Homeಕರ್ನಾಟಕಬೆಂಗಳೂರು ಮೆಟ್ರೋ ಪಿಲ್ಲರ್‌ ದುರಂತ: ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ರಾಜ್ಯ ಹೈಕೋರ್ಟ್

ಬೆಂಗಳೂರು ಮೆಟ್ರೋ ಪಿಲ್ಲರ್‌ ದುರಂತ: ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ರಾಜ್ಯ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿದ ಘಟನೆಯನ್ನು ರಾಜ್ಯ ಹೈಕೋರ್ಟ್ ಶುಕ್ರವಾರ ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಂಡಿದೆ. ಪತ್ರಿಕೆಗಳ ವರದಿಗಳನ್ನು ಅವಲಂಬಿಸಿ ನ್ಯಾಯಾಲಯವು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರನ್ನೊಳಗೊಂಡ ಪೀಠವು ರಾಜ್ಯ ಸರ್ಕಾರ, ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಸಂಬಂಧಪಟ್ಟ ಗುತ್ತಿಗೆದಾರ ಮತ್ತು ಸಂಬಂಧಿತ ಪ್ರಾಧಿಕಾರಕ್ಕೆ ಈ ಪ್ರಕ್ರಿಯೆಗಳಿಗೆ ಕಕ್ಷಿದಾರರನ್ನಾಗಿ ಸೇರಿಸಿಕೊಳ್ಳಬಹುದು ಎಂದು ಆದೇಶ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನವರಿ 10 ರಂದು, ಬೆಂಗಳೂರಿನ ನಾಗವಾರ ಬಳಿಯ ಹೊರವರ್ತುಲ ರಸ್ತೆಯಲ್ಲಿರುವ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಪಿಲ್ಲರ್ ಮತ್ತು ಸ್ಕ್ಯಾಫೋಲ್ಡಿಂಗ್ ಕುಸಿದು ಮಹಿಳೆ ಮತ್ತು ಅವರ ಎರಡೂವರೆ ವರ್ಷದ ಮಗ ಸಾವನ್ನಪ್ಪಿದ್ದರು.

ಮೃತ ತೇಜಸ್ವಿನಿ, ಅವರ ಪತಿ ಲೋಹಿತ್ ಸುಲಾಖೆ ಮತ್ತು ಅವರ ಅವಳಿ ಮಕ್ಕಳಾದ ವಿಹಾನ್ ಮತ್ತು ವಿಸ್ಮಿತಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಲೋಹದ ರಾಡ್‌ಗಳಿಂದ ಮಾಡಿದ ಬೀಮ್ ಅವರ ಮೇಲೆ ಬಿದ್ದಿದೆ. ಘಟನೆಯು ಕಲ್ಯಾಣ್ ನಗರ ಮತ್ತು ಎಚ್‌ಆರ್‌ಬಿಆರ್ ಲೇಔಟ್ ನಡುವಿನ ಹೊರವರ್ತುಲ ರಸ್ತೆಯಲ್ಲಿ ನಡೆದಿತ್ತು.

ಘಟನೆ ನಡೆದ ಮರುದಿನವೇ ಬೆಂಗಳೂರು ಪೊಲೀಸರು ಬಿಎಂಆರ್‌ಸಿಎಲ್‌ನ ಮೂವರು ಅಧಿಕಾರಿಗಳು ಮತ್ತು ಗುತ್ತಿಗೆದಾರ ಕಂಪನಿಯ ಆರು ಪ್ರತಿನಿಧಿಗಳ ವಿರುದ್ಧ ತನಿಖೆ ಆರಂಭಿಸಿದ್ದರು. ಯಾವುದೇ ನಿರ್ಲಕ್ಷ್ಯ ಅಥವಾ ಸುರಕ್ಷತಾ ಪ್ರೋಟೋಕಾಲ್‌ಗಳ ಉಲ್ಲಂಘನೆ ಈ ದುರಂತ ಸಾವಿಗೆ ಕಾರಣವಾಗಿದೆಯೇ ಎಂದು ತನಿಖೆ ನಡೆಯುತ್ತಿದೆ.

ಈ ಘಟನೆಯು ವ್ಯಾಪಕ ಖಂಡನೆಗೆ ಕಾರಣವಾಗಿದ್ದು, ನಗರದ ಎಲ್ಲಾ ನಿರ್ಮಾಣ ಸ್ಥಳಗಳಲ್ಲಿ ಕಟ್ಟುನಿಟ್ಟಾದ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಲು ಜನರು ಆಗ್ರಹಿಸಿದ್ದಾರೆ. ಅಲ್ಲದೆ ಸಾರ್ವಜನಿಕರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...