Homeಕರ್ನಾಟಕಇತಿಹಾಸ ಪುಟ ಸೇರಿದ ಬಿಬಿಎಂಪಿ: ಗ್ರೇಟರ್‌ ಬೆಂಗಳೂರು ಅಡಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ

ಇತಿಹಾಸ ಪುಟ ಸೇರಿದ ಬಿಬಿಎಂಪಿ: ಗ್ರೇಟರ್‌ ಬೆಂಗಳೂರು ಅಡಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ

- Advertisement -
- Advertisement -

ಸೆಪ್ಟೆಂಬರ್ 1ರಂದು ‘ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ’ ವಿದಾಯ ಹೇಳಲಾಗಿದ್ದು, ಹೊಸದಾಗಿ ರೂಪುಗೊಂಡ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)’ ಅಡಿ ಐದು ಸ್ವತಂತ್ರ ನಗರ ಪಾಲಿಕೆಗಳು ರಚನೆಯಾಗಿವೆ.

‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024’ (ಜಿಬಿಜಿಎ) ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನು ‘ಗ್ರೇಟರ್‌ ಬೆಂಗಳೂರು ಪ್ರದೇಶ’ (ಜಿಬಿಎ) ಎಂದು ಗುರುತಿಸಿ 2025ರ ಮೇ 15ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದೀಗ ‘ಗ್ರೇಟರ್‌ ಬೆಂಗಳೂರು ಪ್ರದೇಶ’ದಲ್ಲಿ ಐದು ನಗರ ಪಾಲಿಕೆಗಳನ್ನು ರಚಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಬಿಬಿಎಂಪಿ ತನ್ನ ಅಸ್ತಿತ್ವ ಕಳೆದುಕೊಂಡಿದೆ.

ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಎಂಬ ಐದು ನಗರ ಪಾಲಿಕೆಗಳನ್ನು ರಚಿಸಲಾಗಿದೆ. ಉತ್ತಮ ಆಡಳಿತಾತ್ಮಕ ಅನುಭವ ಹೊಂದಿರುವ ಹಿರಿಯ ಅಧಿಕಾರಿಗಳು ಇವುಗಳನ್ನು ಮುನ್ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

“ನಗರ ಪಾಲಿಕೆಗಳಿಗೆ ಅಧಿಕಾರಿಗಳ ನೇಮಕಾತಿ ಕುರಿತು ನಾವು ಚರ್ಚಿಸಿದ್ದೇವೆ. ಪ್ರಸ್ತುತ ಸ್ಥಳೀಯವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ನೇಮಿಸಲು ನಿರ್ಧರಿಸಿದ್ದೇವೆ” ಎಂದು ಡಿಕೆಶಿ ತಿಳಿಸಿದ್ದಾರೆ.

ಪರಿಣಾಮಕಾರಿ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಹೆಚ್ಚು ಅನುಭವಿ ಆಡಳಿತಗಾರರಿಂದ ಆಯುಕ್ತರನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ತನ್ನ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಪ್ರಾಧಿಕಾರಗಳ ಸಮನ್ವಯ ಮತ್ತು ಮೇಲ್ವಿಚಾರಣೆ ಮಾಡಲಿದೆ. ಐದು ನಗರ ಪಾಲಿಕೆಗಳ ಕಾಮನ್ ಕೇಡರ್ ಆಗಿ ಕಾರ್ಯನಿರ್ವಹಿಸಲಿದೆ. ತನ್ನ ವ್ಯಾಪ್ತಿಗೆ ಯೋಜನಾ ಪ್ರಾಧಿಕಾರವಾಗಿ ಇರಲಿದೆ. ಈ ಮೂಲಕ ಪ್ರಮುಖ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಲಿದೆ ಎಂದು ಡಿಕೆಶಿ ಮಾಹಿತಿ ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ವಾರ್ಡ್‌ ವಿಂಗಡಣೆ ಮಾಡಲಾಗುವುದು. ನವೆಂಬರ್ 1, 2025ರಂದು ವಾರ್ಡ್‌ ಪುನರ್‌ ವಿಂಗಡಣೆ ಅಂತಿಮ ಅಧಿಸೂಚನೆ ಹೊರಡಿಸುತ್ತೇವೆ ಎಂದು ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದೇವೆ. ಅಷ್ಟೇ ಅಲ್ಲದೇ 30 ನವೆಂಬರ್ 2025ರಂದು ವಾರ್ಡ್‌ ಮೀಸಲಾತಿಯ ಅಂತಿಮ ಅಧಿಸೂಚನೆ ಹೊರಡಿಸುತ್ತೇವೆ ಎಂದಿದ್ದಾರೆ.

ಎಲ್ಲಾ ವಲಯಗಳಿಗೂ ಈಗಾಗಲೇ ಆ ವಲಯ ವ್ಯಾಪ್ತಿಯಲ್ಲಿರುವ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್‌ ರಾವ್‌ ಅವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಐದು ನಗರ ಪಾಲಿಕೆಯ ಆಯುಕ್ತರು ಕಾರ್ಯನಿರ್ವಹಿಸಲಿದ್ದಾರೆ. 27 ವಿಭಾಗಗಳನ್ನು 50 ವಿಭಾಗಗಳಾಗಿ ಪರಿವರ್ತನೆಯನ್ನು ಮಾಡಿದ್ದೇವೆ. 75 ಉಪ ವಿಭಾಗಗಳನ್ನು 150 ಉಪ ವಿಭಾಗಗಳಾಗಿ ಪರಿವರ್ತನೆಯನ್ನು ಮಾಡಿದ್ದೇವೆ. ನಾಳೆಯಿಂದ ಸಂಗ್ರಹವಾಗುವ ತೆರಿಗೆ ಸಂಬಂಧಪಟ್ಟ ಆಯಾ ನಗರ ಪಾಲಿಕೆಗೆ ಸೇರಲಿದೆ ಎಂದು ಮಂಗಳವಾರ (ಸೆ.2) ಡಿಕೆಶಿ ಹೇಳಿದ್ದಾರೆ.

ಪ್ರತಿಯೊಂದು ಪಾಲಿಕೆಗೂ ಅಂದಾಜು 100 ವಾರ್ಡ್‌ಗಳು ರಚನೆಯಾದರೂ ಬೆಂಗಳೂರು ನಗರದಲ್ಲಿ 500 ಹೊಸ ನಾಯಕರು ತಯಾರಾಗುವುದು ಒಂದು ದೊಡ್ಡ ಸಂದೇಶ. ಇದರಲ್ಲಿ 50% ಮಹಿಳೆಯರು ಇದ್ದರೇ ಶೇ.50ರಷ್ಟು ಪುರುಷರು ಇರುತ್ತಾರೆ ಎಂದಿದ್ದಾರೆ.

ಬಿಬಿಎಂಪಿ ಹೋಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಾರ್ಪೋರೇಶನ್ ವೃತ್ತದ ಬಳಿಯ ಬಿಬಿಎಂಪಿ ಕೇಂದ್ರ ಕಚೇರಿಯ ನಾಮಫಲಕ ಬದಲಾಗಿದೆ. ಮಂಗಳವಾರ ರಾತ್ರಿ ಬಿಬಿಎಂಪಿ ನಾಮಫಲಕ ತೆರವುಗೊಳಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬ ಫಲಕ ಅಳವಡಿಸಲಾಗಿದೆ.

ಒಳಮೀಸಲಾತಿಯಲ್ಲಿ ಅಲೆಮಾರಿಗಳಿಗೆ ಚಾರಿತ್ರಿಕ ದ್ರೋಹ! ತಬ್ಬಲಿ ಸಮುದಾಯಗಳಿಂದ ಬೃಹತ್ ‘ಬೆಂಗಳೂರು ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Good News for All. Why we fought for south india? All taxes will use in Southern life and issue to Visa card for all visitors and job seekers who would like. It is avoid for unwanted people entry and Crimes. We feel as comfortable in our motherland.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...