Homeಕರ್ನಾಟಕಬೆಂಗಳೂರು | ಹಣದ ವಿಚಾರವಾಗಿ ತಾಯಿಯನ್ನೆ ಕತ್ತು ಹಿಸುಕಿ ಕೊಂದ ಮಗ!

ಬೆಂಗಳೂರು | ಹಣದ ವಿಚಾರವಾಗಿ ತಾಯಿಯನ್ನೆ ಕತ್ತು ಹಿಸುಕಿ ಕೊಂದ ಮಗ!

- Advertisement -
- Advertisement -

ಹಣ ಕಾಸಿನ ವಿಚಾರವಾಗಿ ದುಷ್ಕರ್ಮಿಯೊಬ್ಬ ತನ್ನ ತಾಯಿಯನ್ನೆ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನವೆಂಬರ್ 8ರಂದು ನಡೆದಿದ್ದ ಕೊಲೆಯ ಬಗ್ಗೆ ತನಿಖೆ ನಡೆಸುತ್ತಿದ್ದ ಪೊಲೀಸರು ಮೃತ ಮಹಿಳೆಯ ಹಿರಿಯ ಮಗ ಉಮೇಶ್ (33) ಮತ್ತು ಆತನ ಸಂಬಂಧಿ ಸುರೇಶ್‌(43) ಎಂಬವನ್ನು ಬಂಧಿಸಿದ್ದಾರೆ. ಮಹಿಳೆಯ ಕಿರಿಯ ಮಗನ ಸ್ನೇಹಿತ ಅವರಿಗೆ ದಿನಸಿ ಸಾಮಾನು ಕೊಡಲು ಮನೆಗೆ ತೆರಳಿದ್ದಾಗ ಮಹಿಳೆ ಶವವಾಗಿ ಪತ್ತೆಯಾಗಿದ್ದರು. ಬೆಂಗಳೂರು

ಮಹಿಳೆಯ ಹಿರಿಯ ಮಗ ಉಮೇಶ್ ಹಣಕಾಸಿನ ವಿಚಾರದಲ್ಲಿ ತನ್ನ ತಾಯಿಯನ್ನು ಕೊಲೆ ಮಾಡಿದ್ದು, ಮೃತ ಜಯಮ್ಮ (49) ಅವರ ತಲೆಯನ್ನು ಗೋಡೆಗೆ ಒಡೆದು, ಆಕೆಯನ್ನು ತುಳಿದು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗೃಹಿಣಿಯಾಗಿದ್ದ ಜಯಮ್ಮ ಇತ್ತೀಚೆಗೆ ಬೊಮ್ಮನಹಳ್ಳಿ ಬಳಿಯ ಹೊಂಗಸಂದ್ರದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ನವೆಂಬರ್ 9 ರಂದು ಅವರ ಕಿರಿಯ ಮಗನ ಸ್ನೇಹಿತ ಜಯಮ್ಮ ಅವರ ಮನೆಗೆ ದಿನಸಿ ನೀಡಲು ತೆರಳಿದ್ದರು. ಈ ವೇಳೆ ಬಾಗಿಲು ತಟ್ಟಿದರೂ ಯಾರೂ ಬಾಗಿಲು ತೆಗೆದಿರಲಿಲ್ಲ. ಬಳಿಕ ಮನೆಯ ಮಾಲೀಕರಿಗೆ ಮಾಹಿತಿ ನೀಡಿ ಬದಲಿ ಕೀ ಬಳಸಿ ಬಾಗಿಲು ತೆರೆದಾಗ ಜಯಮ್ಮ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ, ಪೊಲೀಸರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕರಾಗಿರುವ ಅವರ ಕಿರಿಯ ಮಗನನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಅಪರಾಧ ನಡೆದಾಗ ಅವರು ಕರ್ತವ್ಯದಲ್ಲಿದ್ದ ಕಾರಣ ಕೊಲೆಯಲ್ಲಿ ಅವರ ಕೈವಾಡ ಇರುವುದನ್ನು ತಳ್ಳಿಹಾಕಿದ್ದರು.

“ಹಣಕಾಸಿನ ವಿಚಾರದಲ್ಲಿ ಜಗಳವಾಗಿ ಜಯಮ್ಮ ಅವರು ತಮ್ಮ ಹಿರಿಯ ಮಗ ಉಮೇಶ್‌ನಿಂದ ದೂರ ಉಳಿದಿದ್ದರು ಎಂದು ನಮ್ಮ ತನಿಖೆಯಿಂದ ತಿಳಿದುಬಂದಿತ್ತು. ಹಾಗಾಗಿ ಕೆ.ಆರ್.ಮಾರುಕಟ್ಟೆಯಿಂದ ಉಮೇಶ್‌ನನ್ನು ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದಾಗ ಆತನೇ ಕೊಲೆ ಮಾಡಿರುವುದು ಪತ್ತೆಯಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಯಮ್ಮ ಇತ್ತೀಚೆಗೆ ತನ್ನ ಪತಿಯ ಆಸ್ತಿಯನ್ನು ಮಾರಿ ಹಣವನ್ನು ಕೆಲವು ಜನರಿಗೆ ಸಾಲವಾಗಿ ನೀಡಿದ್ದರು. ಆದರೆ, ಅವರ ಹಿರಿಯ ಮಗ ಉಮೇಶ್ ವಾಹನ ಖರೀದಿಸಲು ಹಣ ಕೇಳುತ್ತಲೇ ಇದ್ದ. ಆದರೆ ಮದ್ಯದ ದಾಸನಾಗಿದ್ದ ಆತನಿಗೆ ಹಣ ನೀಡಲು ಅವರು ಒಪ್ಪಿರಲಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

“ಉಮೇಶ್ ಹಣ ಕೇಳಿ ತನ್ನ ತಾಯಿಗೆ ತೊಂದರೆ ನೀಡುವುದನ್ನು ನಿಲ್ಲಿಸದಿದ್ದಾಗ, ಜಯಮ್ಮ ಆ ಮನೆಯಿಂದ ಹೊರಬಂದು ಹೊಂಗಸಂದ್ರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಈ ವೇಳೆ ಉಮೇಶ್ ತನ್ನ ಸಂಬಂಧಿ ಸುರೇಶನ ಸಹಾಯದಿಂದ ಅವರ ಮನೆಯನ್ನು ಪತ್ತೆಹಚ್ಚಿ ಅಲ್ಲಿಗೆ ತೆರಳಿ ಜಗಳವಾಡಿದ್ದನು. ಈ ವೇಳೆ ಜಯಮ್ಮ ಅವರ ಕೊಲೆ ಮಾಡಲಾಗಿತ್ತು. ಈ ಕೊಲೆಗೆ ಸುರೇಶ ಸಹಕರಿಸಿದ್ದ’’ ಎಂದು ಅಧಿಕಾರಿ ತಿಳಿಸಿದ್ದಾರೆ. ಉಮೇಶ್ ಮತ್ತು ಸುರೇಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...