Homeಕರ್ನಾಟಕಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

- Advertisement -
- Advertisement -

ಜೈನ ದೇವಾಲಯವೊಂದರ ಬ್ಯಾನರ್ ನಲ್ಲಿ ಹಿಂದಿಯಿದ್ದ ಕಾರಣಕ್ಕಾಗಿ ಅದನ್ನು ತೆರವುಗೊಳಿಸಿ ಎಂದು ಕನ್ನಡ ಕಾರ್ಯಕರ್ತರು ಆಗ್ರಹಿಸಿದ್ದಕ್ಕೆ ಅವರನ್ನು ಬಂಧಿಸಲಾಗಿದೆ. ಇದೇ ವೇಳೆ ಈ ಘಟನೆಯನ್ನು ಜೈನರ ಮೇಲೆ ರೌಡಿಗಳಿಂದ ಹಲ್ಲೆ ಎಂದು ಕರೆಯುವ ಮೂಲಕ ಸಂಸದ ತೇಜಸ್ವಿ ಸೂರ್ಯ ಕನ್ನಡ ಭಾಷೆಯ ಪ್ರಕರಣವನ್ನು ಕೋಮುವಾದಿಕರಿಸುತ್ತಿದ್ದಾರೆ ಎಂದು ಹಲವರು ಖಂಡನೆ ವ್ಯಕ್ತಪಡಿಸಿದ್ದಾರೆ.

“ಕೆಲವು ರೌಡಿಗಳಿಂದ ಜೈನ ದೇವಾಲಯದ ಬ್ಯಾನರ್ ಮೇಲೆ ಹಿಂದಿ ಇದ್ದ ಕಾರಣಕ್ಕಾಗಿ ಬೆಂಗಳೂರಿನಲ್ಲಿನ ನಮ್ಮ ಜೈನ ಸಹೋದರರ ಮೇಲೆ ನಡೆಸಿದ ದಾಳಿಯಿಂದ ತೀವ್ರವಾಗಿ ನೋವುಂಟಾಗಿದೆ.

ಅವರು ಬೆಂಗಳೂರಿನಲ್ಲಿ ಉರ್ದು ಬಳಕೆಯನ್ನು ಎಂದಿಗೂ ಪ್ರಶ್ನಿಸುವುದಿಲ್ಲ.

ಕರ್ನಾಟಕಕ್ಕೆ ಕೊಡುಗೆ ನೀಡುವ ಶಾಂತಿಯುತ ಜೈನರನ್ನು ಆಕ್ರಮಣ ಮಾಡುವುದು ನಿಜವಾದ ಕನ್ನಡ ಪ್ರಿಯರಿಗೆ ಮತ್ತು ಕಾರ್ಯಕರ್ತರಿಗೆ ಅಪಚಾರವನ್ನು ತರುತ್ತದೆ”. ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಚಿಂತಕರಾದ ದಿನೇಶ್ ಅಮೀನ್ ಮಟ್ಟುರವರು ಫೇಸ್ ಬುಕ್ ನಲ್ಲಿ ಈ ಕೆಳಗಿನಂತೆ ಪ್ರತಿಕ್ರಿಯಿಸಿದ್ದಾರೆ.

ಹಿಂದಿ ಭಾಷೆಯಲ್ಲಿದ್ದ ಬ್ಯಾನರ್ ಹರಿದುಹಾಕಿದ್ದಕ್ಕಾಗಿ ಈ ಕನ್ನಡ ಹೋರಾಟಗಾರರನ್ನು ಬಂಧಿಸಲಾಗಿದೆ. ಹಿಂದಿ ಹೇರಿಕೆ ವಿರುದ್ಧದ ಪ್ರತಿರೋಧವನ್ನು ಸಂಸದ ತೇಜಸ್ವಿ ಸೂರ್ಯ, ಇದು ಜೈನ ಧರ್ಮದ ಮೇಲಿನ ದಾಳಿ ಎಂಬಂತೆ ಬಿಂಬಿಸಿ ಟ್ವೀಟ್ ಮಾಡಿ ಅನಗತ್ಯವಾಗಿ ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುವ ಪ್ರಯತ್ನ ಮಾಡಿದ್ದಾರೆ.

ಇದು ಕನ್ನಡ ಮತ್ತು ಹಿಂದಿಯ ನಡುವೆ ನಡೆಯುತ್ತಿರುವ ಸಂಘರ್ಷ. ಇದರಲ್ಲಿ ಜೈನ, ಹಿಂದು ಎಲ್ಲಿಂದ ಬಂತು? ಈ ರೀತಿ ಧರ್ಮವನ್ನು ಇದಕ್ಕೆ ಎಳೆದು ತರುತ್ತಿರುವವರ ಉದ್ದೇಶವಾದರೂ ಏನು? ಹಿಂದಿಯಲ್ಲಿದ್ದ ಬ್ಯಾನರ್ ಹರಿದುಹಾಕಿರುವುದು ಇದು ಮೊದಲನೇ ಸಲವೇನಲ್ಲ, ಬಹುಷ: ಕೊನೆಯದ್ದೂ ಅಲ್ಲ. ಅದನ್ನು ಅಪರಾಧವೆಂದು ಪರಿಗಣಿಸುವುದಾದರೆ ಆ ಪ್ರತಿರೋಧಕ್ಕೆ ಧರ್ಮವನ್ನು ತಳುಕುಹಾಕಿರುವುದು ಅದಕ್ಕಿಂತಲೂ ದೊಡ್ಡ ಅಪರಾಧ ಅಲ್ಲವೇ?

ಕನ್ನಡಿಗರು ಎಂದರೆ ಕನ್ನಡಿಗರು ಅಷ್ಟೇ, ಅದರಲ್ಲಿ ಹಿಂದು,ಮುಸ್ಲಿಮ್, ಕ್ರಿಶ್ಚಿಯನ್, ಜೈನ ಎಂಬ ಭೇದಗಳಿಲ್ಲ. ಇದು ಎರಡು ಸಾವಿರ ವರ್ಷಗಳ ಕನ್ನಡದ ಇತಿಹಾಸ ಕಲಿಸಿರುವ ಪಾಠ.

ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಸೂಕ್ಷ್ಮಗಳನ್ನೆಲ್ಲ ಗಮನಿಸುವಷ್ಟು ಸಮಯ ಮತ್ತು ಆಸಕ್ತಿ ಇದೆಯೋ ಗೊತ್ತಿಲ್ಲ. ಅವರ ಗಮನಕ್ಕಾದರೂ ಇದು ಬಂದಿದೆಯೋ ತಿಳಿದಿಲ್ಲ. ಕನ್ನಡಿಗರು ಉದ್ಯೋಗಕ್ಕಾಗಿ ನಡೆಸುತ್ತಿರುವ ಹೋರಾಟವನ್ನು ಗುರುತಿಸಿರುವ ಮುಖ್ಯಮಂತ್ರಿಗಳು ಮೊನ್ನೆ ಸ್ವಾತಂತ್ರ್ಯೋತ್ಸವ ಸಮಾರಂಭದ ಭಾಷಣದಲ್ಲಿ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆದರೆ ಇದ್ದಕ್ಕಿದ್ದ ಹಾಗೆ ಹೋರಾಟಗಾರರನ್ನು ಬೆದರಿಸುವ, ಹತ್ತಿಕ್ಕುವ ಪ್ರಯತ್ನ ಪೊಲೀಸರಿಂದ ನಡೆದಿದೆ.

ಇದು ಸಂವಿಧಾನೇತರ ಶಕ್ತಿಗಳು ಜಾಗೃತಗೊಳ್ಳುತ್ತಿರುವ ಮತ್ತು ಚುನಾಯಿತ ಸರ್ಕಾರದ ಅಧಿಕಾರವನ್ನು ಹೈಜಾಕ್ ಮಾಡುವ ಪ್ರಯತ್ನದ ಆರಂಭ.. ಮುಖ್ಯಮಂತ್ರಿಗಳು ಜಾಗೃತರಾಗಿ ತಕ್ಷಣ ಮಧ್ಯಪ್ರವೇಶಿಸಿ ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಆದೇಶ ನೀಡಬೇಕು. ಇದರ ಮೂಲಕ ರಾಜ್ಯಕ್ಕೆ ತಾವೇ ಮುಖ್ಯಮಂತ್ರಿ ಎನ್ನುವುದನ್ನು ಸಾರಿ ಹೇಳಬೇಕು. ಎಂದು ದಿನೇಶ್ ಅಮೀನ್ ಮಟ್ಟು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಯುವ ಕಾಂಗ್ರೆಸ್ ನ ಶ್ರೀವತ್ಸ ರವರು ಟ್ವೀಟ್ ಮಾಡಿದ್ದು,

  1. ಜೈನರ ಮೇಲೆ ಯಾವುದೇ ದಾಳಿ ನಡೆದಿಲ್ಲ. ಕನ್ನಡ ಪರ ಹೋರಾಟಗಾರರು ಹಿಂದಿ ಫ್ಲೆಕ್ಸ್ ಅನ್ನು ಮಾತ್ರ ತೆಗೆದಿದ್ದಾರೆ. ಅವರು ರೌಡಿಗಳಲ್ಲ.

2. ಜೈನ ಧರ್ಮವು ಪ್ರಾಸಂಗಿಕವಾಗಿದೆ. ಫ್ಲೆಕ್ಸ್‌ಗಳಲ್ಲಿ ಕನ್ನಡ ಇರಬೇಕು ಎಂಬುದು ನಿಯಮ.

3. ಅರೇಬಿಕ್ ಭಾಷೆಯಲ್ಲಿ ಎಳೆಯುವ ಮೂಲಕ ಕೋಮುವಾದದ ಪ್ರಯತ್ನ ಮಾಡಲಾಗುತ್ತಿದೆ.

ಆಧುನಿಕ ಮಹಾನಗರದ ಸಂಸದ, ಪರಿಹಾರಗಳನ್ನು ಕಂಡುಕೊಳ್ಳಬೇಕೆ ಹೊರತು ಪ್ರಚೋದಿಸಬಾರದು ಎಂದಿದ್ದಾರೆ.

“ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್ ಆಕ್ರಮಣಕಾರಿ ನಿರಂಕುಶ ಆಡಳಿತದ ಭಾಗವಾಗಿ ಹೊರಬಂದಿದೆ, ಇದು ಯಾವುದೇ ಕಾರಣಕ್ಕೂ ಸರಿ ಇಲ್ಲ” ಎಂದು ಸಂವಿಧಾನ ಉಳಿವಿಗಾಗಿ ಕರ್ನಾಟಕದ ಮುಖಂಡರಾದ ಕೆ.ಎಲ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.

ಫೇಸ್ ಬುಕ್ ನಲ್ಲಿ Karnataka Jains ಎಂಬ ಪೇಜ್ ನಿಂದ “ಕರ್ನಾಟಕದಲ್ಲಿ ಹಿಂದಿ ಹೇರಿಕೆ ಮಾಡುವವರನ್ನು ನಾವು ಬೆಂಬಲಿಸುವುದಿಲ್ಲ.” ಎಂದು ಪೋಸ್ಟ್ ಹಾಕಲಾಗಿದ್ದು ಅದಕ್ಕೆ ಬಹಳಷ್ಟು ಮೆಚ್ಚುಗೆಗಳು ವ್ಯಕ್ತವಾಗಿವೆ.

ಕಿಡಿಗೇಡಿಗಳೆಲ್ಲಾ ಸಂಸದರಾದರೆ ಏನಾಗುತ್ತೆ ಎಂಬುದಕ್ಕೆ ತೇಜಸ್ವಿ ಸೂರ್ಯನೇ ಸಾಕ್ಷಿ. ಯಾರೋ ಹಿಂದಿಯಲ್ಲಿ ಬೋರ್ಡು ಹಾಕಿಕೊಂಡಿದ್ದನ್ನು ಇನ್ಯಾರೋ ಹರಿದರಂತೆ. ಈ ಮಹಾಶಯ ಇಂತಹ ಸಂದರ್ಭವನ್ನು ಬಳಸಿಕೊಳ್ಳುತ್ತಿರುವ ರೀತಿ ನೋಡಿ….
ಇವನ ಟ್ವೀಟ್ ಎರಡು ಅರ್ಥ ಹೊರಡಿಸುತ್ತೆ
1) ಜೈನರೆಲ್ಲಾ ಹಿಂದಿ ಭಾಷಿಕರು ಅಂತ
2) ಕನ್ನಡಪರ ಹೋರಾಟಗಾರರು ಜೈನರ ವಿರೋಧಿಗಳು ಅಂತ.
ದಯವಿಟ್ಟು ಇಂತಹ ಕಿಡಿಗೇಡಿಗಳನ್ನು ನಂಬಬೇಡಿ. ಎಲ್ಲದ್ದಕ್ಕೂ ಧರ್ಮವನ್ನು ಎಳೆತಂದು ಬೆಂಕಿ ಹಚ್ಚುವುದು, ಗಲಭೆ ಹತ್ತಿಸುವುದು ಇವರುಗಳು ಲಾಗಾಯ್ತಿನಿಂದಲೂ ಮಾಡಿಕೊಂಡು ಬಂದಿರುವ ಚೇಷ್ಟೆಯೇ ಆಗಿದೆ.

ಜೈನರೇ ಆಗಿರಲಿ ಇನ್ಯಾವುದೇ ಧರ್ಮದವರೇ ಆಗಿರಲಿ ಕರ್ನಾಟಕದಲ್ಲಿ ಇದ್ದುಕೊಂಡು ವ್ಯಾಪಾರ/ವ್ಯವಹಾರ ಮಾಡುತ್ತಿದ್ದರೆ ಕನ್ನಡ ಕಲಿಯಲಿ, ಕನ್ನಡಿಗರಿಗೆ ಗೌರವ ಕೊಡಲಿ ಎಂದು ದರ್ಶನ್ ಜೈನ್ ಎಂಬುವವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಕನ್ನಡ ಹೋರಾಟಗಾರರ ಬಂಧನ ಮತ್ತು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯ ವಿರುದ್ಧ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...