶನ್‌ ಪ್ರಕರಣ

ಬಿ.ಎಸ್‌ ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ನಡೆಸಿರುವ ಅಕ್ರಮ ಡಿನೋಟಿಫಿಕೇಶ್‌ ಆರೋಪ ಸಂಬಂಧ ಖಾಸಗಿ ದೂರಿನಲ್ಲಿ ವಿಶೇಷ ನ್ಯಾಯಾಲಯ ನೀಡಿರುವ ನಿರ್ದೇಶನ ಆಧರಿಸಿ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಸೆಕ್ಷನ್‌ 13(1)(ಡಿ) ಜೊತೆಗೆ 13(2)ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು 2020ರ ಡಿಸೆಂಬರ್‌ 22ರಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. 2015ರ ಫೆಬ್ರವರಿ 18ರಿಂದ 2019ರ ಏಪ್ರಿಲ್‌ 02ರವರೆಗೆ ಯಾವುದೇ ತಡೆ ಇಲ್ಲದಿದ್ದರೂ ತನಿಖೆ ವಿಳಂಬ ಮಾಡಿದ್ದಕ್ಕೆ ಲೋಕಾಯುಕ್ತ ಪೊಲೀಸರನ್ನು ಹೈಕೋರ್ಟ್‌ ಟೀಕಿಸಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. 2022ರ ಫೆಬ್ರವರಿ 18ರಂದು ಪ್ರಕರಣವು ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. 2022ರ ಜುಲೈ 22ರಂದು ಮೊದಲ ವಿಚಾರಣೆ ನಡೆದಿತ್ತು. ನೋಟಿಸ್‌ ಜಾರಿ ಮಾಡಿದ್ದ ಸುಪ್ರೀಂ ಕೋರ್ಟ್, ತನಿಖೆಗೆ ತಡೆ ನೀಡಿತ್ತು. ಅಂದಿನಿಂದ 2023ರ ಫೆಬ್ರವರಿ 14ರ ರವರೆಗೆ ಕೊನೆಯ ಬಾರಿಗೆ ವಿಚಾರಣೆ ಮುಂದೂಡಲಾಗಿದೆ. ಇದುವರೆಗೂ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿಲ್ಲ.

ಸಿಎಜಿ ವರದಿಯಲ್ಲಿನ ಡಿನೋಟಿಫಿಕೇಶನ್‌

ಸಾಮಾಜಿಕ ಕಾರ್ಯಕರ್ತ ಜಯಕುಮಾರ್‌ ಹಿರೇಮಠ ಅವರು ಸಿಎಜಿ ವರದಿ ಆಧರಿಸಿ ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಅಕ್ರಮ ಡಿನೋಟಿಫಿಕೇಶನ್‌ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿದ್ದ 15 ಅರ್ಜಿಗಳನ್ನು ಹೈಕೋರ್ಟ್‌ ವಜಾ ಮಾಡಿತ್ತು.

ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ

ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಲಂಚ, ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಇದನ್ನು ಪ್ರಶ್ನಿಸಿ ಅಬ್ರಹಾಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಭಾಗಶಃ ಪುರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ 2022ರ ಸೆಪ್ಟೆಂಬರ್‌ 23ರಂದು ವಿಶೇಷ ನ್ಯಾಯಾಲಯದಲ್ಲಿನ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿತ್ತು. ಅಂದಿನಿಂದ ಇದುವರೆಗೂ ಪ್ರಕರಣ ಇತ್ಯರ್ಥವಾಗಿಲ್ಲ.

ಸೌಜನ್ಯ : thenewsminute.com, kannada.barandbench.com

ಇದನ್ನೂ ಓದಿ : ತುಮಕೂರು | 2010ರಲ್ಲಿ ನಡೆದ ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...