Homeಕರ್ನಾಟಕಬೆಂಗಳೂರು: ಹಣ ಪಡೆದು, ನಕಲಿ ನೇಮಕಾತಿ ಪತ್ರ ಕೊಟ್ಟು ವಂಚಿಸುತ್ತಿದ್ದ ವ್ಯಕ್ತಿ ಬಂಧನ

ಬೆಂಗಳೂರು: ಹಣ ಪಡೆದು, ನಕಲಿ ನೇಮಕಾತಿ ಪತ್ರ ಕೊಟ್ಟು ವಂಚಿಸುತ್ತಿದ್ದ ವ್ಯಕ್ತಿ ಬಂಧನ

- Advertisement -
- Advertisement -

ಟೆಕ್ ಉದ್ಯೋಗ ಆಕಾಂಕ್ಷಿಗಳಿಗೆ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಮಹಾರಾಷ್ಟ್ರದ ವ್ಯಕ್ತಿಯೊಬ್ಬರನ್ನು ಬೆಂಗಳೂರು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ.

ಆರೋಪಿಯನ್ನು ಮಹಾರಾಷ್ಟ್ರದ ಪುಣೆಯ ಚಿಂಚ್‌ವಾಡ್‌ನ 34 ವರ್ಷದ ಸಂಜೀವ್ ಗಂಗಾರಾಮ್ ಘೂರ್ಖಾ ಎಂದು ಗುರುತಿಸಲಾಗಿದೆ.  ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಕೆಲಸ ಕೊಡಿಸುವುದಾಗಿ ಹಲವರಿಗೆ ವಂಚನೆ ಮಾಡಿದ್ದಾರೆ. ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆಯಲು ಎಂಟು ಬ್ಯಾಂಕ್ ಖಾತೆಗಳನ್ನು ಆರೋಪಿ ತೆರೆದಿದ್ದಾರೆ.

“ಆರೋಪಿಯು ಕಂಪನಿಗೆ ನೇಮಕಾತಿ ಮಾಡುವುದಾಗಿ ಹೇಳಿಕೊಂಡು ಸಾಮಾಜಿಕ ಮಾಧ್ಯಮ ಮತ್ತು ಇತರ ವೇದಿಕೆಗಳಲ್ಲಿ ಜಾಹೀರಾತುಗಳನ್ನು ನೀಡಿದ್ದಾರೆ. ಅವರು ಅರ್ಜಿದಾರರಿಗೆ ಇಂಟರ್‌ವ್ಯೂ ಲೇಟರ್‌ಗಳನ್ನು ಕಳುಹಿಸಿ, ಆನ್‌ಲೈನ್ ಸಂದರ್ಶನಗಳನ್ನು ನಡೆಸಿದ್ದಾರೆ. ಕೆಲಸ ನೀಡುವುದಾಗಿ ಆರೋಪಿಯು ಸಂತ್ರಸ್ತರಿಗೆ ತಿಳಿಸಿ, ಮನೆಯಿಂದಲೇ ಕೆಲಸ ಮಾಡಬೇಕು ಹೀಗಾಗಿ ಲ್ಯಾಪ್‌ಟಾಪ್ ಮತ್ತು ಇತರ ಉಪಕರಣಗಳಿಗೆ ಹಣವನ್ನು ಠೇವಣಿ ಮಾಡಿ ಎಂದು ಹಣ ಪಡೆದಿದ್ದಾರೆ” ಎಂದು ಡಿಸಿಪಿ (ಈಶಾನ್ಯ) ಅನೂಪ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌‌‌‌ ರಚನೆಗೆ ಹೆಚ್ಚುತ್ತಿರುವ ಒತ್ತಡ: ಹೈಕಮಾಂಡ್‌‌‌‌‌ ಒಪ್ಪಿಗೆಗೆ ಕಾಯುತ್ತಿದ್ದೇನೆ ಎಂದ ಬೊಮ್ಮಾಯಿ!

 

“ಇದುವರೆಗಿನ ತನಿಖೆಯಿಂದ ಆರೋಪಿಯು ನಾಲ್ವರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈತ ಸುಮಾರು 40 ಉದ್ಯೋಗ ಆಕಾಂಕ್ಷಿಗಳಿಗೆ ನೇಮಕಾತಿ ಪತ್ರಗಳನ್ನು ಕಳುಹಿಸಿದ್ದಾರೆ ಎಂದು ನಮಗೆ ತಳಿದು ಬಂದಿದೆ. ಹೆಚ್ಚಿನ ಮಾಹಿತಿ ಸಂಗ್ರಹಿಸಲು ನಾವು ಈ ಅಭ್ಯರ್ಥಿಗಳೊಂದಿಗೆ ಮಾತನಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಅಭ್ಯರ್ಥಿಗಳಿಗೆ ಕಂಪನಿಯ ಲೋಗೋಗಳೊಂದಿಗೆ ನಕಲಿ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಈ ಅಭ್ಯರ್ಥಿಗಳು ಕಂಪನಿಯ ಎಚ್‌ಆರ್‌ ಡಿಪಾರ್ಟ್‌ಮೆಂಟ್‌ ಅವರನ್ನು ಭೇಟಿಯಾದಾಗ ವಂಚನೆಗೆ ಒಳಗಾಗಿರುವುದು ತಿಳಿದು ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ ಮೂವರು ಉದ್ಯೋಗಾಕಾಂಕ್ಷಿಗಳು ಆರೋಪಿಗೆ ಸುಮಾರು 1.5 ಲಕ್ಷ ರೂಪಾಯಿ ನೀಡಿದ್ದಾರೆ.


ಇದನ್ನೂ ಓದಿ: ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿಗೆ ಕಾಂಗ್ರೆಸ್ ಮತ್ತೊಂದು ಅವಕಾಶ ನೀಡಬೇಕು: ನಟ ಸೋನು ಸೂದ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...